Belagavi News:
ಬೆಂಗಳೂರು: ಬರ್ತಡೇ ಪಾರ್ಟಿ ಆಚರಿಸುವ ನೆಪದಲ್ಲಿ ಬೆಳಗಾವಿ ಜಿಲ್ಲೆಯ ಯುವತಿಯನ್ನು ಕರೆಸಿ ಅತ್ಯಾಚಾರ ಎಸಗಿರುವ ಆರೋಪ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ಯುವತಿ ನೀಡಿದ ದೂರಿದ ಮೇರೆಗೆ ಪೊಲೀಸರು ಐವರು ಆರೋಪಿಗಳನ್ನು ಸಂಬಂಧಿಸಿದ್ದಾರೆ.
ಬಂಧಿತರನ್ನು ಸೋಮಶೇಖರ್, ಅಂಬರೀಶ್, ಪ್ರದೀಪ್, ರಾಮಪ್ಪ, ಹಾಗೂ ಜಗದೀಶ್ ಎಂದು ಗುರುತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ. ಹದಣ್ಣ ನವರ್, ಯುವತಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಸೋಮಶೇಖರ್ ಯುವತಿಗೆ ಪರಿಚಿತನಾಗಿದ್ದ. ಎರಡು ದಿನಗಳ ಹಿಂದೆ ಯುವತಿಯ ಹುಟ್ಟುಹಬ್ಬವಾಗಿದ್ದ ಹಿನ್ನೆಲೆಯಲ್ಲಿ ಬರ್ತ್ ಡೇ ಪಾರ್ಟಿ ನೀಡುವುದಾಗಿ ಹೇಳಿ ತಲಘಟ್ಟಪುರಕ್ಕೆ ಆಹ್ವಾನಿಸಿದ್ದ ಎನ್ನಲಾಗಿದೆ. ದೇವನಹಳ್ಳಿಯಲ್ಲಿ ವಾಸವಾಗಿದ್ದ, ಯುವತಿ ಆತನ ಮಾತು ನಂಬಿ ಅಲ್ಲಿಗೆ ತೆರೆಳಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಳಿಕ "ನನ್ನ ಸ್ನೇಹಿತರೂ ಬಂದಿದ್ದಾರೆ, ಎಲ್ಲರೂ ಸೇರಿ ಪಾರ್ಟಿ ಮಾಡೋಣ'' ಎಂದು ಹೇಳಿ ತನ್ನ ಕೊಠಡಿಗೆ ತಲೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಅಲ್ಲಿ ಪಾರ್ಟಿ ನಡೆಯುವ ಮೇಲೆ ಯುವತಿಗೆ ನೀಡದ ಜ್ಯೂಸ್ ನಲ್ಲಿ ಮತ್ತು ಬರುವ ಔಷಧ ಬರೆಸಲಾಗಿತ್ತು ಎಂದು ಆರೋಪಿಸಲಾಗಿದೆ.
ದೂರಿನ ಪ್ರಕಾರ, ಜ್ಯೂಸ್ ಸೇವಿಸಿದ ಬಳಿಕ ಯುವತಿ ಅರೆಪ್ರಜ್ಞಾವಸ್ಥೆಗೆ ಜಾರಿದ್ದಾಗ, ಆರೋಪಿಗಳಲ್ಲೊಬ್ಬನಾದ ಅಂಬರೀಶ್ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ತಲಘಟ್ಟಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು. ಘಟನೆಯ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರಿಸಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಆರೋಪಗಳಾಗಿರುಯೇ ಪರಿಗಣಿಸಲಾಗುತ್ತದೆ.
ಪೊಲೀಸರ ಮಾಹಿತಿ ಪ್ರಕಾರ ಆರೋಪಿಗಳ ಗುಂಪಿನಿಂದ ಬಚಾವಾದ ಸಂತ್ರಸ್ತೆ ಆತಂಕದ ನಡುವೆ ಯೋ ಧೈರ್ಯದಿಂದ ತುರ್ತು ಸಹಾಯವಾಣಿಯನ್ನು ಸಂಪರ್ಕಿಸಿ ತನಗಾದ ದೌರ್ಜನ್ಯದ ಬಗ್ಗೆ ದೂರು ನೀಡಿದ್ದಾಳೆ. ಕರೆ ಸ್ವೀಕರಿಸಿದ ತಲಘಟ್ಟಪುರ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಯುವತಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ತೆರೆದೊಯ್ದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಶೇಖರ್, ಅಂಬರೀಶ್, ಪ್ರದೀಪ್, ರಾಮಪ್ಪ ಹಾಗೂ ಜಗದೀಶ್ ಎಂಬ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ತಲಘಟ್ಟಪುರ ಪೊಲೀಸರು, ಘಟನೆಯ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಗಳನ್ನು ಅಲ್ಪಾವಧಿಯಲ್ಲೇ ಬಂದಿಸಲು ಸಾಧ್ಯವಾಗಿದ್ದು. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆರೋಪಿಗಳ ಸತ್ಯಾಸತ್ಯತೆ ಕುರಿತು ತನಿಖೆ ಮುಂದುವರಿದಿದ್ದು, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಅವು ಆರೋಪಗಳಾಗಿಯೇ ಪರಿಗಣಿಸಲಾಗುತ್ತದೆ.