Balagavi News:
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸೋನಾರ್ ಪೂರದಲ್ಲಿ ತಮ್ಮ ಮೇಲೆ ನಡೆದಿರುವ ದಾಳಿ ಕುರಿತು ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅಧಿಕೃತವಾಗಿ ಮಾಹಿತಿ ನೀಡಲು ಮುಂದಾಗಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ನ್ಯಾಯಾಂಗದ ಮಧ್ಯಸ್ಥಿಕೆ ಕೋರಿ ನ್ಯಾಯಾಲಯಕ್ಕೂ ಅರ್ಜಿ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ.
ಚುನಾವಣೋತ್ತರ ಹಿಂಸಾಚಾರಕ್ಕೆ ಬಲಿಯಾದ ಕುಟುಂಬಗಳನ್ನು ಭೇಟಿ ಮಾಡಲು ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ ಪುರ ಪ್ರದೇಶಕ್ಕೆ ತೆರಳಿದ್ದ ಮೇಲೆ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಇಟ್ಟಿಗೆ, ಕಲ್ಲು ಹಾಗೂ ಮೊಟ್ಟೆಗಳನ್ನು ಎಸೆದು ದಾಳಿ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯಲ್ಲಿ ಅವರ ಕಣ್ಣಿಗೆ ಗಾಯವಾಗಿದ್ದು, ಇದು ಪೂರ್ವಯೋಜಿತ ದಾಳಿ ಎಂದು ಟಿಎಂಸಿ ಆರೋಪಿಸಿದೆ.
ಅಭಿಷೇಕ್ ಬ್ಯಾನರ್ಜಿ, "ಈ ದಾರಿ ಬಿಜೆಪಿ ಪ್ರಾಯೋಜಿತವಾಗಿದ್ದು, ನನ್ನ ಹತ್ಯೆಗೆ ನಡೆಸಿದ ಯತ್ನವಾಗಿದೆ. ಅಲ್ಲದೆ, ಪೊಲೀಸರು ಸಮರ್ಪಕ ಭದ್ರತೆ ಒದಗಿಸುವಲ್ಲಿ ವಿಫಲರಾಗಿದ್ದಾರೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
5 ಆರೋಪಿಗಳ ಬಂಧನ:
ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದು, ಅವರನ್ನು ಬರೂಯಿಪುರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.ಬಂದಿದ್ದರನ್ನು ಆಕಾಶ ಗಯೇನ್, ಕಾಜಲ್ ದಾಸ್, ದೇಬಾಶಿಶ್ ದತ್ತಾ, ನಿರ್ಮಲ್ಯ ಸೇನ್ ಗುಪ್ತಾ ಮತ್ತು ತಪನ್ ಮೈತಿ ಎಂದು ಗುರುತಿಸಲಾಗಿದೆ.
ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ ಅಭಿಷೇಕ್:
ಘಟನೆಯ ಬಳಿಕ ತಮ್ಮ ಬೆಂಬಲಕ್ಕೆ ನಿಂತರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅಭಿಷೇಕ್ ಬ್ಯಾನರ್ಜಿ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
"ರಾಹುಲ್ ಜಿ, ನಿಮ್ಮ ಕಾಳಜಿ ಮತ್ತು ನಿರಂತರ ಬೆಂಬಲಕ್ಕೆ ಧನ್ಯವಾದಗಳು. ಭಾರತದ ಆತ್ಮ, ಪ್ರಜಾಪ್ರಭುತ್ವ ಸಂಸ್ಥೆಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ನಾವು ಒಗ್ಗಟ್ಟಿನಿಂದ ನಿಲ್ಲುತ್ತೆವೆ" ಎಂದು ಅವರು ಪೋಸ್ಟ್ ಮಾಡಿದ್ದಾರೆ.
ದಿಲೀಪ್ ಘೋಷ್ ಪ್ರತಿಕ್ರಿಯೆ:
ಪಶ್ಚಿಮ ಬಂಗಾಳ ಸಚಿವ ದಿಲೀಪ್ ಘೋಷ್ ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯನ್ನು ಖಂಡಿಸಿದ್ದು, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೋ ಇಲ್ಲ ಎಂದು ಹೇಳಿದ್ದಾರೆ.
ಆದರೆ, ಕಡೆದ ಹಲವು ವರ್ಷಗಳಿಂದ ಜನರು ಅನುಭವಿಸುತ್ತಿರುವ ಅಸಮಾಧಾನ ಮತ್ತು ಕೋಪದ ಪ್ರತಿಫಲನ ಈ ಘಟನೆ ಆಗಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
"ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ನಡೆಯಬಾರದಿತ್ತು. ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಆದರೆ ಕಳೆದ 15 ವರ್ಷಗಳಿಂದ ಜನರು ಹಿಂಸೆ ಮತ್ತು ಕಿರುಕುಳ ಅನುಭವಿಸುತ್ತಿದ್ದಾರೆ. ಕೋಪ ಎಲ್ಲೋ ಒಂದು ಕಡೆ ವ್ಯಕ್ತವಾಗಲೇಬೇಕು" ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಈ ಘಟನೆ ಪಕ್ಷಿಮ ಬಂಗಾಳದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಟಿಎಂಸಿ-ಬಿಜೆಪಿ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
Also Read:
"3ನೇ ಅತಿ ದೊಡ್ಡ ಆರ್ಥಿಕತೆಯತ್ತ ಭಾರತ, ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೆನಡಾ ಆಸಕ್ತಿ"