belagavi news :
ರೇಣುಕಾಸ್ವಾಮೀ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಈ ವರ್ಷದ ಮೇ 15ರಂದು ನೀಡಿದ್ದ ಆದೇಶದಲ್ಲಿ ಒಂದು ವರ್ಷದವರೆಗೆ ಜಾಮೀನು ಕೋರಿ ಹೊಸ ಅರ್ಜಿ ಸಲ್ಲಿಸದಂತೆ ಸೂಚಿಸಲಾಗಿತ್ತು. ಈ ಆದೇಶದಲ್ಲಿ ತಿದ್ದುಪಡಿ ಮಾಡುವಂತೆ ದರ್ಶನ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ನ ರಿಜಿಸ್ಟರ್ ತಿರಸ್ಕರಿಸಿದ್ದಾರೆ.
ತುರ್ತು ಸಂದರ್ಭಗಳಲ್ಲಿ ಜಾಮೀನು ಕೋರ್ಟ್ ಅವಕಾಶ ನೀಡುವಂತೆ ದರ್ಶನ್ ಪರವಾಗಿ ಸಲ್ಲಿಸಿದ್ದ ಆದೇಶ ಮಾರ್ಪಾಡು ಅರ್ಜಿಯನ್ನು ಪರಿಶೀಲಿಸಿದ ರಿಜಿಸ್ಟ್ರಾರ್ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆಯೆಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅವರ ಕಾನೂನು ಹೋರಾಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಪ್ರಕರಣದ ಮುಂದಿನ ನ್ಯಾಯಾಂಗ ಪ್ರಕ್ರಿಯತ್ತ ಎಲ್ಲರ ಗಮನ ನೆಟ್ಟಿದೆ.
ಸುಪ್ರೀಂ ಕೋರ್ಟ್ ವೆಬ್‌ಸೈಟ್ ಪ್ರಕಾರ, ದರ್ಶನ್ ಅವರ ಅರ್ಜಿಯ ಸ್ಥಿತಿ ನಿಷ್ಕ್ರಿಯಗೊಂಡಿದೆ ಎಂದು ತೋರಿಸುತ್ತಿದೆ. ಆದರೆ, ಯಾವುದೇ ಆದೇಶವನ್ನು ಅಪ್ಲೋಡ್ ಮಾಡಲಾಗಿಲ್ಲ.
ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಅರ್ಜಿಯಲ್ಲಿ ನಟ ದರ್ಶನ್, ಮೇ 15ರಂದು ನೀಡಿದ್ದ ಆದೇಶವನ್ನು ಗೌರವಿಸುತ್ತಿರುವುದಾಗಿ ತಿಳಿಸಿದ್ದರು. ಪ್ರಕರಣದ ವಿಚಾರಣೆಯ ಪ್ರಗತಿಯನ್ನು ಸುಪ್ರೀಂ ಕೋರ್ಟ್ ಗಮನಿಸಿರುವುದು ಸಂತಸದ ವಿಚಾರವಾಗಿದ್ದು, ಒಂದು ವರ್ಷದೊಳಗೆ ವಿಚಾರಣೆಯಲ್ಲಿ ಗಣನೀಯ ಪ್ರಗತಿ ಕಾಣದಿದ್ದರೆ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂಬ ಆದೇಶವನ್ನು ತಾವು ಗೌರವಿಸುತ್ತೇವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.
ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್ 2025ರ ಆಗಸ್ಟ್ ನಿಂದ ನಿರಂತರವಾಗಿ ಜೈಲಿನಲ್ಲಿದ್ದು, ಸಂಬಂಧಪಟ್ಟ ನ್ಯಾಯಾಲಯದ ಎಲ್ಲಾ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದಲ್ಲದೆ, ಕಾನೂನಿನ ಪ್ರಕಾರ ಪ್ರಚಾರಣೆಯನ್ನು ಎದುರಿಸಲು ದರ್ಶನ್ ಸದಾ ಲಭ್ಯವಿದ್ದು, ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರುವ ಅವಕಾಶ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಾಗಿತ್ತು. ಆದರೆ ಈ ಆದೇಶ ಮಾರ್ಪಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ರಿಜಿಸ್ಟಾರ್ ವಿಚಾರಣೆಗೆ ಅರ್ಹವಲ್ಲ ಎಂದು ತಿರಸ್ಕರಿಸಿರುವುದರಿಂದ, ದರ್ಶನ್ ಅವರಿಗೆ ಮತ್ತೆ ಕಾನೂನು ಹಿನ್ನಡೆಯಾಗಿದೆ.
ಸುಪ್ರೀಂ ಕೋರ್ತುಗೆ ಸಲ್ಲಿಸಿದ್ದ ಅರ್ಜಿಯಲ್ಲಿ ದರ್ಶನ್ ಪರ ವಕೀಲರು, ಪ್ರಕರಣದ ವಿಚಾರಣೆಯ ಅನಗತ್ಯವಾಗಿ ವಿಳಂಬವಾಗುತ್ತಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಾಸಿಕ್ಯೂಷನ್ ಒಟ್ಟು 2162
ಸಾಕ್ಷಿಗಳನ್ನು ವಿಚಾರಣೆ ಮಾಡಲು ಪ್ರಸ್ತಾಪಿಸಿರುವುದನ್ನು ಗಮನಿಸಿದರೆ, ಇದರಿಂದ ವಿಚಾರಣೆ ದೀರ್ಘಕಾಲ ಮುಂದುವರೆಯುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಅರ್ಜಿಯ ಪ್ರಕಾರ, ಈಗಾಗಲೇ ಗಣನೀಯ ವಿಳಂಬವಾಗಿದ್ದರೂ ಕೇವಲ ಕೆಲವೇ ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ. ಮೇ 15ರಂದು ನೀಡಿದ ಆದೇಶವನ್ನು ಉಲ್ಲೇಖಿಸಿ, ಸುಪ್ರೀಂ ಕೋರ್ಟ್ ತ್ವರಿತ ವಿಚಾರಣೆಯ ಅಗತ್ಯತೆಯ ಕುರಿತು ಕಳವಳ ವ್ಯಕ್ತಪಡಿಸಿದ್ದರು, ಆದೇಶದ ನಂತರವೂ ವಿಚಾರಣೆಯಲ್ಲಿ ಪ್ರಗತಿ ಅತಿ ಕಡಿಮೆಯಾಗಿದೆ ಎಂದು ತಿಳಿಸಲಾಗಿದೆ.
ಅದರಲ್ಲಿ ವಿಶೇಷವಾಗಿ, ಮೇ 15ರ ಆದೇಶದ ನಂತರ ಕೇವಲ ಇಬ್ಬರೂ ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಿಸ್ತರಿಸಲಾಗಿದೆ. ಹೀಗಾಗಿ, ನ್ಯಾಯಾಲಯದ ಸೂಚನೆಗಳಿದ್ದರೂ ವಿಚಾರಣೆಯ ವೇಗ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂಬುದನ್ನು ವಕೀಲರು ಉಲ್ಲೇಖಿಸಿದ್ದಾರೆ.
ದರ್ಶನ್ ಪರವಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾದ ಅರ್ಜಿಯಲ್ಲಿ, ವಿಚಾರನಿಯ ಪ್ರಗತಿ ಮತ್ತು ಸಾಕ್ಷ್ಯಗಳ ವಿಚಾರಣೆಯ ಸ್ವರೂಪದ ಕುರಿತು ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ಮೇ 15ರ ಆದೇಶದ ನಂತರ ವಿಚಾರಣೆಯಲ್ಲಿ ಕೇವಲ ಇಬ್ಬರು ಸಾಕ್ಷಿಗಳನ್ನು ಮಾತ್ರ ವಿಚಾರಣೆ ಮಾಡಲಾಗಿದ್ದು, ಅವರು ಕೇವಲ ಔಪಚಾರಿಕ /ಮಹಾಜರ್ ಸಾಕ್ಷಿಗಳಾಗಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಅವರ ಸಾಕ್ಷ್ಯವು ಫ್ರಾಸಿಕ್ಯೂಷನ್ ಪ್ರಕರಣದ ವಸ್ತುನಿಷ್ಠ ತೀರ್ಪನ್ನು ಮುಂದುವರಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದಿಲ್ಲ ಎಂದು ವಾದಿಸಲಾಗಿದೆ. ಇದರ ಜೊತೆಗೆ, ಮೇ 15ರ ಆದೇಶದ ನಂತರ ಯಾವುದೇ ಪ್ರಮುಖ ಸಾಕ್ಷಿ, ಪ್ರತ್ಯಕ್ಷ ಸಾಕ್ಷಿ, ದೂರುದಾರರ ಸಾಕ್ಷಿ, ತನಿಕಾ ಅಧಿಕಾರಿ ಅಥವಾ ಇತರ ನಿರ್ಣಾಯಕ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಆದೇಶವು ಸಂಪೂರ್ಣ ನಿಷೇಧವಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮನವಿ ಮಾಡಲಾಗಿದ್ದು, ನಂತರದ ಬೆಳವಣಿಗೆಗಳನ್ನು ಪರಿಶೀಲಿಸಿ ಸಕ್ಷಮ ನ್ಯಾಯಾಲಯಗಳು ಪರಿಶೀಲನೆ ನಡೆಸಲು ಅವಕಾಶ ಇರಬೇಕು ಎಂದು ಕೋರಲಾಗಿದೆ. ಜೊತೆಗೆ, ವಿಚಾರಣೆಯ ಪ್ರಗತಿ ಸ್ಥಗಿತಗೊಂಡಲ್ಲಿ ಅಥವಾ ಕೇವಲ ಔಪಚಾರಿಕ ಸಾಕ್ಷಿಗಳ ಪರೀಕ್ಷೆ ಎಷ್ಟೇ ನಡೆಸುತ್ತಿದ್ದರೆ, ಮುಖ್ಯ ಪ್ರಾಸಿಕ್ಯೂಷನ್ ಸಾಕ್ಷ್ಯಗಳಲ್ಲಿ ವಿಳಂಬವಾದಲ್ಲಿ ಯಾವುದೇ ವೈದ್ಯಕೀಯ ಅಥವಾ ಮಾನವೀಯ ಕಾರಣಗಳಿಂದ ಸ್ವಾತಂತ್ರ್ಯಕ್ಕೆ ಪರಿಣಾಮ ಉಂಟಾದಲ್ಲಿ ಮತ್ತೆ ನ್ಯಾಯಾಲಯದ ಮೊರೆ ಹೋಗುವ ಅವಕಾಶವನ್ನು ಸ್ಪಷ್ಟ ಪಡಿಸುವಂತೆ ದರ್ಶನ್ ಮನವಿ ಮಾಡಿದ್ದಾರೆ.
ಕಳೆದ ವರ್ಷದ ಆಗಸ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ರದ್ದುಗೊಳಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿತ್ತು. "ಅವರು ಯಾರೇ ಆಗಿರಲಿ, ಎಷ್ಟೇ ಉನ್ನತ ಸ್ಥಾನದಲ್ಲಿರಲಿ, ಕಾನೂನಿಗಿಂತ ಮೇಲಲ್ಲ" ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಕರ್ನಾಟಕ ಹೈ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಕಾನೂನು ಬದ್ಧವಾಗಿ ಹಾಗೂ ಕಾರ್ಯವಿಧಾನದ ದೃಷ್ಟಿಯಿಂದ ದೋಷಪೂರಿತವಾಗಿದೆ ಎಂದು ಸುಪ್ರೀಂ ಕೋರ್ಟ್ ವಿಮರ್ಶಿಸಿತು. ಈ ರೀತಿಯ
ನಿರ್ಧಾರಗಳು ನ್ಯಾಯಾಂಗ ಪ್ರಕ್ರಿಯೆಗೆ ಗಂಭೀರ ಅಪಾಯ ಉಂಟುಮಾಡಬಹುದು ಎಂಬುದನ್ನು ಸಹ ನ್ಯಾಯಾಲಯ ಗಮನಿಸಿದ್ದಿತ್ತು .
ಇದರ ನಂತರ ಮೇ 15, 2026ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದಲ್ಲಿ ಒಂದು ವರ್ಷದೊಳಗೆ ವಿಚಾರಣೆಯಲ್ಲಿ ಗಣನೀಯ ಪ್ರಗತಿ ಕಾಣದಿದ್ದರೆ ವಿಷಯವನ್ನು ಪುನಃ ಪರಿಶೀಲಿಸುವುದಾಗಿ ತಿಳಿಸಲಾಗಿತ್ತು. ಅಲ್ಲದೇ, ನಿರೀಕ್ಷಿತ ಮಟ್ಟದ ಪ್ರಗತಿ ಇಲ್ಲದಿದ್ದರೆ ದರ್ಶನ್ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂಬುದನ್ನು ಕಷ್ಟಪಡಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ, ದರ್ಶನ್ ಪರವಾಗಿ ಸಲ್ಲಿಸಲಾಗಿದ ಹೊಸ ಅರ್ಜಿಯಲ್ಲಿ ಮತ್ತೆ ಜಾಮೀನು ಅರ್ಜಿ ಸಲ್ಲಿಸಲು ವಿಧಿಸಲಾಗಿದ್ದ ಅವಧಿಯನ್ನು ಕಡಿಮೆಗೊಳಿಸುವಂತೆ ಮನವಿ ಮಾಡಲಾಗಿತ್ತು. ವಿಚಾರಗಳ ಪ್ರಗತಿ ಹಾಗೂ ವಿಳಂಬದ ಪರಿಸ್ಥಿತಿಯನ್ನು ಗಮನಿಸಿ ನ್ಯಾಯಾಲಯ ಮರು ಪರಿಶೀಲನೆ ಮಾಡುವ ಅಗತ್ಯವಿದೆಯೆಂದು ಅರ್ಜಿಯಲ್ಲಿ ಕೋರಲಾಗಿದೆ.