<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ರಾಮಮಂದಿರ ದೇಣಿಗೆ ದುರ್ಬಳಕೆ ಆರೋಪ : ಸಮಗ್ರ ತನಿಖೆಗೆ ಆರ್.ಎಸ್.ಎಸ್ ಕರೆ

ರಾಮಮಂದಿರ ದೇಣಿಗೆ ದುರ್ಬಳಕೆ ಆರೋಪ : ಸಮಗ್ರ ತನಿಖೆಗೆ ಆರ್.ಎಸ್.ಎಸ್ ಕರೆ
Summary: The RSS has demanded an impartial, transparent and thorough investigation into the temple theft case to bring out the truth. The organization has called for action to be taken as per the law, without allowing speculation about the case.

belaagvi news :

ನವದೆಹಲಿ,ಜುಲೈ 3 : ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ಕಾಣಿಕೆ ಹಣದ ದುರುಪಯೋಗ ಮತ್ತು ಕಳ್ಳತನ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಆಗ್ರಹಿಸಿದೆ.

ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ರಾಮ ಜನ್ಮಭೂಮಿ ಕೋಟ್ಯಾಂತರ ಭಕ್ತರ ಶ್ರದ್ಧೆ, ಆಸ್ಥೆ ಮತ್ತು ಭಕ್ತಿಯ ಕೇಂದ್ರವಾಗಿದೆ ಎಂದು ತಿಳಿಸಿದ್ದಾರೆ. ಮಂದಿರದ ದಾನಪಾತ್ರೆಗಳಿಂದ ಹಣ ಕಳುವಾಗಿರುವ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಈ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಆರ್.ಎಸ್.ಎಸ್ ಅಭಿಪ್ರಾಯ ಪಟ್ಟಿದೆ. ಜೊತೆಗೆ,ಈ ಪ್ರಕಾರದ ಕುರಿತು ಭಕ್ತರು ಸಂಯಮದಿಂದ ವರ್ತಿಸಬೇಕು ಎಂದು ಕೂಡ ಕರೆ ನೀಡಲಾಗಿದೆ.

ರಾಮ ಮಂದಿರ ನಿರ್ಮಾಣಕ್ಕಾಗಿ ಭಕ್ತರು ನೀಡಿದ ಹಣ, ಚಿನ್ನಾಭರಣಗಳ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರ್.ಎಸ್.ಎಸ್ ಮೊದಲ ಬಾರಿಗೆ ಅಧಿಕೃತ ಪ್ರತಿಕ್ರಿಯೆ ನೀಡಿದೆ.

ರಾಮ ಮಂದಿರದ ದೇಣಿಗೆ ಕಳ್ಳತನದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಈ ಘಟನೆ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಹೇಳಿದ್ದಾರೆ.

ವಿಡಿಯೋ ಸಂದೇಶದಲ್ಲಿ ಮಾತನಾಡಿದ ಅವರು, ರಾಮು ಮಂದಿರದ ದಾನಪಾತ್ರೆಗಳಿಂದ ನಡೆದ ಕಳ್ಳತನ ಅತ್ಯಂತ ದುರದೃಷ್ಟಕರ ಘಟನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಈ ಘಟನೆ ಇಡೀ ಹಿಂದೂ ಸಮಾಜ ಹಾಗೂ ವಿಶ್ವದಾದ್ಯಂತ ಇರುವ ರಾಮಭಕ್ತರ ಭಾವನೆಗಳಿಗೆ ತೀವ್ರ ದಕ್ಕೆ ತಂದಿದೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಶೀಘ್ರದಲ್ಲಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಕೊಡಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಕ್ರಮಗಳನ್ನು ಆರ್.ಎಸ್.ಎಸ್ ಸ್ವಾಗತಿಸುತ್ತದೆ ಎಂದು ಕೂಡ ತಿಳಿಸಿದ್ದಾರೆ.

ತನಿಖೆಯಲ್ಲಿ ಯಾರೆಲ್ಲಾ ದೋಷಿಗಳಾಗುತ್ತಾರೋ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ ಹೊಸ ಬಾಳೆ, ಮಂದಿರದ ನಿರ್ವಹಣೆಯಲ್ಲಿ ಇರುವ ಎಲ್ಲಾ ರೀತಿಯ ನ್ಯೂನತೆಗಳನ್ನು ತಕ್ಷಣ ಸರಿಪಡಿಸಲು ಎಂದು ಹೇಳಿದ್ದಾರೆ. ಅನುಮಾನಗಳನ್ನು ದೂರ ಮಾಡಲು ಟ್ರಸ್ಟ್ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ರಾಮ ಮಂದಿರದ ದೇಣಿಗೆ ಸಂಬಂಧಿಸಿದಂತೆ ಸೃಷ್ಟಿಯಾಗುತ್ತಿರುವ ಗೊಂದಲ ಪರಿಸ್ಥಿತಿ ಶೀಘ್ರದಲ್ಲೇ ಅಂತ್ಯಗೊಳ್ಳಬೇಕು ಎಂದು ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿನಂತಿಯ ಮೇರೆಗೆ ಉತ್ತರ ಪ್ರದೇಶ ಸರ್ಕಾರವು ವಿಶೇಷ ತನಿಖಾ ದಳವನ್ನು ರಚಿಸಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಕಾನೂನು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.

ತನಿಖೆಯಲ್ಲಿ ಯಾರೇ ತಪ್ಪಿತಸ್ಥರೆಂದು ಸಾಬೀತಾದರೂ ಅವರಿಗೆ ಕಠಿಣ ಶಿಕ್ಷೆ ನೀಡುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ರಾಮಮಂದಿರದ ನಿರ್ವಹಣೆ ಹಾಗೂ ಕಾರ್ಯಾಚರಣೆಗಳಲ್ಲಿನ ಎಲ್ಲ ಲೋಪದೋಷಗಳನ್ನು ತಕ್ಷಣ ಸರಿಪಡಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರವ ಕೋಟ್ಯಾಂತರ ಭಕ್ತರ ಶ್ರದ್ಧೆ ಮತ್ತು ಭಕ್ತಿಯ ಕೇಂದ್ರವಾಗಿದ್ದು,ಅದರ ಪವಿತ್ರತೆ ಹಾಗೂ ನಂಬಿಕೆ ಅಚಲವಾಗಿ ಉಳಿಯಬೇಕು ಎಂದು ದತ್ತಾತ್ರೇಯ ಹೊಸ ಬಾಳೆಯ ತಿಳಿಸಿದ್ದಾರೆ. ಪ್ರಸ್ತುತ ಉಂಟಾಗಿರುವ ಗೊಂದಲ ಮತ್ತು ಅನಿಶ್ಚಿತತೆ ಶೀಘ್ರದಲ್ಲಿ ಅಂತ್ಯಗೊಳ್ಳಬೇಕು ಎಂದು ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಟ್ರಸ್ಟ್ ಮತ್ತು ಸರ್ಕಾರದ ತನಿಖಾ ತಂಡವು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪಾರದರ್ಶಕ ಹಣಕಾಸು ನಿರ್ವಹಣೆ ಹಾಗೂ ದೋಷ ರಹಿತ ಆಡಳಿತ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂದು ಅವರು ಹೇಳಿದ್ದಾರೆ. ಇದರ ಮೂಲಕ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮೇಲೆ ಭಕ್ತರ ನಂಬಿಕೆ ಎಂದು ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರದ ದೇಣಿಗೆ ಹಣ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಹಿಂದುಗಳು ಸಂಯಮ ಮತ್ತು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಕರೆ ನೀಡಿದೆ.

ಈ ಕಷ್ಟದ ಸಮಯದಲ್ಲಿ ಇಡೀ ಹಿಂದೂ ಸಮಾಜವು ಅಗತ್ಯವಾದ ತಾಳ್ಮೆ ಹಾಗೂ ಸಂಯಮವನ್ನು ಪ್ರದರ್ಶಿಸಬೇಕು ಎಂದು ಸಂಘಟನೆ ತಿಳಿಸಿದೆ. ಈ ಘಟನೆಯನ್ನು ದುರುಪಯೋಗಪಡಿಸಿಕೊಂಡು ಹಿಂದೂ ಧರ್ಮ ಹಾಗೂ ಸಮಾಜವನ್ನು ನಿಂದಿಸಲು ಯತ್ನಿಸುತ್ತಿರುವ ಹಿಂದೂ ವಿರೋಧಿ ಮತ್ತು ದೇಶ ವಿರೋಧಿ ಶಕ್ತಿಗಳ ಪಿತೂರಿಗಳನ್ನು ಎಚ್ಚರಿಕೆಯಿಂದ ಎದುರಿಸಬೇಕು ಎಂದು ಆರ್‌ಎಸ್ಎಸ್ ಸೂಚಿಸಿದೆ.

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ:

ರಾಮ ಮಂದಿರದ ಕಾಣಿಕೆ ಹಣ ಕಳ್ಳತನ ಆರೋಪಗಳು ಉತ್ತರ ಪ್ರದೇಶದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಮುಂದಿನ ವರ್ಷ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಪ್ರಸ್ತುತ ಪ್ರಕರಣವನ್ನು ವಿಶೇಷ ತನಿಖಾ ದಳ ತನಿಖೆ ನಡೆಸುತ್ತಿದ್ದು, ಹಲವು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತರಲ್ಲಿ ಚಂಪತ್ ರಾಯ್ ಅವರ ಆಪ್ತ ರಾಮ ಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಸೇರಿದಂತೆ ಎಂಟು ಮಂದಿ ಸೇರಿದ್ದಾರೆ.

ಇತರ ಬಂಧಿತರಲ್ಲಿ ಅವಿನಾಶ್ ಶುಕ್ಲಾ, ಅನುಕಲ್ಪ್ ವಿಶ್ರಾ, ಲವಕುಶ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುನೇಶ್ ಪಾಂಡೆ, ರಾಮ ಶಂಕರ ಮಿಶ್ರಾ ಮತ್ತು ಸುಭಾಷ್ ಶ್ರೀವಾಸ್ತವ್ ಇದ್ದಾರೆ ಎಂದು ತಿಳಿದುಬಂದಿದೆ.

ತನಿಖೆ ಮುಂದುವರಿದಿದ್ದು,ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online