Belagavi News:
ದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ನಂಬಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ "ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026' ಅನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.
ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಈ ಮಹತ್ವದ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ವಿಧಾನಗಳು ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ದುರುಪಯೋಗಗಳನ್ನು ತಡೆಯುವ ಕಠಿಣ ನಿಯಮಗಳನ್ನು ಜಾರಿಗೆ ತರುವ ಉದ್ದೇಶವನ್ನು ಈ ಮಸೂದೆ ಹೊಂದಿದೆ. ಸಾರ್ವಜನಿಕ ಪರೀಕ್ಷೆಗಳ ವ್ಯವಸ್ಥೆಯನ್ನು ಹೆಚ್ಚು ಸುರಕ್ಷಿತ, ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತವಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
Anti Paper Leak Bill 2026 ಕುರಿತ ಸಂಸತ್ ಚರ್ಚೆ, ಮಸೂದೆಯ ಪ್ರಮುಖ ಅಂಶಗಳು ಮತ್ತು ಇತ್ತೀಚಿನ ಬೆಳವಣಿಗೆಗಳ ಲೈವ್ ಅಪ್ಡೇಟ್ ಗಳನ್ನು ಇಲ್ಲಿ ವೀಕ್ಷಿಸಿ.
ನೀಟ್ ವಿವಾದ, ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂಬುದು ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.