<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

11ನೇ ನೀತಿ ಆಯೋಗ ಸಭೆಗೆ ಚಾಲನೆ : ಮೋದಿ ಅಧ್ಯಕ್ಷತೆ, ರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತಿ

11ನೇ ನೀತಿ ಆಯೋಗ ಸಭೆಗೆ ಚಾಲನೆ : ಮೋದಿ ಅಧ್ಯಕ್ಷತೆ, ರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತಿ
Summary: The 11th Governing Council meeting of the 11th NITI Aayog, chaired by Prime Minister Narendra Modi, is being attended by chief ministers of various states, central ministers and senior officials.

belagavi news :

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ರಾಷ್ಟ್ರಪತಿ ಭವನ ಸಾಂಸ್ಕೃತಿಕ ಕೇಂದ್ರದಲ್ಲಿಂದು 11ನೇ NITI ಆಯೋಗ ಆಡಳಿತ ಮಂಡಳಿ ಸಭೆ ಆರಂಭವಾಗಿದೆ.

ದೇಶದ ಅಭಿವೃದ್ಧಿ ಕಾರ್ಯತಂತ್ರ, ಕೇಂದ್ರ ರಾಜ್ಯಗಳ ಸಹಕಾರ ಹಾಗೂ 'ವಿಕಚಿತ ಭಾರತ 2047' ಗುರಿ ಸಾಧನೆ ಕುರಿತು ಚರ್ಚಿಸಲು ಆಯೋಜಿಸಲಾದ ಈ ಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು ಹಾಗೂ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದಾರೆ. ಜೊತೆಗೆ ನೀತಿ ಆಯೋಗದ ಉಪಾಧ್ಯಕ್ಷರು, ಸದಸ್ಯರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಹ ಸಭೆಯಲ್ಲಿ ಉಪಸ್ಥಿತರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಹಿರಿಯ ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Sponsored

ಸಭೆಯಲ್ಲಿ ಯೋಗಿ ಆದಿತ್ಯನಾಥ್, ಹಿಮಂತ ಬಿಸ್ವಾ ಶರ್ಮಾ, ಸಾಮ್ರಾಟ್ ಚೌಧರಿ, ರೇಖಾ ಗುಪ್ತ ಹಾಗೂ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದಾರೆ.

ದೇಶದ ಸಮಗ್ರ ಅಭಿವೃದ್ಧಿ,ಮೂಲಸೌಕರ್ಯ ವೃದ್ಧಿ, ಉದ್ಯೋಗ ಸೃಷ್ಟಿ, ಹೂಡಿಕೆ ಆಕರ್ಷಣೆ ಮತ್ತು ರಾಜ್ಯಗಳ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸುವ ನಿರೀಕ್ಷೆ ಇದೆ. ಕೇಂದ್ರ ಹಾಗೂ ರಾಜ್ಯಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವದ್ದಾಗಿದೆ.

ಹೊಸದಾಗಿ ಆಯ್ಕೆಗೊಂಡ ಪಶ್ಚಿಮ ಬಂಗಾಳ ಸಿಎಂ ಸುವೆಂದು ಅಧಿಕಾರಿ, ತಮಿಳುನಾಡು ಸಿಎಂ ಸಿ.ಜೋಸೆಫ್ ವಿಜಯ್,ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇರಳ ಸಿಎಂ ವಿಡಿ ಸತಿಸನ್ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರು ಹಾಜರಿದ್ದಾರೆ.

ಈ ವರ್ಷದ ನೀತಿ ಆಯೋಗ ಆಡಳಿತ ಮಂಡಳಿ ಸಭೆಯು 'ವಿಕಸಿತ ಭಾರತ 2047 ಕ್ಕಾಗಿ ಸಮಗ್ರ ಮಾನವ ಅಭಿವೃದ್ಧಿ' ಎಂಬ ಧ್ಯೇಯದೊಂದಿಗೆ ನಡೆಯುತ್ತಿದೆ. ವಯಸ್ಸು, ಪ್ರದೇಶ, ಲಿಂಗ ಅಥವಾ ಸಾಮಾಜಿಕ ಆರ್ಥಿಕ ಹಿನ್ನೆಲೆಯನ್ನು ಲೆಕ್ಕಿಸದೆ ದೇಶದ ಪ್ರತಿಯೊಬ್ಬ ನಾಗರಿಕರ ಯೋಗ ಕ್ಷೇಮ ಮತ್ತು ಸರ್ವಾಂಗಿನ ಅಭಿವೃದ್ಧಿಗೆ ಒತ್ತು ನೀಡುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.

Sponsored

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಸುಸ್ಥಿರ ಉದ್ಯೋಗವಕಾಶಗಳ ಸೃಷ್ಟಿಗೆ ಉತ್ತೇಜಿನ ನೀಡುವ ಕುರಿತು ರಾಜ್ಯಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಭಿವೃದ್ಧಿಯ ಲಾಭಗಳು ಸಮಾಜದ ಎಲ್ಲಾ ವರ್ಗಗಳಿಗೂ ತಲುಪುವಂತೆ ಮಾಡುವ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚಿಂತನೆ ನಡೆಯಲಿದೆ.

'ಸಮಗ್ರ ಮಾನವ ಅಭಿವೃದ್ಧಿ' ಚೌಕಟ್ಟು ನಾಲ್ಕು ಪ್ರಮುಖ ಸ್ತಂಭಗಳ ಮೇಲೆ ಆಧಾರಿತವಾಗಿದೆ. ಮೊದಲನೆಯದಾಗಿ,ಮೂಲಭೂತ ಮಾನವ ಬಂಡವಾಳ ನಿರ್ಮಾಣ ಮತ್ತು ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು. ಎರಡನೆಯದಾಗಿ, ಉತ್ಪಾದಕ ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ವಿಕೇಂದ್ರಿಕೃತ ಬೆಳವಣಿಗೆಯನ್ನು ಉತ್ತೇಜಿಸುವುದು. ಮೂರನೆಯದಾಗಿ, ಆರೋಗ್ಯ, ಘೋಷಣೆ ಮತ್ತು ನಾಗರಿಕ ಸಮಗ್ರ ಕಾರ್ಯಕ್ಷೇಮಕ್ಕೆ ಆದ್ಯತೆ ನೀಡುವುದು. ನಾಲ್ಕನೇಯದಾಗಿ,ಎಲ್ಲರಿಗೂ ಸಮಾನ ಅವಕಾಶಗಳು ಹಾಗೂ ಗಣತಿಯ ಜೀವನವನ್ನು ಖಾತ್ರಿ ಪಡಿಸುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

'ವಿಕಸಿತ ಭಾರತ 2047' ಗುರಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ, ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ದೇಶದ ಪ್ರಗತಿಯ ಪ್ರಮುಖ ಪತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವದ ವೇದಿಕೆಯಾಗಲಿದೆ.

11ನೇ ನೀತಿ ಆಯೋಗ ಆಡಳಿತ ಮಂಡಳಿ ಸಭೆಯಲ್ಲಿ ಸಮಗ್ರ ಮಾನವ ಅಭಿವೃದ್ಧಿಯ ಜೊತೆಗೆ ಉತ್ತಮ ಆಡಳಿತ, ಡಿಜಿಟಲ್ ಸಾರ್ವಜನಿಕ ಮೂಲ ಸೌಕರ್ಯ, ವಿವಿಧ ವಲಯಗಳ ನಡುವಿನ ಪಾಲುದಾರಿಕೆಗಳು ಹಾಗೂ ಡೇಟಾ ಆಧಾರಿತ ಆಡಳಿತ ವ್ಯವಸ್ಥೆಗಳನ್ನು ಬಲಪಡಿಸುವ ಕುರಿತು ವಿಸ್ತೃತ ಚರ್ಚೆ ನಡೆಯಲಿದೆ. ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿಯ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಸಮನ್ವಹಿತ ಹಾಗೂ ಸಹಯೋಗದ ವಿಧಾನವನ್ನು ರೂಪಿಸುವುದಕ್ಕೆ ಸಭೆಯಲ್ಲಿ ವಿಶೇಷವಾತ್ತು ನೀಡಲಾಗುತ್ತಿದೆ.

Sponsored

ಸಮಾನ ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಪರಿಣಾಮಕಾರಿ ಸಹಕಾರವನ್ನು ಹೆಚ್ಚಿಸುವ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ತಂತ್ರಜ್ಞಾನ ಆಧಾರಿತ ಆಡಳಿತ, ಸೇವೆಗಳ ಸುಲಭ ಲಭ್ಯತೆ ಹಾಗೂ ಅಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಕಾರ್ಯತಂತ್ರಗಳ ಕುರಿತು ರಾಜ್ಯಗಳ ಭಿನ್ನಾಭಿಪ್ರಾಯಗಳನ್ನು ಕೂಡ ಪರಿಗಣಿಸಲಾಗುತ್ತದೆ.

ಇದರ ಜೊತೆಗೆ, 2025ರ ಡಿಸೆಂಬರ್ 26 ರಿಂದ 28ರ ವರೆಗೆ ನಡೆದ ಐದನೇ ಅಂತರಾಷ್ಟ್ರೀಯ ಮುಖ್ಯಮಂತ್ರಿ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ನಡೆಯಲಾದ ಶಿಫಾರಸುಗಳ ಮೇಲು ನೀತಿ ಆಯೋಗದ ಆಡಳಿತ ಮಂಡಳಿ ಗಮನಹರಿಸಲಿದೆ ಎಂದು ತಿಳಿಸಲಾಗಿದೆ. ಆ ಸಮ್ಮೇಳನದಲ್ಲಿ ಆಡಳಿತ ಸುಧಾರಣೆ, ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ, ಹೂಡಿಕೆ ಪ್ರೋತ್ಸಾಹ, ಕೃಷಿ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ರೂಪಿಸಲಾದ ಶಿಫಾರಸ್ಸುಗಳನ್ನು ಈ ಸಭೆಯಲ್ಲಿ ಪರಿಶೀಲಿಸಿ ಮುಂದಿನ ಕಾರ್ಯ ಯೋಜನೆ ಕುರಿತು ಚರ್ಚೆ ನಡೆಸುವ ನಿರೀಕ್ಷೆ ಇದೆ.

'ವಿಕಸಿತ ಭಾರತ 2047'ಗುರಿ ಸಾಧನೆಗಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಬಲಿಷ್ಠ ಸಹಕಾರ, ಪರಿಣಾಮಕಾರಿ ಆಡಳಿತ ವ್ಯವಸ್ಥೆ ಹಾಗೂ ಜನಕೇಂದ್ರಿತ ಅಭಿವೃದ್ಧಿ ನೀತಿಗಳಿಗೆ ಮತ್ತಷ್ಟು ಉತ್ತೇಜನ ನೀಡುವ ವೇದಿಕೆಯಾಗಿ ಈ ಸಭೆ ಕಾರ್ಯ ನಿರ್ವಹಿಸುತ್ತಿದೆ.

Also Read:

Sponsored

ಜೈಲು ಜೀವನದ ಕಥೆ ಪುಸ್ತಕವಾಗುತ್ತಾ? ಪವಿತ್ರ ಗೌಡ ಆತ್ಮಚರಿತ್ರೆ ಬರೆಯಲು ಮುಂದಾಗಿದ್ದಾರೆ.

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online