<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಮಳೆ ಅಬ್ಬರಕ್ಕೆ ಅಸ್ಸಾಂ ತತ್ತರ : ಆರು ಜಿಲ್ಲೆಗಳಲ್ಲಿ ಪ್ರವಾಹ, ಜನಜೀವನ ಅಸ್ತವ್ಯಸ್ತ

ಮಳೆ ಅಬ್ಬರಕ್ಕೆ ಅಸ್ಸಾಂ ತತ್ತರ : ಆರು ಜಿಲ್ಲೆಗಳಲ್ಲಿ ಪ್ರವಾಹ, ಜನಜೀವನ ಅಸ್ತವ್ಯಸ್ತ
Summary: The flood situation in Assam has worsened. One flood-related death has been reported in Sonitpur district, the Assam Disaster Reporting and Information Management System said. Floods have affected life in several districts and rescue operations are underway.

belagavi news :

ಅಸ್ಸಾಂನಲ್ಲಿ ಪ್ರವಾಹದ ಅಬ್ಬರ : ಆರು ಜಿಲ್ಲೆಗಳಲ್ಲಿ 37 ಸಾವಿರಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಗುವಾಹಟಿ : ಅಸ್ಸಾಂ ನ 6 ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 37,032 ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರವಾಹ ಸಂಬಂಧಿತವಾಗಿ ಸೋನಿತ್ ಪುರ ಜಿಲ್ಲೆಯಲ್ಲಿ ಓರ್ವ ಸಾವು ಸಂಭವಿಸಿದೆ ಎಂದು ಅಸ್ಸಾಂ ವಿಪತ್ತು ವರದಿ ಮತ್ತು ಮಾಹಿತಿ ನಿರ್ವಹಣಾ ವ್ಯವಸ್ಥೆ ತಿಳಿಸಿದೆ.

DRIMS ವರದಿ ಪ್ರಕಾರ, ಸುನಿತ್ ಪುರ, ದಿಬ್ರುಗಡ್, ಲಖಿಂಪುರ, ಧೇಮಾಜಿ, ಜೋರ್ಹತ್ ಮತ್ತು ಶಿವಸಾಗರ್ ಜಿಲ್ಲೆಗಳು ಪ್ರವಾಹದಲ್ಲಿ ಭಾದಿತವಾಗಿವೆ. ಒಟ್ಟು 12 ಕಂದಾಯ ವೃತ್ತಗಳು ಮತ್ತು 99 ಗ್ರಾಮಗಳು ನೀರಿನ ಹೊಡೆತಕ್ಕೆ ಸಿಲುಕಿವೆ.

ಪ್ರಸ್ತುತ ಯಾವುದೇ ಪ್ರಮುಖ ನದಿಗಳು ಅಪಾಯ ಮಟ್ಟ ಅಥವಾ ಗರಿಷ್ಠ ಪ್ರವಾಹ ಮಟ್ಟ ಮೀರಿ ಹರಿಯುತ್ತಿಲ್ಲವಾದರೂ, ಪ್ರವಾಹದ ನೀರು 1,103,943ಹೆಕ್ಟರ್ ಕೃಷಿ ಪ್ರದೇಶವನ್ನು ಆವರಿಸಿದೆ. ಇದರಿಂದ ರೈತರು ಮತ್ತು ಗ್ರಾಮೀಣ ಪ್ರದೇಶದ ಜನರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು,ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.

ಅಸ್ಸಾಂ ಪ್ರವಾಹ ತೀವ್ರ : ಲಖಿಂಪುರದಲ್ಲಿ 35 ಸಾವಿರಕ್ಕೂ ಹೆಚ್ಚು ಜನ ಬಾಧಿತಗಳನ್ನು ಪರಿಹಾರ ಕೇಂದ್ರಗಳಿಂದ ನೆರವು

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಲಖಿಂಪುರ ಜಿಲ್ಲೆ ಅತ್ಯಂತ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದೆ. ಇಲ್ಲಿ ಸುಮಾರು 35,696 ಜನರು ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಂತರ ಸೋನಿತ್ ಪುರ ಮತ್ತು ಧೇಮಾಜಿ ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಜನರು ಬಾಧಿತರಾಗಿದ್ದಾರೆ.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 20 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 6,984ಜನರು ಅಗತ್ಯ ನೆರವು ಪಡೆಯುತ್ತಿದ್ದಾರೆ. ಸದ್ಯ ಯಾವುದೇ ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವರದಿ ತಿಳಿಸಿದೆ.

ಸೋನಿತ್ ಪುರ ಜಿಲ್ಲೆಯಲ್ಲಿ ಪ್ರವಾಹ ಸಂಬಂಧಿತ ಒಂದು ಸಾವು ವರದಿಯಾಗಿದ್ದು, ಯಾವುದೇ ವ್ಯಕ್ತಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿಲ್ಲ. ಪ್ರವಾಹದಿಂದ ಸುಮಾರು16,139 ಜಾನುವಾರುಗಳು ಬಾಧಿತವಾಗಿದ್ದು, ಎರಡು ಪ್ರಾಣಿಗಳು ಕೊಚ್ಚಿ ಹೋಗಿವೆ.

ಇದಲ್ಲದೆ, ಪ್ರವಾಹದ ಪರಿಣಾಮ ವಸತಿ ಮೂಲ ಸೌಕರ್ಯಕ್ಕೂ ಹಾನಿಯಾಗಿದೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇಟ್ಟು, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ತೀವ್ರಗೊಂಡಿವೆ. ಸೋನಿತ್ ಪುರ ಜಿಲ್ಲೆಯಲ್ಲಿ ರಾಜ್ಯ ವಿಪತ್ತು ಪ್ರಕ್ರಿಯೆ ಪಡೆ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 16 ಜನರನ್ನು ದೋಣಿಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಶಿವಸಾಗರ್ ಜಿಲ್ಲೆಯ ನೀರಿನಿಂದ ಆವೃತವಾಗಿರುವ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಗ್ರಹವಾಗಿರುವ ನೀರನ್ನು ಹೊರಹಾಕಲು ಕಚ್ಚಾ ಚರಂಡಿಗಳನ್ನು ನಿರ್ಮಿಸಲಾಗುತ್ತಿದ್ದು, ಹ್ಯಾಮ್ ಪೈಪ್ ಗಳನ್ನು ಅಳವಡಿಸಿ ನೀರು ಹರಿವಿಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಈಶಾನ್ಯ ಭಾರತದಲ್ಲಿ ಆರು ದಿನ ಭಾರಿ ಮಳೆ ಮುನ್ಸೂಚನೆ : ಅಸ್ಸಾಂ, ಮೇಘಾಲಯ ಸೇರಿದಂತೆ ಹಲವು ರಾಜ್ಯಗಳಿಗೆ ಎಚ್ಚರಿಕೆ

ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಆರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 15 ರಿಂದ 20ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂಮತ್ತು ತ್ರಿಪುರ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

ವಿಶೇಷವಾಗಿ ಜುಲೈ 15 ರಿಂದ 20 ರವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ, ಜುಲೈ 15 ರಿಂದ 18ರ ವರೆಗೆ ನಾಗಾಲ್ಯಾಂಡ್, ಮಣಿಪುರ್, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮಿಂಚಿನ ಸಾಧ್ಯತೆಯೂ ಇದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.ನಿರಂತರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿವೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online