Belagavi News:
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ ಒಂಬತ್ತು ಟಿಎಂಸಿ ನೀರು ಮಾತ್ರ ಉಳಿದಿದ್ದು, ರೈತರು ಹಾಗೂ ನೀರಾವರಿ ಪ್ರದೇಶಗಳ ಜನರಲ್ಲಿ ಚಿಂತೆ ಹೆಚ್ಚಾಗಿದೆ.
ಮಳೆ ಕೊರತೆ ಮತ್ತು ನೀರಿನ ನಿರಂತರ ಬಳಕೆಯಿಂದ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಕಳೆದ ಕೆಲವು ವಾರಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಯಾಗದ ಕಾರಣ ಒಳಹರಿವು ಕೂಡ ಕಡಿಮೆಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳು ಕುಡಿಯುವ ನೀರಿನ ಪೂರೈಕೆ ಹಾಗೂ ನೀರಾವರಿ ಯೋಜನೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹ ಕೇವಲ 9 TMC ಗೆ ಇಳಿದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಮುಂಗಾರು ಮಳೆಯ ಮೇಲೆ ಎಲ್ಲರ ನಿರೀಕ್ಷೆ ನೆಟ್ಟಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ನೀರಿನ ನಿರ್ವಹಣೆ ಸರ್ಕಾರಕ್ಕೆ ದೊಡ್ಡ ಸವಾಲಾಗುವ ಸಾಧ್ಯತೆ ಇದೆ.
ಜಲಾಶಯದ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ನೀರಿನ ಬಳಕೆಯಲ್ಲಿ ಎಚ್ಚರಿಕೆವಹಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ತುಂಗಭದ್ರಾ ಜಲಾಶಯದಲ್ಲಿ ಆತಂಕಕಾರಿ ಕುಸಿತ: ಕೇವಲ 9 TMC ನೀರು ಸಂಗ್ರಹ, ಕಳೆದ ವರ್ಷಕ್ಕಿಂತ ಬಾರಿ ಇಳಿಕೆ:
ಕೊಪ್ಪಳ,ರಾಯಚೂರು,ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕ ಕಾರ್ಯಕ್ರಮದಲ್ಲಿ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ 9 TMC ನೀರು ಮಾತ್ರ ಸಂಗ್ರಹವಾಗಿದ್ದು, ಕಳೆದ ವರ್ಷದ ಇಡೀ ಅವರಿಗೆ ಹೋಲಿಸಿದರೆ ಇದು ಬಹಳ ಕಡಿಮೆ ಪ್ರಮಾಣವಾಗಿದೆ.
ಅಂಕಿ ಅಂಶಗಳ ಪ್ರಕಾರ ,ಕಳೆದ ವರ್ಷ ಜೂನ್ ತಿಂಗಳಲ್ಲಿ ಜಲಾಶಯದಲ್ಲಿ ಸುಮಾರು 24 TMC ನೀರು ಸಂಗ್ರಹವಾಗಿತ್ತು. ಆದರೆ ಈ ವರ್ಷ ಮಲೆನಾಡು ಭಾಗದಲ್ಲಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕಡಿಮೆಯಾಗಿದೆ. ಇದರಿಂದ ಒಟ್ಟು ನೀರಿನ ಮಟ್ಟದಲ್ಲಿ ಗಮನಾರ್ಹ ಇಳಿಕೆ ದಾಖಲಾಗಿದೆ.
ಇದಾಗ್ಯೂ, ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದರೂ,ಜಲಾಶಯಕ್ಕೆ ಮುಖ್ಯವಾಗಿ ನೀರು ಸೇರುವ ಮೇಲ್ಭಾಗದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದು ಒಳಹರಿವಿನ ಕುಸಿತಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿ ಕೃಷಿ , ನೀರಾವರಿ ಹಾಗೂ ಕುಡಿಯುವ ನೀರಿನ ಪೂರೈಕೆ ಮೇಲೆ ಮುಂದಿನ ದಿನಗಳಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.
ಜಲಾಶಯದ ನೀರಿನ ಮಟ್ಟವನ್ನು ಅಧಿಕಾರಿಗಳು ನಿರಂತರವಾಗಿ ಗಮನಿಸುತ್ತಿದ್ದು, ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಮುಂಗಾರು ಮಳೆಯಾ ಮೇಲೆ ಈಗ ಎಲ್ಲರ ನಿರೀಕ್ಷೆ ನೆಟ್ಟಿದೆ.
ತುಂಗಭದ್ರಾ ಜಲಾಶಯದಲ್ಲಿ ನೀರಿನ ತೀವ್ರ ಕೊರತೆ : 9 ಟಿ ಎಂ ಸಿ ಯಲ್ಲಿ ಕುಡಿಯುವ ನೀರು ಮತ್ತು ಕೃಷಿಗೆ ಒತ್ತಡ:
ತುಂಗಭದ್ರಾ ಜಲಾಶಯದಲ್ಲಿ ಕೇವಲ 9 TMC ನೀರು ಮಾತ್ರ ಉಳಿದಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಕೃಷಿ ಹಾಗೂ ಜಲಚರಗಳಿಗೆ ನೀರು ಒದಗಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕೊಪ್ಪಳ,ರಾಯಚೂರು,ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನ ಹಾಗೂ ರೈತರ ಮೇಲೆ ಇದರ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.
ಪ್ರಸ್ತುತ ಕುಡಿಯುವ ನೀರು ಹಾಗೂ ನೀರಾವರಿ ಕಾಲುವೆಗಳಿಗೆ ಸುಮಾರು 249 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸುವೆ. ಈ ಸೀಮಿತ ನೀರಿನ ಲಭ್ಯತೆ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ನಿರ್ವಹಣೆ ಅತ್ಯಂತ ಎಚ್ಚರಿಕೆಯಿಂದ ಮಾಡಲಾಗುತ್ತಿದೆ.
ನೀರಿನ ಈ ಕೊರತೆಯಿಂದ ನಾಲ್ಕು ಜಿಲ್ಲೆಗಳ ರೈತರು ಹಾಗೂ ಜನರಲ್ಲಿ ತೀವ್ರ ಆತಂಕ ಉಂಟಾಗಿದೆ. ಕೃಷಿ ಚಟುವಟಿಕೆಗಳು ಹಾಗೂ ಮುಂದಿನ ಬೆಳೆಗಳ ಯೋಜನೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನೀರಿನ ಬಳಕೆಯಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಅಗತ್ಯವಾಗಿದೆ.
ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದರೆ ಮಾತ್ರ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಪರಿಸ್ಥಿತಿ ಸುಧಾರಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯ ಮೇಲೆ ಜಲಾಶಯದ ಭವಿಷ್ಯ ಅವಲಂಬಿತವಾಗಿದೆ.
Also Read:
ಸಮುದಾಯವಾರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ ಸುಳ್ಳು: ಮಾಜಿ ಸಿಎಂ ಸಿದ್ದರಾಮಯ್ಯ