<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮತ್ತೊಂದು ಹಿನ್ನಡೆ : ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮತ್ತೊಂದು ಹಿನ್ನಡೆ : ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ
Summary: TMC leader Mamata Banerjee has suffered another political setback. The resignation of TMC MP Sushmita Dev has led to a fresh debate about developments within the party.

belagavi news :

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ರಾಜಕೀಯ ಆಘಾತ ಎದುರಾಗಿದೆ. ಪಕ್ಷದ ಹಿರಿಯ ನಾಯಕಿ ಹಾಗೂ ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್ ತಮ್ಮ ರಾಜ್ಯಸಭಾ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಟಿಎಂಸಿ ಪಾಳಯದಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಆಪ್ತ ನಾಯಕರಲ್ಲಿ ಒಬ್ಬರಾಗಿದ್ದ ಸುಖೇಂದ್ರ ಶೇಖರ್ ರಾಯ್ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೇವಲ ಒಂದು ವಾರದೊಳಗೆ ಮತ್ತೂರು ಹಿರಿಯ ನಾಯಕಿ ಸುಶ್ಮಿತಾ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿರುವುದು ಟಿಎಂಸಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ತೃಣ ಮೂಲ ಕಾಂಗ್ರೆಸ್ ಪಕ್ಷದೊಳಗೆ ಬಿನ್ನಾಭಿಪ್ರಾಯಗಳು ತೀವ್ರಗೊಂಡಿವೆ ಎನ್ನಲಾಗುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಪಕ್ಷದ ಹಲವು ಸಂಸದರು ಹಾಗೂ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಕೆಲವರು ರಾಜೀನಾಮೆ ನೀಡುವ ಮೂಲಕ ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

Sponsored

15 ವರ್ಷಗಳ ಕಾಲ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಭಾವಿ ಸ್ಥಾನ ಕಾಯ್ದುಕೊಂಡಿರುವ ಮಮತಾ ಬ್ಯಾನರ್ಜಿ ಅವರಿಗೆ ಪಕ್ಷದೊಳಗಿನ ಈ ಬೆಳವಣಿಗೆಗಳು ಸವಾಲಾಗಿ ಪರಿಣಮಿಸುತ್ತಿವೆ. ಸುಶ್ಮಿತಾ ದೇವ ಅವರ ರಾಜೀನಾಮೆ ಟಿಎಂಸಿಯ ಆಂತರಿಕ ಬಿಕ್ಕಟ್ಟನ್ನು ಮತ್ತಷ್ಟು ಬಹಿರಂಗಗೊಳಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸುಶ್ಮಿತಾ ದೇವ್ ರಾಜಿನಾಮೆಯ ಹಿಂದಿನ ನಿಖರ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ. ಆದರೆ ಪಕ್ಷದೊಳಗಿನ ಅಸಮಾಧಾನ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ಈ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಉಪರಾಷ್ಟ್ರಪತಿಗೆ ರಾಜಿನಾಮೆ ಪತ್ರ ಸಲ್ಲಿಸಿದ ಸುಶ್ಮಿತ ದೇವ್:

ಟಿಎಂಸಿ ಹಿರಿಯ ನಾಯಕಿ ಹಾಗೂ ರಾಜ್ಯಸಭಾ ಸಂಸದ ಸುಶ್ಮಿತಾ ದೇವ್ ರಾಜೀನಾಮೆ ಪತ್ರವನ್ನು ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಯಾಗಿರುವ ಸಿಪಿ ರಾಧಾಕೃಷ್ಣನ್ ಅವರಿಗೆ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಲಾಗಿದೆ.

Sponsored

ರಾಜಿನಾಮೆ ಸಲ್ಲಿಸಿದ ಬಳಿಕ ಸುಶ್ಮಿತಾ ದೇವ್ ಅವರ ಮುಂದಿನ ರಾಜಕೀಯ ನಡೆ ಏನಿರಬಹುದು ಎಂಬ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿವೆ. ಈ ನಡುವೆ ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರೊಂದಿಗೆ ಮುಗುಳ್ನಗುತ್ತಾ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.

ರಾಜಿನಾಮೆ ಪತ್ರದಲ್ಲಿ ಸುಶ್ಮಿತಾ ದೇವ್,"ನಾನು ಟಿ ಎಂ ಸಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಬೇಕು. ರಾಜ್ಯಸಭಾ ಸದಸ್ಯೆಯಾಗಿ ನನ್ನ ಅಧಿಕಾರ ಅವಧಿಯಲ್ಲಿ ಸಹಕಾರ ನೀಡಿದ ಉಪರಾಷ್ಟ್ರಪತಿಗಳು, ಗೌರವಾನ್ವಿತ ಉಪ ಸಭಾಪತಿಗಳು ಹಾಗೂ ರಾಜ್ಯಸಭಾ ಸಚಿವಾಲಯದ ಎಲ್ಲಾ ಅಧಿಕಾರಿಗಳಿಗೆ ನಾನು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಉಲ್ಲೇಖಿಸಿದ್ದಾರೆ.

ಸುಶ್ಮಿತಾ ದೇವ್ ಅವರ ಈ ನಿರ್ಧಾರ ತೃಣ ಮೂಲ ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಹಲವು ಪ್ರಶ್ನೆಗಳು ಹುಟ್ಟು ಹಾಕಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಮತ್ತೊಂದು ರಾಜಕೀಯ ಹಿನ್ನಡೆಯಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಅವರು ಯಾವ ಪಕ್ಷವನ್ನು ಸೇರುತ್ತಾರೆ ಎಂಬುದರ ಕುರಿತು ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.

'ರಾಜಿನಾಮೆ ನನ್ನ ವೈಯಕ್ತಿಕ ನಿರ್ಧಾರ: ಬಿಜೆಪಿ ಸೇರ್ಪಡೆ ಊಹಾಪೋಗಳ ನಡುವೆ ಸುಶ್ಮಿತ ಸ್ಪಷ್ಟನೆ:

Sponsored

ರಾಜ್ಯಸಭಾ ಸದಸ್ಯತ್ವ ಹಾಗೂ ಋಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ ಅವರನ್ನು ಭೇಟಿಯಾದ ಸುಶ್ಮಿತಾ ದೇವ್, ತಮ್ಮ ರಾಜೀನಾಮೆ ಕುರಿತು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದವರು,"ರಾಜಿನಾಮೆ ನೀಡುವ ನಿರ್ಧಾರ ಸಂಪೂರ್ಣವಾಗಿ ನನ್ನದೇ ಆಗಿದ್ದು, ಇದರ ಹಿಂದಿ ಯಾವುದೇ ವ್ಯಕ್ತಿಯ ಅಥವಾ ಪಕ್ಷದ ಪ್ರಭಾವ ಇಲ್ಲ" ಎಂದು ಹೇಳಿದ್ದಾರೆ.

ತಮ್ಮ ನಿರ್ಧಾರದ ಹಿಂದಿನ ಕಾರಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು,"ನನ್ನ ಈ ಹೆಜ್ಜೆಯ ಹಿಂದೆ ಹಲವು ಕಾರಣಗಳಿವೆ. ಆದರೆ ಅವುಗಳನ್ನು ಸಾರ್ವಜನಿಕವಾಗಿ ವಿವರಿಸುವ ಅಗತ್ಯವಿಲ್ಲ. ಅದು ಬಹಳ ದೊಡ್ಡ ಕಥೆ" ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸುತ್ತಿದ್ದಾರೆ.

ಟಿಎಂಸಿಗೆ ಒಂದೇ ವಾರದಲ್ಲಿ ಎರಡನೇ ರಾಜ್ಯಸಭಾ ಆಘಾತ:

ಸುಶ್ಮಿತಾ ದೇವ್ ಅವರು ರಾಜೀನಾಮೆ ಪ್ರಣಮೂಲ ಕಾಂಗ್ರೆಸ್ ಗೆ ಒಂದೇ ವಾರದಲ್ಲಿ ಎದುರಾಗಿರುವ ಎರಡನೇ ದೊಡ್ಡ ಹಿನ್ನಡೆಯಾಗಿದೆ. ಕಳೆದ 13 ವರ್ಷಗಳಿಂದ ರಾಜ್ಯಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದ ಸುಖೇಂದ್ರ ಶೇಖರ್ ರಾಯ್ ಇತ್ತೀಚೆಗೆ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಬೆನ್ನಲ್ಲೇ ಸುಶ್ಮಿತಾ ದೇವ್ ಕೂಡ ಪಕ್ಷ ತೊರೆದಿರುವುದು ಟಿಎಂಸಿ ನಾಯಕತ್ವಕ್ಕೆ ಭಾರಿ ಆಘಾತ ನೀಡಿದೆ.

Sponsored

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಇತ್ತೀಚೆಗೆ ಪಕ್ಷದೊಳಗಿನ ಭಿನ್ನಮತ ಮತ್ತು ಅಸಮಾಧಾನ ಹೆಚ್ಚುತ್ತಿರುವ ಬಗ್ಗೆ ವರದಿಗಳು ಕೇಳಿ ಬರುತ್ತಿವೆ. ಟಿ ಎಂ ಸಿ ಶಾಸಕಾಂಗ ಪಕ್ಷದಲ್ಲೂ ಅಸಮಾಧಾನ ಭುಗಿಲೆದ್ದಿದ್ದು, ಹಲೋ ಶಾಸಕರು ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿ ಪರ ನಿಂತಿದ್ದಾರೆ ಎನ್ನುವ ಸುದ್ದಿಗಳು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್ ನಿಂದ ಟಿಎಂಸಿಗೆ ಈಗ ಮುಂದಿನ ಹೆಜ್ಜೆ ಯಾವುದು? :

ಅಸ್ಸಾಂನ ಸಿಲ್ಚಾರ್ ಲೋಕಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಸಂಸದೆ ಆಗಿರುವ ಸುಶ್ಮಿತಾ ದೇವ್, 2019ರ ಲೋಕಸಭಾ ಚುನಾವಣೆಯ ಸೋಲಿನ ಬಳಿಕ 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. ನಂತರ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಗುರುತಿಸಿಕೊಂಡು ಅವರು ಹೇಳುತ್ತಾರೆ ಅಥವಾ ಹೊಸ ರಾಜಕೀಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಪ್ರಶ್ನೆ ದೇಶದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Also Read:

Sponsored

ಬೆಳಗಾವಿಯಲ್ಲಿ ಭಕ್ತಿ ಸಂಭ್ರಮ : ಸಾವಿರ ಕಂಠಗಳ ವಚನೋತ್ಸವ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online