<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಇರಾನ್ ವೇಳೆ ಮತ್ತೆ ಅಮೆರಿಕದ ದಾಳಿ: ಯುದ್ಧ ಭೀತಿ ಮತ್ತಷ್ಟು ತೀವ್ರ

ಇರಾನ್ ವೇಳೆ ಮತ್ತೆ ಅಮೆರಿಕದ ದಾಳಿ: ಯುದ್ಧ ಭೀತಿ ಮತ್ತಷ್ಟು ತೀವ್ರ
Summary: The US and Iran have launched airstrikes, further heightening tensions in the Middle East. Here's a full breakdown of the cause of the attacks, the areas targeted and the global response.

BELAGAVI NEWS :

ವಾಷಿಂಗ್ಟನ್: ಹಲವು ದಿನಗಳಿಂದ ತಣ್ಣಗಾಗಿದ್ದ ಅಮೆರಿಕ -ಇರಾನ್ ಸಂಘರ್ಷ ಮತ್ತೆ ತೀವ್ರಗೊಂಡಿದೆ. ಜೋರ್ಡನ್ ನಲ್ಲಿರುವ ಅಮೆರಿಕದ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಯಲು ಯತ್ನಿಸಿದ ಬೆನ್ನಲ್ಲೇ ಅಮೆರಿಕ ಇರಾನ್ ನೊಳಗಿನ ಹಲವು ಗುರಿಗಳ ಮೇಲೆ ಮತ್ತೆ ವೈಮಾನಿಕ ದಾಳಿ ಆರಂಭಿಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಆತಂಕ ಹೆಚ್ಚಾಗಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ನೀಡಿರುವ ಮಾಹಿತಿಯಂತೆ, ಇರಾನ್ ನಿಂದ ಉಡಾವಣೆಯಾದ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆಹಿಡಿಯಲಾಗಿದೆ. ಮಧ್ಯಪ್ರಾಚ್ಯದಲ್ಲಿ ನಿಯೋಜಿಸಲಾದ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಗೆ ಗುರಿಯಾದ ಸೇನಾ ನೆಲೆಯ ಹೆಸರನ್ನು ಅಮೆರಿಕ ಅಧಿಕೃತವಾಗಿ ಬಹಿರಂಗಪಡಿಸದಿದ್ದರೂ, ಜೋರ್ಡನ್ ನಲ್ಲಿರುವ ಅಮೆರಿಕದ ಸೇನಾ ತಾಣವೇ ಗುರಿಯಾಗಿತ್ತು ಎಂದು ಹಲವು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಜೊತೆ ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡುವ ಉದ್ದೇಶದಿಂದ ಅಮೆರಿಕ ಕೆಲ ದಿನಗಳ ಹಿಂದೆ ವೈಮಾನಿಕ ದಾಳಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಆದರೆ ಈ ಬಳಿಕ ಅಮೆರಿಕದ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಮೊದಲ ನೇರ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಲು ಯತ್ನಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತೊಮ್ಮೆ ಉದ್ವಿಗ್ನಗೊಂಡಿದೆ.

ಈ ಬೆಳವಣಿಗೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ನಡೆಸಿದ ದಾಳಿಗೆ ಕಠಿಣ ಪ್ರತಿದಾಳಿ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಸೈನಿಕರು ಅಥವಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಯುವ ಯಾವುದೇ ದಾಳಿಯನ್ನು ಸಹಿಸಲಾಗುವುದಿಲ್ಲ ಎಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆಯೇ ಮಂಗಳವಾರ ತಡರಾತ್ರಿ ಅಮೆರಿಕ ಮತ್ತು ಸೌದಿ ಅರೇಬಿಯಾ ಪಡೆಗಳು ಇರಾಕ್ ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇರಾನ್ ಬೆಂಬಲಿತ ಸಶಸ್ತ್ರ ಸಂಘಟನೆಗಳ ಮೇಲೆ ಜಂಟಿ ವೈಮಾನಿಕ ದಾಳಿ ನಡೆಸಿವೆ. ಈ ದಾಳಿಯಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ಪಾಪುಲರ್ ಮೊಬೈಲೈಸೇಶನ್ ಫೋರ್ಸಸ್ (PMF) ತಿಳಿಸಿದೆ.

ಈ ವಾರದ ಆರಂಭದಲ್ಲಿ ಟ್ರಂಪ್, ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಮಾತುಕತೆ ಸಕಾರಾತ್ಮಕವಾಗಿ ಸಾಗುತ್ತಿದೆ ಎಂದು ಹೇಳಿದ್ದರು. ಆದರೆ ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಮತ್ತೆ ಮಿಲಿಟರಿ ಕಾರ್ಯಾಚರಣೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದೀಗ ಇರಾನ್ ಮತ್ತು ಅಮೆರಿಕದ ನಡುವಿನ ಹೊಸ ದಾಳಿಗಳಿಂದ ಮಧ್ಯ ಪ್ರಾಂತ್ಯದಲ್ಲಿ ಭದ್ರತಾ ಪರಿಸ್ಥಿತಿ ಮತ್ತಷ್ಟು ಸಂಕೀರ್ಣಗೊಂಡಿದ್ದು, ಜಾಗತಿಕ ಸಮುದಾಯದ ಗಮನ ಮತ್ತು ಪ್ರದೇಶದತ್ತ ಕೇಂದ್ರೀಕೃತವಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online