Belagavi News:
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿದರು.
ನಗರದ ಪ್ರಮುಖ ದೇವಾಲಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸೋಮಣ್ಣ, ದೇಶದ ಅಭಿವೃದ್ಧಿ, ಸುಶಾಸನ ಹಾಗೂ ಜನ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆಗಳನ್ನು ದಾಖಲಿಸಿದೆ ಎಂದು ಅವರು ಹೇಳಿದರು.
ಮೋದಿ ಸರ್ಕಾರದ 12 ವರ್ಷಗಳ ಆಡಳಿತಾವಧಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಡಿಜಿಟಲ್ ಕ್ರಾಂತಿ, ರೈಲ್ವೆ ಆಧುನಿಕರಣ, ಬಡವರ ಕಲ್ಯಾಣ ಯೋಜನೆಗಳು ಹಾಗೂ ಆತ್ಮ ನಿರ್ಧಾರ ಭಾರತ ಅಭಿಯಾನ ಸೇರಿದಂತೆ ಹಲವು ಮಹತ್ವಕಾಂಕ್ಷಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ ಎಂದು ಸೋಮಣ್ಣ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಭಾಗವಹಿಸಿ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಸ್ಮರಿಸಿದರು. ದೇಶದ ಸಮಗ್ರ ಅಭಿವೃದ್ಧಿ ಮತ್ತು ಜಲ ಸೇವೆಯ ಸಂಕಲ್ಪ ದೊಂದಿಗೆ ಪ್ರಧಾನಿ ಮೋದಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ವಿಶೇಷ ಪೂಜೆಯಲ್ಲಿ ಪ್ರಾರ್ಥಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಅವರ ಆಡಳಿತಕ್ಕೆ 12 ವರ್ಷಗಳು ಪೂರ್ಣಗೊಂಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮೂಡಿಸಿದೆ.
ನರೇಂದ್ರ ಮೋದಿ 12 ವರ್ಷಗಳ ಆಡಳಿತ ಸಂಭ್ರಮ : ಬೆಂಗಳೂರಿನಲ್ಲಿ ವಿ.ಸೋಮಣ್ಣ ವಿಶೇಷ ಪೂಜೆ, ಮೋದಿ ಆರೋಗ್ಯಕ್ಕಾಗಿ ಪ್ರಾರ್ಥನೆ:
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಐತಿಹಾಸಿಕ ಸಂಭ್ರಮದಲ್ಲಿ ,ಬೆಂಗಳೂರಿನಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ನಗರದ ವಿಜಯನಗರದ ಆರ್ ಪಿಸಿ ಲೇಔಟ್ ನಲ್ಲಿರುವ ಸಂಕಷ್ಟ ಹರ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಸೋಮಣ್ಣ , ಪ್ರಧಾನಿ ಮೋದಿ ಅವರ ಆಯುಷ್ಯ, ಆರೋಗ್ಯ ವೃದ್ಧಿಯಾಗಿ ಹಾಗೂ ದೇಶದ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯದಲ್ಲಿ ಧಾರ್ಮಿಕ ವಾತಾವರಣ ನಿರ್ಮಾಣವಾಗಿತ್ತು.
ವಿಶೇಷ ಪೂಜೆಯಲ್ಲಿ ವಿಜಯನಗರ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಅವರು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿ ನಿರಂತರವಾಗಲಿ ಎಂದು ಪ್ರಾರ್ಥಿಸಿದರು.
ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ವಿ ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘ ನಾಯಕತ್ವವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಅವರ ಆಡಳಿತ ಅವಧಿಯಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಮಹತ್ವದ ಸ್ಥಾನ ಪಡೆದುಕೊಂಡಿದ್ದು , ಅಭಿವೃದ್ಧಿ ಮೂಲ ಸೌಕರ್ಯ ಹಾಗೂ ಜನಕಲ್ಯಾಣ ಯೋಜನೆಗಳಲ್ಲಿ ಅಪೂರ್ವ ಸಾಧನೆ ಖಂಡಿತ ಎಂದು ಅವರು ಹೇಳಿದರು.
ಮೋದಿ ಸರ್ಕಾರದ ಹನ್ನೆರಡು ವರ್ಷಗಳ ಆಡಳಿತವು ದೇಶದ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿದ್ದು, ಮುಂದಿನ ದಿನಗಳಲ್ಲೂ ಅವರ ನಾಯಕತ್ವದಲ್ಲಿ ಭಾರತ ಇನ್ನಷ್ಟು ಪ್ರಗತಿ ಸಾಧಿಸಲಿದೆ ಎಂದು ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಸಂಪುಟ ಪುನರ್ ರಚನೆ ಚರ್ಚೆಗೆ ಸ್ಪಷ್ಟನೆ ನೀಡಿದ ವಿ.ಸೋಮಣ್ಣ- "ಹೊಸ ಜವಾಬ್ದಾರಿ ಬಗ್ಗೆ ನನಗೆ ಮಾಹಿತಿ ಇಲ್ಲ" :
ಕೇಂದ್ರ ಸಚಿವ ಸಂಪುಟ ಪುನರ್ ರಚನೆ ವೇಳೆ ಸಚಿವ ವಿ ಸೋಮಣ್ಣ ಅವರಿಗೆ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿ ಅಥವಾ ಹೆಚ್ಚಿನ ಹೊಣೆಗಾರಿಕೆ ವಹಿಸುವ ಸಾಧ್ಯತೆಗಳು ಕುರಿತು ಹರಿದಾಡುತ್ತಿರುವ ಸುದ್ದಿಗಳಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದರು, "ಕರ್ನಾಟಕ ರಾಜಕಾರಣದಲ್ಲಿ ನಾನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಆದರೆ ಸದ್ಯ ಹರಿದಾಡುತ್ತಿರುವ ಹೊಸ ಜವಾಬ್ದಾರಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ" ಎಂದು ಹೇಳಿದ್ದಾರೆ.
ಅವರು ಮುಂದುವರೆದು,"ನಾನು ಬೆಳಗ್ಗೆ ಎದ್ದರೆ ಸಂಜೆಯವರೆಗೆ ನಿರಂತರವಾಗಿ ದೇಶಾದ್ಯಂತ ಸಂಚರಿಸಿ ನನ್ನ ಇಲಾಖೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿರುತ್ತೇನೆ. ಪ್ರಸ್ತುತ ನನ್ನ ಗಮನ ಸಂಪೂರ್ಣವಾಗಿ ಇಲಾಖೆಯ ಕಾರ್ಯ ನಿರ್ವಹಣೆಯ ಮೇಲೆ ಇದೆ" ಎಂದು ಸ್ಪಷ್ಟಪಡಿಸಿದ್ದರು.
ರಾಜಕೀಯ ನಿಲುವನ್ನು ಪುನರಕ್ಷರಿಸಿದ ಸಚಿವ ಸೋಮಣ್ಣ, "ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು ಎಂಬುದು ನಮ್ಮ ಹಿರಿಯ ನಾಗರಿಕರಿಂದ ನಾವು ಕಲಿತ ಪಾಠ . ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಯಾವುದೇ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದೇ ನನ್ನ ಕರ್ತವ್ಯ" ಎಂದು ಹೇಳಿದರು. ಜೊತೆಗೆ ಪುನರ್ ರಚನೆ ಕುರಿತು ಊಹಾಪೋಹಗಳಿಗೆ ಅಂತ್ಯ ಆಡುವ ರೀತಿಯಲ್ಲಿ ಸಚಿವರು ಈ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
Also Read:
ಗ್ರೇಟರ್ ನೋಯ್ಡಾದಲ್ಲಿ ಅಗ್ನಿ ದುರಂತ! ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ಸರಕುಗಳು ನಾಶ