<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಸೂಪರ್ ಎಲ್ ನೀನೋ ಎಫೆಕ್ಟ್ ಗೆ ರಾಜ್ಯ ಸಜ್ಜಾಗಬೇಕು :ಡಿಸಿಎಂ ಜಿ.ಪರಮೇಶ್ವರ್ ಎಚ್ಚರಿಕೆ

ಸೂಪರ್ ಎಲ್ ನೀನೋ ಎಫೆಕ್ಟ್ ಗೆ ರಾಜ್ಯ ಸಜ್ಜಾಗಬೇಕು :ಡಿಸಿಎಂ ಜಿ.ಪರಮೇಶ್ವರ್ ಎಚ್ಚರಿಕೆ
Summary: The state government has emphasized on precautionary measures to face the challenges that may arise due to the possible Super El Nino effect. In this context, Deputy Chief Minister G. Parameshwar held an important meeting with his authorities and had a comprehensive discussion on many important issues including lack of rainfall, availability of drinking water, provision of fodder for cattle.

BELAGAVI NEWS

ಸೂಪರ್ ಎಲ್ ನೀನೋ ಎಚ್ಚರಿಕೆ : ಸಂಭವನೀಯ ಬರ ಪರಿಸ್ಥಿತಿಗೆ ಈಗಲೇ ಸಜ್ಜಾಗಿ ಎಂದ ಡಿಸಿಎಂ ಜಿ.ಪರಮೇಶ್ವರ್

ಬೆಂಗಳೂರುದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗುವ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದ್ದು, ಕುಡಿಯುವ ನೀರು, ಕೃಷಿ, ಜಾನುವಾರುಗಳ ಮೇವು, ಆರೋಗ್ಯ ಹಾಗೂ ತುರ್ತು ನಿರ್ವಹಣೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಜಾರಿಗೊಳಿಸಬೇಕು ಎಂದು ಅವರು ತಿಳಿಸಿದರು.

Sponsored

ಸೂಪರ್ ಎಲ್ ನೀನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಜನಜೀವನದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರದಂತೆ ಅಧಿಕಾರಿಗಳು ಮುಂಚಿತ ಸಿದ್ಧತೆ ನಡೆಸಬೇಕು ಎಂದು ಡಿಸಿಎಂ ಸೂಚಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಂಭವನೀಯ ಸವಾಲುಗಳನ್ನು ಎದುರಿಸಲು ಸಮಗ್ರ ಕಾರ್ಯ ಯೋಜನೆ ರೂಪಿಸುವ ಅಗತ್ಯವಿದೆಯೆಂದು ಒತ್ತಿ ಹೇಳಿದರು.

ಸೂಪರ್ ಎಲ್ ನೀನೋ ಎಚ್ಚರಿಕೆ : ಮಳೆ ಕೊರತೆ, ಬರ ಭೀತಿ ಎದುರಿಸಲು ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ

ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಸೂಪರ್ ಎಲ್ ನೀನೋ ಪರಿಣಾಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಈವರೆಗೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಮಾಹಿತಿ ಪಡೆದ ಅವರು, ಮಳೆ ಕೊರತೆ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಒದಗಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಾಗತಿಕ ಹವಾಮಾನ ವೈಪರಿತ್ಯದ ಭಾಗವಾಗಿ ಸೂಪರ್ ಎಲ್ ನೀನೋ ಪರಿಣಾಮ ರಾಜ್ಯದ ಮೇಲೆ ಬೀರಬಹುದಾದ ಪರಿಣಾಮಗಳು, ಮಳೆಯ ಅಭಾವದಿಂದ ಜನರು ಎದುರಿಸಬಹುದಾದ ಸಂಕಷ್ಟಗಳು ಹಾಗೂ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಸಭೆಗಳಲ್ಲಿ ಸುದೀರ್ಘ ಚರ್ಚೆ ನಡೆಯಿತು.

Sponsored

ಸಂಭವನೀಯ ಸಂಕಷ್ಟಗಳನ್ನು ಎದುರಿಸಲು ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ಡಿಸಿಎಂ ಸೂಚನೆ ನೀಡಿದರು. ಜನರು ಮತ್ತು ರೈತರು ಯಾವುದೇ ತೊಂದರೆ ಅನುಭವಿಸದಂತೆ ನೀರು, ಮೇವು ಹಾಗೂ ಅಗತ್ಯ ಮೂಲ ಸೌಕರ್ಯಗಳ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬರ ಭೀತಿಗೆ ಜಿಲ್ಲಾವಾರು ಕಾರ್ಯಯೋಜನೆ : ಕುಡಿಯುವ ನೀರು, ಮೇವು, ಕೃಷಿ ರಕ್ಷಣೆಗೆ ಡಿಸಿಎಂ ಪರಮೇಶ್ವರ್ ಸೂಚನೆ.

ಸಂಭವನೀಯ ಸೂಪರ್ ಎಲ್ ನೀನೋ ಪರಿಣಾಮ ಹಾಗೂ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಜಿಲ್ಲೆಗಳು ಮುನ್ನೆಚ್ಚರಿಕ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು ಒದಗಿಸುವುದು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

Sponsored

ಇದಲ್ಲದೆ, ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲೆ ನಿರಂತರ ನಿಗಾ ವಹಿಸುವ ಅಗತ್ಯವಿದೆ ಎಂದು ಡಿಸಿಎಂ ಒತ್ತಿ ಹೇಳಿದರು. ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ತ್ವರಿತ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಸಂಭವನೀಯ ಹವಾಮಾನ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಚಿತ ಸಿದ್ಧತೆ ಅಥವಾ ಸಮಗ್ರ ಯೋಜನೆಯೇ ಪ್ರಮುಖ ಅಸ್ತ್ರ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಬರ ಪರಿಸ್ಥಿತಿ ನಿರ್ವಹಣೆ : ಕೊಳವೆಬಾವಿ ಅನುಮತಿ ತ್ವರಿತವಾಗಿ ನೀಡಲು ಆದೇಶ

ಸಂಭವನೀಯ ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಈ ಮೂಲಕ ಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಮಹತ್ವದ ಸೂಚನೆ ನೀಡಿದ್ದಾರೆ. ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ನೀಡಲು ಅನುಮತಿಗಳನ್ನು ತ್ವರಿತ ಗತಿಯಲ್ಲಿ ಒದಗಿಸಬೇಕು, ಯಾವುದೇ ರೀತಿಯ ವಿಳಂಬವಾಗಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

Sponsored

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದ ಪರಿಹಾರ ಕ್ರಮಗಳಿಗೆ ಆದ್ಯತೆ ನೀಡಬೇಕೆಂದು ಅವರು ಹೇಳಿದರು.

ಪ್ರಸ್ತುತ ರಾಜ್ಯದ 122 ತಾಲೂಕುಗಳಲ್ಲಿ, ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, 136 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜೊತೆಗೆ 789 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದ್ದು, 666 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜನರಿಗೆ ನೀರಿನ ಕೊರತೆ ಆಗದಂತೆ ತಕ್ಷಣದ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಭೆಯಲ್ಲಿ ಒತ್ತಿ ಹೇಳಲಾಗಿದೆ.

Also Read:

Sponsored

ಮಾವು ಬೆಳೆಗಾರರ ಪರ ಕೇಂದ್ರ ಸರ್ಕಾರ - ತೋತಾಪುರಿ ಮಾವಿಗೆ ಸಹಾಯಧನ ಘೋಷಣೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online