Belagavi news :
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಇದೀಗ ಹಿನ್ನಡೆಯ ಲಕ್ಷಣಗಳು ಕಾಣುತ್ತಿವೆ. ಬಡ ಮತ್ತು ಮಧ್ಯಮ ವರ್ಗಗಳ ಕುಟುಂಬಗಳ ಆಹಾರ ಭದ್ರತೆಗೆ ಪ್ರಮುಖ ಆಧಾರವಾಗಿರುವ ಪಡಿತರ ಅಕ್ಕಿ ವಿತರಣೆ ರಾಜ್ಯದ್ಯಂತ ಕಳೆದ ಮೂರು ತಿಂಗಳಿನಿಂದ ವಿಳಂಬವಾಗುತ್ತಿದ್ದು, ಸಾವಿರಾರು ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಕ್ಕಿ ವಿತರಣೆಯಲ್ಲಿ ಉಂಟಾಗಿರುವ ನಿರಂತರ ವಿರಂಬದಿಂದ ನ್ಯಾಯಬೆಲೆ ಅಂಗಡಿಗಳಿಗೆ ತೆರಳುವ ಫಲಾನುಭವಿಗಳು ಕಾಲಿ ಹಸ್ತದಿಂದ ಮನೆಗೆ ಮರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಜಿಲ್ಲೆಗಳಲ್ಲಿ ಪಡಿತರ ಅಕ್ಕಿ ಇನ್ನೂ ತಲುಪಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಪ್ರಶ್ನೆಗಳು ಮೂಡಿವೆ.
ಅಕ್ಕಿ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ಅಧಿಕೃತ ಸ್ಪಷ್ಟನೆಗಾಗಿ ಜನರು ಕಾಯುತ್ತಿದ್ದಾರೆ. ಇದೇ ವೇಳೆ, ಅಕ್ಕಿ ಖರೀದಿ ಮತ್ತು ಪೂರೈಕೆಗೆ ಅಗತ್ಯವಿರುವ ಹಣದ ಕೊರತೆಯೇ ವಿಳಂಬಕ್ಕೆ ಕಾರಣವೇ ಎಂಬ ಪ್ರಶ್ನೆಯು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದರೆ, ಈ ಕುರಿತು ಸರ್ಕಾರದಿಂದ ಅಧಿಕೃತ ಮಾಹಿತಿ ಹೊರ ಬರಬೇಕಿದೆ.
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಶೀಘ್ರದಲ್ಲೇ ಅಕ್ಕಿ ವಿತರಣೆಯನ್ನು ಸುಗಮಗೊಳಿಸಿ, ಬಾಕಿ ಉಳಿದ ಪಡಿತರವನ್ನು ವಿತರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಬಡ ಕುಟುಂಬಗಳ ದೈನಂದಿನ ಬದುಕಿಗೆ ನೇರವಾಗಿ ಸಂಬಂಧಿಸಿದ ಈ ಯೋಜನೆಯಲ್ಲಿ ಉಂಟಾಗಿರುವ ವಿಳಂಬಕ್ಕೆ ತ್ವರಿತ ಪರಿಹಾರ ಕಂಡುಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅನ್ನಭಾಗ್ಯ ಅಕ್ಕಿ ವಿತರಣೆ ಏಕೆ ವಿಳಂಬ ? ಹಣದ ಕೊರತೆ ಆರೋಪದ ನಡುವೆ ರಾಜ್ಯದ್ಯಂತ ಫಲಾನುಭವಿಗಳ ಪರದಾಟ :
ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ವಿತರಣೆ ತೀವ್ರ ವಿಳಂಬವಾಗಿದ್ದು, ಲಕ್ಷಾಂತರ ಫಲಾನುಭವಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ತಿಂಗಳು ಐದನೇ ತಾರೀಕಿನೊಳಗೆ ವಿತರಿಸಬೇಕಾದ ಅಕ್ಕಿ ಹಲವು ಕಡೆಗಳಲ್ಲಿ ಇನ್ನೂ ತಲುಪಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.
ಪಡಿತರ ಅಕ್ಕಿ ವಿತರಣೆಯಲ್ಲಿ ಈ ವಿಳಂಬಕ್ಕೆ ರಾಜ್ಯ ಸರ್ಕಾರದ ಬಳಿ ಅಕ್ಕಿ ಖರೀದಿಸಲು ಹಣದ ಕೊರತೆಯೇ ಕಾರಣವೇ ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸರ್ಕಾರದಿಂದ ಅಧಿಕೃತ ಸ್ಪಷ್ಟನೆ ನಿರೀಕ್ಷಿಸಲಾಗುತ್ತಿದೆ.
ಮಾಹಿತಿ ಪ್ರಕಾರ, ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸುಮಾರು 2.12 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಖರೀದಿಸುತ್ತದೆ. ಇದಕ್ಕಾಗಿ ಪ್ರತಿ ತಿಂಗಳು ಸುಮಾರು ₹300 ರಿಂದ 400 ಕೋಟಿ ಪಾವತಿಸಬೇಕಾಗುತ್ತದೆ. ಆದರೆ, ಕಳೆದ ಕೆಲವು ತಿಂಗಳಿಂದ ಈ ಪಾವತಿಯಲ್ಲಿ ವಿಳಂಬವಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಣ ಪಾವತಿ ತಡವಾಗುತ್ತಿರುವ ಕಾರಣ, ಕೇಂದ್ರದ ಗುದಮುಗಳಿಂದ ಅಕ್ಕಿಯನ್ನು ರಾಜ್ಯಕ್ಕೆ ಸಾಗಿಸುವ ಪ್ರಕ್ರಿಯೆಯು ವಿಳಂಬವಾಗುತ್ತಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಪೂರೈಕೆ ಸಮಯಕ್ಕೆ ಆಗದೆ, ರಾಜ್ಯದ ವಿವಿಧ ಜಿಲ್ಲೆಗಳ ಫಲಾನುಭವಿಗಳು ಪರದಾಡುವಂತಾಗಿದೆ.
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆಹಾರ ಭದ್ರತೆಗೆ ಪ್ರಮುಖವಾಗಿರುವ ಅನ್ನಭಾಗ್ಯ ಯೋಜನೆಯಲ್ಲಿ ಉಂಟಾಗಿರುವ ಈ ಸಮಸ್ಯೆಗೆ ಸರ್ಕಾರ ತ್ವರಿತ ಪರಿಹಾರ ಕಂಡು ಹಿಡಿದು, ಅಕ್ಕಿ ವಿತರಣೆಯನ್ನು ನಿಯಮಿತಗೊಳಿಸಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಅನ್ನಭಾಗ್ಯ ಅಕ್ಕಿ ವಿಳಂಬ - ನ್ಯಾಯಬೆಲೆ ಅಂಗಡಿಗಳ ಮುಂದೆ ಉದ್ದ ಸಾಲು, ಫಲಾನುಭವಿಗಳ ಆಕ್ರೋಶ ಹೆಚ್ಚಳ :
ರಾಜ್ಯಾದ್ಯಂತ ಅನ್ನ ಭಾಗ್ಯ ಯೋಜನೆ ಅಡಿ ಪಡಿತರ ಅಕ್ಕಿ ವಿತರಣೆ ವಿಳಂಬವಾಗುತ್ತಿರುವ ಪರಿಣಾಮ, ನ್ಯಾಯಬೆಲೆ ಅಂಗಡಿಗಳ ಮುಂದೆ ಸಾರ್ವಜನಿಕರು ಹಗಲು - ರಾತ್ರಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಕ್ಕಿ ಸರಬರಾಜು ಸಮಯಕ್ಕೆ ಸರಿಯಾಗಿ ಆಗದ ಕಾರಣ ಹಲವು ಪ್ರದೇಶಗಳಲ್ಲಿ ಫಲಾನುಭವಿಗಳು ಪದೇ ಪದೇ ರೇಷನ್ ಅಂಗಡಿಗಳಿಗೆ ತೆರಳುತ್ತಿದ್ದರೂ, ಖಾಲಿ ಹಸ್ತದಿಂದ ಮನೆಗೆ ಮರಳಬೇಕಾದ ಪರಿಸ್ಥಿತಿ ಎದುರಾಗಿದೆ.
ಹಲವು ನ್ಯಾಯಬೆಲೆ ಅಂಗಡಿಗಳಿಗೆ ಇನ್ನೂ ಅಕ್ಕಿ ತಲುಪದ ಹಿನ್ನೆಲೆಯಲ್ಲಿ, ಕೆಲವೇಡೆ ಅಂಗಡಿಗಳು ಮುಚ್ಚಿರುವುದರಿಂದ ಸಾರ್ವಜನಿಕರ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ. ವಿಶೇಷವಾಗಿ ದಿನಗೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳು ಹೆಚ್ಚಿನ ಸಂಕಷ್ಟ ಅನುಭವಿಸುತ್ತಿದ್ದು, ತಮ್ಮ ದೈನಂದಿನ ಕೆಲಸ ಬಿಟ್ಟು ರೇಷನ್ ಅಂಗಡಿಗಳ ಮುಂದೆ ಕಾಯಬೇಕಾದ ಪರಿಸ್ಥಿತಿ ಉಂಟಾಗಿದೆ.
ಪಡಿತರ ಫಲಾನುಭವಿಗಳಾದ ಚಂದ್ರಕಲಾ ಮತ್ತು ನಾಗರತ್ನಮ್ಮ ಸೇರಿದಂತೆ ಹಲವು ನಾಗರಿಕರು, "ಕೂಲಿ ಮಾಡಿ ಬದುಕುವ ನಮಗೆ ಪ್ರತಿದಿನ ಅಂಗಡಿಗೆ ಬಂದು ಕಾಯುವುದೇ ಕೆಲಸವಾಗಿದೆ. ಅಕ್ಕಿ ಯಾವಾಗ ಸಿಗುತ್ತದೆ ಎಂಬ ಸ್ಪಷ್ಟ ಮಾಹಿತಿಯು ಇಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಉಂಟಾಗಿರುವ ಈ ಸಮಸ್ಯೆಯನ್ನು ಸರ್ಕಾರ ಯಾವ ರೀತಿಯಲ್ಲಿ ಪರಿಹರಿಸುತ್ತದೆ ಎಂಬುವುದು ಈಗ ಚರ್ಚೆಯ ವಿಷಯವಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರ ಅಕ್ಕಿಯನ್ನು ಯಾವಾಗ ಸುಗಮಗೊಳಿಸುತ್ತದೆ ಎಂಬುದನ್ನು ಫಲಾನುಭವಿಗಳು ಎದುರು ನೋಡುತ್ತಿದ್ದಾರೆ.