Belagavi News:
ಕನ್ನಡ ಚಿತ್ರರಂಗದ ಹೆಮ್ಮೆಯ ಸಂಗೀತ ನಿರ್ದೇಶಕ ಹಾಗೂ ಗೀತ ಸಾಹಿತಿ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂಬ ಆಗ್ರಹ ಮತ್ತೊಮ್ಮೆ ಜೋರಾಗಿದೆ. ಈ ಬಾರಿ ಅಭಿಯಾನಕ್ಕೆ ನಟ ಪ್ರೇಮ್ ಚಾಲನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಅಭಿಮಾನಿಗಳಿಂದ 'ನಾದಬ್ರಹ್ಮ' ಎಂದು ಗೌರವಿಸಲ್ಪಡುವ ಹಂಸಲೇಖ ಅವರು ಕಳೆದ ಐದು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾವಿರಾರು ಜನಪ್ರಿಯ ಹಾಡುಗಳು, ಅರ್ಥಪೂರ್ಣ ಸಾಹಿತಿ ಮತ್ತು ಅನೇಕ ಸೂಪರ್ ಹಿಟ್ ಸಂಗೀತ ಸಂಯೋಜನೆಗಳ ಮೂಲಕ ಅವರು ಕನ್ನಡ ಸಂಸ್ಕೃತಿ ಹಾಗೂ ಚಿತ್ರರಂಗವನ್ನು ಶ್ರೀಮಂತ ಗೊಳಿಸಿದ್ದಾರೆ.
ಹಂಸಲೇಖ ಅವರ ಸಮಕಾಲೀನರು ಹಾಗೂ ಅವರಿಗಿಂತ ಕಿರಿಯರಾದ ಹಲವಾರು ಸಂಗೀತ ನಿರ್ದೇಶಕರು ಮತ್ತು ಗೀತ ಸಾಹಿತಿಗಳು ಈಗಾಗಲೇ ಪದ್ಮ ಪ್ರಶಸ್ತಿ ಪಡೆದಿದ್ದಾರೆ. ಆದರೆ ಕನ್ನಡದ ಸಂಗೀತ ಲೋಕಕ್ಕೆ ಅಮೋಘ ಸೇವೆ ಸಲ್ಲಿಸಿರುವ ಹಂಸಲೇಖ ಅವರಿಗೆ ಇನ್ನೂ ಆ ಗೌರವ ದೊರಕಿಲ್ಲ ಎಂಬ ಅಭಿಪ್ರಾಯಗಳಲ್ಲಿ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಟ ಪ್ರೇಮ್, ಹಂಸಲೇಖ ಅವರ ಸಾಧನೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಅವರಿಗೆ ಪದ್ಮ ಪ್ರಶಸ್ತಿ ಅಥವಾ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಗೌರವದ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿ ಅಭಿಯಾನ ಆರಂಭಿಸಿದ್ದಾರೆ. ಅಭಿಯಾನಕ್ಕೆ ಕನ್ನಡಿಗರು ಮತ್ತು ಹಂಸಲೇಖ ಅಭಿಮಾನಿಗಳು ಹೆಚ್ಚಿನ ಬೆಂಬಲ ಸೂಚಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಚರ್ಚೆ ತೀವ್ರಗೊಂಡಿದೆ.
ಹಂಸಲೇಖರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಿ - ನಟ ನೆನಪಿರಲಿ ಪ್ರೇಮ್ ಅಭಿಯಾನಕ್ಕೆ ಭಾರಿ ಬೆಂಬಲ :
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗೀತ ಸಾಹಿತಿ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂಬ ಆಗ್ರಹದೊಂದಿಗೆ ನಟ ನೆನಪಿರಲಿ ಪ್ರೇಮ್ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ. ಅವರ ಈ ಮನವಿಗೆ ಕನ್ನಡ ಚಿತ್ರರಂಗ ಹಾಗೂ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರೇಮ, "ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪುರಸ್ಕಾರ ಅಥವಾ ಜ್ಞಾನಪೀಠ ಪ್ರಶಸ್ತಿ ಸಲ್ಲಬೇಕು ಎಂಬುದರ ಕುರಿತು ಅಭಿಯಾನ ಆರಂಭಿಸಿದ್ದೇನೆ, ಕನ್ನಡ ಚಿತ್ರರಂಗ, ಸಾಹಿತಿಗಳು, ಕನ್ನಡ ಚಿತ್ರ ಪ್ರೇಮಿಗಳು, ಮಾಧ್ಯಮದವರು, ಕರ್ನಾಟಕ ಸರ್ಕಾರ ಹಾಗೂ ಭಾರತ ಸರ್ಕಾರ ಎಲ್ಲರೂ ಈ ಅಭಿಯಾನಕ್ಕೆ ಬೆಂಬಲ ನೀಡಬೇಕು. 300ಕ್ಕೂ ಹೆಚ್ಚು ಸಿನಿಮಾಗಳಿಗೆ ಸಾಹಿತಿ ಹಾಗೂ ಸಂಗೀತ ನೀಡಿರುವ ಹಂಸಲೇಖ ಅವರಿಗೆ ಗೌರವ ಸಲ್ಲಲೇಬೇಕು. ನಿಮ್ಮೆಲ್ಲರ ಸಹಕಾರ ಇರಲಿ" ಎಂದು ಮನವಿ ಮಾಡಿದ್ದಾರೆ.
ಸುಮಾರು 300ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಿಗೆ ಸಂಗೀತ ನೀಡಿರುವ ಹಂಸಲೇಖ, ಅದಕ್ಕಿಂತಲೂ ಹೆಚ್ಚಿನ ಚಿತ್ರಗಳಿಗೆ ಸಾಹಿತಿ ರಚಿಸಿದ್ದಾರೆ. ಅವರ ಸಾವಿರಾರು ಹಾಡುಗಳು ಕನ್ನಡಿಗರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿವೆ. ವಿಶೇಷವಾಗಿ 1980ರ ದಶಕದಲ್ಲಿ ಕನ್ನಡ ಚಿತ್ರರಂಗದ ಸಂಗೀತ ಮತ್ತು ಸಾಹಿತ್ಯಕ್ಕೆ ಹೊಸ ದಿಕ್ಕು ತೋರಿದ ಹಂಸಲೇಖ, ತಮ್ಮ ವಿಶಿಷ್ಟ ಶೈಲಿಯ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದರು.
ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗಕ್ಕೂ ಸಂಗೀತ ನೀಡಿರುವ ಹಂಸಲೇಖ ಅವರ ಸಾಧನೆ ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕಾದದ್ದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೇಗ ಪಡೆದುಕೊಂಡಿದೆ.
ಹಂಸಲೇಖರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡುವಂತೆ ಅಭಿಯಾನ - ನಟ ನೆನಪಿರಲಿ ಪ್ರೇಮ್ ಮನವಿಗೆ ಸಿಗುತ್ತಾ ಫಲ ? :
ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ ಹಾಗೂ ಗೀತಾ ಸಾಹಿತಿ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂಬ ಅಭಿಯಾನಕ್ಕೆ ಇದೀಗ ವೇಗ ಸಿಕ್ಕಿದೆ. ನಟ ನೆನಪಿರಲಿ ಪ್ರೇಮ್ ಆರಂಭಿಸಿರುವ ಈ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಂಸಲೇಖ ಅವರ ಸಾಧನೆಗೆ ರಾಷ್ಟ್ರೀಯ ಮಟ್ಟದ ಗೌರವ ಸಿಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಹಂಸಲೇಖ ಅವರ ಕನ್ನಡ ಚಿತ್ರರಂಗಕ್ಕೆ ನೀಡಿರುವ ಅಮೋಘ ಕೊಡುಗೆಗಾಗಿ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1955ರಲ್ಲಿ 'ಪಂಚಾಕ್ಷರಿ ಗವಾಯಿ' ಚಿತ್ರದ ಸಂಗೀತಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದಿರುವವರು, 'ಹಾಲುಂಡ ತವರು', 'ನೆನಪಿರಲಿ' ಹಾಗೂ 'ಪಂಚಾಕ್ಷರಿ ಗವಾಯಿ' ಚಿತ್ರಗಳಿಗೆ ರಾಜ್ಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇದಲ್ಲದೆ ಹಲವು ಬಾರಿ ಫಿಲಂ ಫೇರ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ., ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಎಸ್ ಜಾನಕಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಅವರಿಗೆ ಲಭಿಸಿದೆ.
ಆದರೆ, ಇಷ್ಟೊಂದು ಸಾಧನೆಗಳ ನಡುವೆಯೂ ಭಾರತ ಸರ್ಕಾರ ನೀಡುವ ಪದ್ಮ ಪ್ರಶಸ್ತಿ ಸೇರಿದಂತೆ ಯಾವುದೇ ನಾಗರಿಕ ಗೌರವ ಇದುವರೆಗೆ ಹಂಸಲೇಖ ಅವರಿಗೆ ಲಭಿಸಿಲ್ಲ. ಕನ್ನಡ ಸಿನಿಮಾ, ಸಂಗೀತ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಅವರ ಅಪಾರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಅವರಿಗೆ ಪದ್ಮ ಪ್ರಶಸ್ತಿ ಅಥವಾ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂಬ ಅಗ್ರಹ ಈಗ ಮತ್ತಷ್ಟು ಬಲಗೊಂಡಿದೆ.
ಅಭಿಯಾನದ ವಿಶೇಷವೆಂದರೆ, ಕನ್ನಡ ಚಿತ್ರರಂಗದ ಜನಪ್ರಿಯ ನಟ ನೆನಪಿರಲಿ ಪ್ರೇಮ್ ಸ್ವತಃ ಮುಂಚೂಣಿಯಲ್ಲಿ ನಿಂತು ಜನ ಬೆಂಬಲ ಕೋರಿದ್ದಾರೆ. ಈ ಹಿಂದೆ ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ನಡೆದ ಅಭಿಯಾನ ಯಶಸ್ವಿಯಾಗಿ ಅವರಿಗೆ ಕೇಂದ್ರ ಸರ್ಕಾರ ಪದ್ಮ ಗೌರವ ಘೋಷಿಸಿತ್ತು. ಇದೀಗ ಅದೇ ಮಾದರಿಯಲ್ಲಿ ಹಂಸಲೇಖ ಅವರಿಗೂ ರಾಷ್ಟ್ರೀಯ ಗೌರವ ದೊರೆಯುತ್ತದೆ ಎಂಬ ಕುತೂಹಲ ಕನ್ನಡಿಗರಲ್ಲಿ ಹೆಚ್ಚಾಗಿದೆ.