<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಪ್ರವಾಹದ ಹೊಡೆತಕ್ಕೆ ಅಸ್ಸಾಂ ಕಂಗಾಲು : ಸಾವಿನ ಸಂಖ್ಯೆ 75, ಪರಿಹಾರ ಹೆಚ್ಚಿಸಿದ ಸರ್ಕಾರ

ಪ್ರವಾಹದ ಹೊಡೆತಕ್ಕೆ ಅಸ್ಸಾಂ ಕಂಗಾಲು : ಸಾವಿನ ಸಂಖ್ಯೆ 75, ಪರಿಹಾರ ಹೆಚ್ಚಿಸಿದ ಸರ್ಕಾರ
Summary: The death toll due to the devastating floods in Assam has risen to 75. The government has increased the compensation amount for the affected families, and rescue and relief work is continuing.

Belagavi News :

ಅಸ್ಸಾಂನಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 75 ಕ್ಕೆ ಏರಿಕೆಯಾಗಿದೆ.ನಿರಂತರ ಮಳೆ ಹಾಗೂ ಪ್ರವಾಹದ ಪರಿಣಾಮ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೀಮಂತ್ ಬಿಸ್ವ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಪ್ರವಾಹ ಸಂತ್ರಸ್ತರ ನೆರವಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ರಕ್ಷಣಾ ಕಾರ್ಯ ಪರಿಹಾರ ವಿತರಣೆ ಹಾಗೂ ಹಾನಿಗೊಳಗಾದ ಕುಟುಂಬಗಳಿಗೆ ನೆರವು ನೀಡುವ ಕಾರ್ಯಗಳು ತ್ವರಿತ ಗತಿಯಲ್ಲಿ ನಡೆಯುತ್ತಿವೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಡಳಿತದಿಂದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಂತ್ರಸ್ತರಿಗೆ ಅಗತ್ಯ ವಸ್ತುಗಳು ಮತ್ತು ಪುನರ್ವಸತಿ ನೆರವು ಒದಗಿಸಲು ಕ್ರಮ ವಹಿಸಲಾಗಿದೆ. ಅಸ್ಸಾಂ ಪ್ರವಾಹ, ಪ್ರವಾಹ ಪರಿಸ್ಥಿತಿ ಹಾಗೂ ಸರ್ಕಾರದ ಪರಿಹಾರ ಕ್ರಮಗಳು ಪದ್ಯ ದೇಶದ ಗಮನ ಸೆಳೆದಿವೆ.

ಅಸ್ಸಾಂ ಪ್ರವಾಹ - ವೃತರು ಮತ್ತು ಕಾಣೆಯಾದವರ ಕುಟುಂಬಗಳಿಗೆ ಪರಿಹಾರ ಮೊತ್ತ ಒಂಬತ್ತು ಲಕ್ಷಕ್ಕೆ ಹೆಚ್ಚಳ :

ಅಸ್ಸಾಂನಲ್ಲಿ ಪ್ರವಾಹದಿಂದ ಮೃತಪಟ್ಟವರು ಹಾಗೂ ಕಾಣೆಯಾಗಿರುವವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. ಸಂತ್ರಸ್ತ ಕುಟುಂಬಗಳಿಗೆ ನೀಡುವ ಪರಿಹಾರ ಧನವನ್ನು 9 ಲಕ್ಷ ರೂ. ಗೆ ಏರಿಕೆ ಮಾಡಲಾಗಿದೆ.

ಭೀಕರ ಪ್ರವಾಹದಿಂದ ಉಂಟಾದ ಜೀವ ಹಾನಿ ಹಾಗೂ ನಷ್ಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಮುಂದುವರೆದಿದ್ದು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸಲಾಗುತ್ತಿದೆ.

ಅಸ್ಸಾಂ ಪ್ರವಾಹ ಪರಿಸ್ಥಿತಿಯಲ್ಲಿ ಸುಧಾರಣೆ - ರಕ್ಷಣಾ ಕಾರ್ಯ ಮುಂದುವರಿಕೆ, ಮೃತರ ಸಂಖ್ಯೆ ಏರಿಕೆ :

ಅಸ್ಸಾಂ ನಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದ್ದರು, ಒಟ್ಟಾಗಿ ಪ್ರವಾಹ ಪರಿಸ್ಥಿತಿಯಲ್ಲಿ ನಿಧಾನವಾಗಿ ಸುಧಾರಣೆ ಕಂಡು ಬರುತ್ತಿದೆ. ಹಲವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದು, ಜನ ಜೀವನ ಸಹಜ ಸ್ಥಿತಿಗೆ ಮರಳುವ ಪ್ರಯತ್ನಗಳು ನಡೆಯುತ್ತಿವೆ.

ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ರಕ್ಷಣಾ ಪಡೆಗಳು ಹಗಲಿರುಳು ಕಾರ್ಯಾಚರಣೆ ನಡೆಸುತ್ತಿವೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ಹಾಗೂ ಸ್ಥಳೀಯ ತಂಡಗಳು ರಕ್ಷಣಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲಾಗುತ್ತಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online