<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ವಿರೋಧ ಪಕ್ಷಗಳ ಗದ್ದಲದ ನಡುವೆಯೂ Anti paper Leak Bill ಪಾಸ್ : ಪ್ರಶ್ನೆ ಪ್ರತ್ರಿಕೆ ಸೋರಿಕೆಗೆ ಕಠಿಣ ಕ್ರಮ

ವಿರೋಧ ಪಕ್ಷಗಳ ಗದ್ದಲದ ನಡುವೆಯೂ Anti paper Leak Bill ಪಾಸ್ : ಪ್ರಶ್ನೆ ಪ್ರತ್ರಿಕೆ ಸೋರಿಕೆಗೆ ಕಠಿಣ ಕ್ರಮ
Summary: Despite huge uproar from opposition parties, the Anti Paper Leak Bill has been passed in the Lok Sabha. The central government has introduced this important bill with the aim of curbing examination irregularities and question paper leaks. Under the new law, strict action can be taken against those involved in examination irregularities. Here is the discussion in the Lok Sabha, the objections of the opposition parties and the main points of the bill.

BELAGAVI NEWS :

Anti - paper Leak Bill Passed : ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ, ಅಕ್ರಮಗಳಿಗೆ ಕಠಿಣ ಶಿಕ್ಷೆ

ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೂ ಲೋಕಸಭೆಯಲ್ಲಿ ಮಹತ್ವದ 'ಸಾರ್ವಜನಿಕ ಪರೀಕ್ಷೆಗಳು ( ಅನ್ಯಾಯದ ವಿಧಾನಗಳ ತಡೆಗಟ್ಟುವಿಗೆ) ತಿದ್ದುಪಡಿ ಮಸೂದೆ, 2026' ಅಂಗೀಕಾರ ಗೊಂಡಿದೆ.

ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದ ನೀಟ್ ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಿತು.

ಮಸೂದೆಯಡಿ ಸಂಘಟಿತ ಪರೀಕ್ಷಾ ಮಾಫಿಯಾ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಐದು ವರ್ಷದಿಂದ ಗರಿಷ್ಠ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹ 50 ಲಕ್ಷದವರೆಗೆ ದಂಡ ವಿಧಿಸುವ ಪ್ರಸ್ತಾವನೆ ಇದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಿಸುವುದು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ.

ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಪ್ರತಿಪಕ್ಷಗಳು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದರು, ಸರ್ಕಾರ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆದುಕೊಂಡಿದೆ.

Anti paper Leak Bill: ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಶಿಕ್ಷೆ, ತನಿಖೆಗೆ ವಿಶೇಷ ಕಾರ್ಯಪಡೆ ರಚನೆ

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಆಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರದ Anti paper Leak Bill ನಲ್ಲಿ ಕಠಿಣ ಶಿಕ್ಷೆಯ ಪ್ರಸ್ತಾವನೆ ಮಾಡಲಾಗಿದೆ. ಸಂಘಟಿತ ಪರೀಕ್ಷಾ ಮಾಫಿಯ, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಂಚನೆಯಲ್ಲಿ ಭಾಗಿಯಾಗುವ ತಪ್ಪಿತಸ್ಥರಿಗೆ ಕನಿಷ್ಠ ಐದು ವರ್ಷದಿಂದ ವರುಷ 10 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ₹50 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಗಳ ತನಿಖೆಯನ್ನು ತ್ವರಿತಗೊಳಿಸಲು ವಿಶೇಷ ಕಾರ್ಯಪಡೆ ರಚಿಸುವ ಪ್ರಸ್ತಾವನೆ ಇದ್ದು, ತನಿಖೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರಕರಣಗಳ ವಿಚಾರಣೆಯನ್ನು ವೇಗವಾಗಿ ಮುಗಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆಗೂ ಅವಕಾಶ ನೀಡಲಾಗಿದೆ.

ದೇಶದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ, ವಿಶ್ವಾಸಾರ್ಹ ಮತ್ತು ತಂತ್ರಜ್ಞಾನ ಆಧಾರಿತವಾಗಿರಿಸಲು ಉನ್ನತ ಮಟ್ಟದ ಕಾರ್ಯಪಡೆ ರಚಿಸಲಾಗುತ್ತಿದ್ದು, ಇದಕ್ಕೆ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವ ವಹಿಸಲಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು, ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸುವುದು ಮತ್ತು ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ.

Anti paper Leak Bill: ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರವಾಗಿ ಸಂಸತ್ ನಲ್ಲಿ ಗದ್ದಲ, ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ದೆಹಲಿ ಪೊಲೀಸರ ಕ್ರಮ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಉತ್ತರಕ್ಕೆ ಆಗ್ರಹಿಸಿ ಪ್ರತಿಪಕ್ಷ ನಾಯಕರು ಲೋಕಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ಈ ಗದ್ದಲದ ನಡುವೆ 'ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಮಸೂದೆ, 2026' ಧ್ವನಿ ಮತದ ಮೂಲಕ ಅಂಗೀಕಾರಗೊಂಡಿದೆ.

ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ಯಾವುದೇ ಕೋಪದ ಅಭಿವ್ಯಕ್ತಿಯಲ್ಲ, ಅದು ಅವರ ನೈಜ ಧ್ವನಿಯಾಗಿದೆ ಎಂದು ಹೇಳಿದರು. ಸರ್ಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಬೇಕು ಎಂದು ಅವರು ಒತ್ತಾಯಿಸಿದರು.

ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, ಯುವಜನರ ಭವಿಷ್ಯ ರಕ್ಷಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕಾನೂನು ಕ್ರಮ ಕೈಗೊಂಡಿದೆ ಎಂದು ಶ್ಲಾಘಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ತೋರಿಕೆ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಈ ಕಠಿಣ ತಿದ್ದುಪಡಿ ಮಸೂದೆಯನ್ನು ತಂದಿದೆ.

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ಮಸೂದೆ ಈಗ ರಾಜ್ಯಸಭೆಯ ಅನುಮೋದನೆಗೆ ತೆರಳಲಿದೆ. ಬಳಿಕ ರಾಷ್ಟ್ರಪತಿಯವರ ಅಂಕಿತ ದೊರೆತ ನಂತರ ದೇಶಾದ್ಯಂತ ಅಧಿಕೃತವಾಗಿ ಜಾರಿಗೆ ಬರಲಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online