Belagavi News:
ಉಡುಪಿ: ರಾಜ್ಯದ ಪ್ರಸಿದ್ಧ ಶಕ್ತಿಪೀಠಗಳಲ್ಲೊಂದಾದ Kollur Mookambika temple ಮತ್ತೆ ಗಣ್ಯರ ಭೇಟಿಯಿಂದ ಸುದ್ದಿಯಲ್ಲಿದೆ. ಕೆಲವೇ ದಿನಗಳ ಹಿಂದೆ ವಿಜಯ್ ದೇವಾಲಯಕ್ಕೆ ಭೇಟಿ ನೀಡಿದ್ದರೆ, ಇದೀಗ ದೇಶದ ಖ್ಯಾತ ಉದ್ಯಮಿ ಕುಟುಂಬದ ವಾರಸುದಾರ Anant Ambani ಭಾನುವಾರ ದೇಗುಲಕ್ಕೆ ಆಗಮಿಸಿ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅಂಬಾನಿ ಕುಟುಂಬದ ಗುರುಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ್ ಅಂಬಾನಿ, ದೇವಿಯ ಸನ್ನಿಧಾನದಲ್ಲಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಅವರು ದೇವಿಯ ಕೃಪೆಗೆ ಪಾತ್ರರಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ದೇಗುಲಕ್ಕೆ ಆಗಮಿಸಿದ ಅನಂತ ಅಂಬಾನಿಗೆ ದೇವಾಲಯ ಆಡಳಿತ ಮಂಡಳಿ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ಬಳಿಕ ದೇವಾಲಯದ ಪರವಾಗಿ ಗೌರವ ಅರ್ಪಣೆ ಮಾಡಲಾಗಿದ್ದು, ಈ ಭೇಟಿ ಭಕ್ತರು ಹಾಗೂ ಸಾರ್ವಜನಿಕರ ಗಮನ ಸೆಳೆಯಿತು. ಅನಂತ್ ಅಂಬಾನಿಯ ಈ ಆಧ್ಯಾತ್ಮಿಕ ಪ್ರವಾಸ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು , ಸಾಮಾಜಿಕ ಜಾಲತಾಣಗಳಲ್ಲೂ ಭಾರಿಗಮನ ಸೆಳೆಯುತ್ತಿದೆ.
ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ದೇಶ ಮೂಕಾಂಬಿಕೆ ದರ್ಶನಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಭಾರಿ ಮಳೆ ಕಾರಣದಿಂದ ಪ್ರವಾಸ ಮುಂದೂಡಲಾಗಿತ್ತು. ಇಂದು ಸಂಜೆ ವೇಳೆಗೆ ಕೊಲ್ಲೂರು ಮೂಕಾಂಬಿಕೆ ತಲುಪಿದ ಅನಂತ್ ಅಂಬಾನಿ ದೇವಿ ದರ್ಶನ ಪಡೆದರು.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ: ಕೊಲ್ಲೂರು ಮೂಕಾಂಬಿಕ ದೇವಿಯ ದರ್ಶನದ ಬಳಿಕ ಅನಂತ್ ಅಂಬಾನಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು. ರಾತ್ರಿ ವೇಳೆಯಲ್ಲಿ ಮಠಕ್ಕೆ ಆಗಮಿಸಿದವರು ಭಕ್ತಿ ಭಾವದಿಂದ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.
ಬಳಿಕ ಪರ್ಯಾಯ ಪೀಠಾಧೀಶರಾದ Sri Vedavaradhana Tirtha Swamiji ಅವರಿಂದ ಫಲ - ಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಧಾರ್ಮಿಕ ಹಾಗೂ ಸಾಮಾಜಿಕ ವಲಯದ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
ಕಾರ್ಯಕ್ರಮದಲ್ಲಿ ಶಿರೂರು ಮಠದ ದಿವಾನರಾದ Uday Kumar Saralattaya, ಪಂಡಿತ ಚಂದ್ರಶೇಖರ್ ಶರ್ಮಾ, ಕರ್ನಾಟಕದ Reliance Jio ವ್ಯವಸ್ಥಾಪಕರಾದ ಧನಂಜಯ್ ಆರ್. ಶಿವಾನಂದನ್, ಮಾಧವ ಶಾನುಭಾಗ್, ಜಯಪ್ರಕಾಶ್ ಶೆಟ್ಟಿ, ಉಮೇಶ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆಧ್ಯಾತ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮತ್ತು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಅನಂತ್ ಅಂಬಾನಿ ನೀಡಿದ ಭೇಟಿ ಭಕ್ತರು ಹಾಗೂ ಸಾರ್ವಜನಿಕರ ಗಮನ ಸೆಳೆದಿದ್ದು, ಅವರ ಧಾರ್ಮಿಕ ನಂಬಿಕೆ ಮತ್ತು ಭಕ್ತಿಭಾವಕ್ಕೆ ಸಾಕ್ಷಿಯಾಗಿದೆ.
ವಿಜಯ ಬೆಳ್ಳಿ ಖಡ್ಗ ಅರ್ಪಣೆ:
ಜೂನ್ 12ರಂದು Kollur Mookambika temple ಗೆ ಭೇಟಿ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಭಕ್ತಿಭಾವದಿಂದ ದೇವಿಗೆ ಬೆಳ್ಳಿಯ ಖಡ್ಗವನ್ನು ಅರ್ಪಿಸಿದ ಅವರು ಈ ಭೇಟಿ ಧಾರ್ಮಿಕ ವಲಯದಲ್ಲಿ ವಿಶೇಷ ಗಮನ ಸೆಳೆದಿದೆ.
Bengaluru international airport ಮೂಲಕ ಆಗಮಿಸಿದ ಬಳಿಕ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ ಬೆಳೆಸಿದವರು, ದೇವಸ್ಥಾನದಲ್ಲಿ ನಡೆದ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗವಹಿಸಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿ ಗೌರವ ಸಲ್ಲಿಸಿದರು.
ವಿಜಯ್ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸೇರಿದ್ದರು. ವಿಜಯ್ ದೇಗುಲದಿಂದ ಹೊರ ಬರುತ್ತಿದಂತೆ ಜೈಕಾರ ಕೂಗಿ ಸಂಭ್ರಮಿಸಿದರು. ಸಿಎಂ ಅಭಿಮಾನಿಗಳತ್ತ ತೆರಳಿ ಶುಭಾಶಯ ವಿನಿಮಯ ಮಾಡಿಕೊಂಡರು. ದೇವರ ದರ್ಶನದ ವೇಳೆ ಭಕ್ತರ ಸಂಚಾರವನ್ನು ನಿಯಂತ್ರಿಸಿ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು.
Also Read:
ಧಾರಾಕಾರ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆಯಲ್ಲಿ ನೀರು ನುಗ್ಗಿ ವ್ಯಾಪಾರ ಸ್ಥಗಿತ