Belagavi News:
ನರ್ಮದಾ - ಕ್ಷಿಪ್ರ ಪೈಪ್ ಲೈನ್ ನಲ್ಲಿ ಸಂಭವಿಸಿದ ಭಾರಿ ಸ್ಪೋಟದಿಂದ ನೀರು ಮುಗಿಲೆತ್ತರಕ್ಕೆ ಚಿಮ್ಮಿದ ಘಟನೆ ಗಮನ ಸೆಳೆದಿದೆ. ಊಟದ ಪರಿಣಾಮ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಕಾರಂಜಿಯಂತೆ ಮೇಲಕ್ಕೆ ಚಿಮ್ಮಿದ್ದು, ತಳದಲ್ಲಿದ್ದವರು ಈ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ಸಾವಿರಾರು ಮಂದಿ ಅದನ್ನು ವೀಕ್ಷಿಸಿದ್ದಾರೆ. ಪೈಪ್ ಲೈನ್ ಒಡೆದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಹರಿದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪ್ರಾಥಮಿಕ ಮಾಹಿತಿ ಪ್ರಕಾರ, ತಾಂತ್ರಿಕ ದೋಷ ಅಥವಾ ಅಧಿಕ ಒತ್ತಡದಿಂದ ಪೈಪ್ ಲೈನ್ ಸ್ಪೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚಲು ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ನರ್ಮದಾ - ಕ್ಷಿಪ್ರ ಯೋಜನೆ ಮಧ್ಯಪ್ರದೇಶದ ಪ್ರಮುಖ ಜಲಸಂಪನ್ಮೂಲ ಯೋಜನೆಗಳಲ್ಲಿ ಒಂದಾಗಿದ್ದು, ಈ ಪೈಪ್ ಲೈನ್ ಮೂಲಕ ಹಲವು ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಾಗುತ್ತದೆ. ಊಟದಿಂದ ನೀರಿನ ವ್ಯರ್ಥ ಅರಿವು ಉಂಟಾಗಿದ್ದು, ಸ್ಥಳೀಯ ಆಡಳಿತ ತುರ್ತು ದುರಸ್ತಿ ಕಾರ್ಯ ಕೈಗೊಂಡಿದೆ.
ಈ ಘಟನೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.
ನರ್ಮದಾ - ಕ್ಷಿಪ್ರ ಪೈಪ್ ಲೈನ್ ಸ್ಪೋಟ :
ಇದ್ದಕ್ಕಿದ್ದಂತೆ ನರ್ಮದಾ - ಕ್ಷಿಪ್ರ ಪೈಪ್ ಲೈನ್ ಸ್ಪೋಟಗೊಂಡ ಪರಿಣಾಮವಾಗಿ ನೀರು ಮುಗಿಲೆತ್ತರಕ್ಕೆ ಚಿಮ್ಮಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಭಯಾನಕ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿದರೆ ಗಮನ ಸೆಳೆದಿದೆ.
ಇಂದೋರ್- ಖಂಡ್ವ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಪೈಪ್ ಲೈನ್ ಒಡೆತ ತಕ್ಷಣ ಅಪಾರ ಪ್ರಮಾಣದ ನೀರು, ಕಾರಂಜಿಯಂತೆ ಮೇಲಕ್ಕೆ ಚಿಮ್ಮಿದ್ದು, ಕೆಲ ಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದವರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾ ಗಳಲ್ಲಿ ಸೆರೆಹಿಡಿದಿದ್ದಾರೆ.
ಸ್ಪೋಟದ ಪರಿಣಾಮ ನೀರು ರಸ್ತೆ ಮೇಲೆ ಪ್ರವಾಹದಂತೆ ಹರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಸ್ತೆಯ ಕೆಲ ಭಾಗಗಳಲ್ಲಿ ನೀರು ತುಂಬಿಕೊಂಡ ಕಾರಣ ವಾಹನ ಸವಾರರು ಪರದಾಡುವಂತೆ ಆಯಿತು. ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡರು.
ಪ್ರಾಥಮಿಕ ಮಾಹಿತಿ ಪ್ರಕಾರ ಪೈಪ್ ಲೈನ್ ನಲ್ಲಿ ಉಂಟಾದ ತಾಂತ್ರಿಕ ದೋಷ ಅಥವಾ ಅಧಿಕ ಒತ್ತಡದಿಂದ ಸ್ಪೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ನಿಖರ ಕಾರಣ ತಿಳಿಯಲು ಸಂಬಂಧಿತ ಇಲಾಖೆ ತನಿಖೆ ಆರಂಭಿಸಿದೆ.
ನರ್ಮದಾ - ಕ್ಷಿಪ್ರ ಯೋಜನೆಯ ಪ್ರಮುಖ ಜಲಸಂಪನ್ಮೂಲ ಯೋಜನೆಗಳಲ್ಲಿ ಒಂದಾಗಿದ್ದು, ಈ ಘಟನೆ ನೀರು ಪೂರೈಕೆ ವ್ಯವಸ್ಥೆಯ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸದ್ಯ ವೈರಲ್ ಆಗಿರುವ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಪೈಪ್ ಲೈನ್ ಸ್ಪೋಟದಿಂದ ಮನೆಗಳಿಗೆ ನುಗ್ಗಿದ ನೀರು ಅಪಾರ ಹಾನಿ:
ಮಧ್ಯಪ್ರದೇಶದ ಇಂದೋರ್ - ಖಾಂಡ್ವ ರಸ್ತೆಯಲ್ಲಿ ನರ್ಮದಾ - ಕ್ಷಿಪ್ರ ಪೈಪ್ಲೈನ್ ಸ್ಪೋಟಗೊಂಡ ಪರಿಣಾಮ ಭಾರಿ ಪ್ರಮಾಣದ ನೀರು ಮುಗಿಲೆತ್ತರಕ್ಕೆ ಚಿಮ್ಮಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಯಿತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.
ಪೈಪ್ ಲೈನ್ ಹೊಡೆದ ಬಳಿಕ ದೊಡ್ಡ ಪ್ರಮಾಣದ ನೀರು ಸುತ್ತಮುತ್ತಲಿನ ಪ್ರದೇಶಗಳಿಗೆ ಹರಿದು ಹಲವಾರು ಮನೆಗಳಿಗೆ ನುಗ್ಗಿದೆ. ಇದರಿಂದ ಮನೆಗಳಲ್ಲಿದ್ದ ಪೀಠೋಪಕರಣಗಳು ವಿದ್ಯುತ್ ಉಪಕರಣಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಯೊಬ್ಬರ ಪ್ರಕಾರ, ಈ ಪೈಪ್ ಲೈನ್ ಓಂಕಾರೇಶ್ವರ ದಿಂದ ಉಜ್ಜೈನಿ ವರೆಗೆ ನೀರು ಸಾಗಿಸುವ ನರ್ಮದಾ - ಕ್ಷಿಪ್ರ ಯೋಜನೆಯ ಪ್ರಮುಖ ಭಾಗವಾಗಿದೆ. ತೋಟದ ಬಳಿಕ ಸುಮಾರು ಒಂದು ಗಂಟೆಗಳ ಕಾಲ ನೀರು ಭಾರಿ ವೇಗವಾಗಿ ಹರಿದಿದ್ದು, ರಸ್ತೆಗಳು ಮತ್ತು ವಸತಿ ಪ್ರದೇಶಗಳು ಜಲಾವೃತಗೊಂಡಿದ್ದವು.
ನೀರಿನ ರಭಸದಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಬಳಿಕ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಂಡ ಬೆಳಗ್ಗೆ ಸುಮಾರು 8:30ರ ಒಳಗೆ ನೀರು ಸರಬರಾಜು ಸ್ಥಗಿತಗೊಳಿಸಿದ ನಂತರ ಪರಿಸ್ಥಿತಿ ಹಂತ ಹಂತವಾಗಿ ಸಾಮಾನ್ಯ ಸ್ಥಿತಿಗೆ ಮರಳಿತು.
ಸದ್ಯ ಪೈಪ್ ಲೈನ್ ಸ್ಪೋಟಕ್ಕೆ ನಿಖರ ಕಾರಣವೇನು? ಎಂಬುವುದರ ಕುರಿತು ತನಿಖೆ ನಡೆಯುತ್ತಿದ್ದು, ತಾಂತ್ರಿಕ ದೋಷ ಅಥವಾ ಅಧಿಕ ಒತ್ತಡ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದ್ದು, ನರ್ಮದಾ- ಕ್ಷಿಪ್ರ ಯೋಜನೆಯ ಸುರಕ್ಷತೆ ಕುರಿತು ಚರ್ಚೆಗೆ ಕಾರಣವಾಗಿದೆ.
Also Read:
ಸಿದ್ದರಾಮಯ್ಯ ಎಂದೂ ದ್ವೇಷ ರಾಜಕಾರಣದ ಹಾದಿ ಹಿಡಿದಿಲ್ಲ; ಬಿಜೆಪಿಯ ಇಬ್ಬರಿಗೆ ಯತ್ನಾಳ್ ಟಾಂಗ್