belagavi news :
ಬೆಳಗಾವಿಯಲ್ಲಿ ನೀಟ್ ಅಕ್ರಮ ವಿರೋಧಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
ನೀಟ್ ಪರೀಕ್ಷೆಯ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಮನ್ ಸೇಠ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನಾಕಾರರು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ, ಮೃತ ವಿದ್ಯಾರ್ಥಿಗಳ ಕುಟುಂಬ ಗಳಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ರೂಪಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.
ಬೆಳಗಾವಿ ನೀಟ್ ಪ್ರತಿಭಟನೆ, ನೀಟ್ ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತಾಗಿ ವಿದ್ಯಾರ್ಥಿಗಳ ಆಕ್ರೋಶ ಮುಂದುವರೆದಿದ್ದು, ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸ್ಥಳೀಯ ಮಟ್ಟದಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಬೆಳಗಾವಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮಳೆಯ ನಡುವೆಯೂ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸ್ಥಳೀಯ ಮಟ್ಟದಲ್ಲೂ ಬೆಂಬಲ ವ್ಯಕ್ತವಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಬೆಳಗಾವಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮಳೆಯ ನಡುವೆಯೂ ಮುಂದುವರೆಯಿತು. ಮಳೆ ಸುರಿದರೂ
ಪ್ರತಿಭಟನಾಕಾರರು ಸ್ಥಳದಿಂದ ಕದಲದೆ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು.
ನೀಟ್ ಪರೀಕ್ಷೆಯ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಖಾಸಗಿ ಮಾಧ್ಯಮ ವೊಂದರಲ್ಲಿ ಮಾತನಾಡಿದ ವಿದ್ಯಾರ್ಥಿನಿ ಸಿಬಾ ಮುಲ್ಲಾ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಮೊದಲ ಬಾರಿ ನೀಟ್ ಪರೀಕ್ಷೆಯಲ್ಲಿ 350 ಅಂಕಗಳು ಬಂದಿದ್ದರೆ, ಎರಡನೇ ಬಾರಿ ಕೇವಲ 190 ಅಂಕಗಳು ಬಂದಿದ್ದು ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
"ಕೇಂದ್ರ ಸರ್ಕಾರದ ವೈಫಲ್ಯದಿಂದ ನನ್ನ ಒಂದು ವರ್ಷ ವ್ಯರ್ಥವಾಗಿದೆ. ಈಗ ಮತ್ತೆ ಮುಂದಿನ ವರ್ಷ ನೀಟ್ ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ಬಂದಿದೆ. ನನ್ನಂತೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ನ್ಯಾಯಕ್ಕಾಗಿ ಈ ಹೋರಾಟದಲ್ಲಿ ಭಾಗಿಯಾಗಿದ್ದೇನೆ ಎಂದು ಸಿಬಾ ಮುಲ್ಲಾ ಹೇಳಿದರು.
ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.