<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಪ್ರಯಾಣಿಕರ ಗಮನಕ್ಕೆ : ಮೇ 9ರಂದು ಸಾರ್ವಜನಿಕರಿಗೆ ಸಾರಿಗೆ ಸೇವೆ ಬದಲಾವಣೆಗಳು ಉಂಟಾಗುವ ಸಾಧ್ಯತೆ ಇದೆ

ಪ್ರಯಾಣಿಕರ ಗಮನಕ್ಕೆ : ಮೇ 9ರಂದು ಸಾರ್ವಜನಿಕರಿಗೆ ಸಾರಿಗೆ ಸೇವೆ ಬದಲಾವಣೆಗಳು ಉಂಟಾಗುವ ಸಾಧ್ಯತೆ ಇದೆ
Summary: There is a possibility of disruption in bus services on May 9th. Passengers should plan ahead. Let's see what is the reason for the bus disruption....

Belagavi News:

ಮೇ 9ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದಾಗಿ ಮಾಹಿತಿ ಲಭ್ಯವಾಗಿದೆ. ಕೆಲ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ಅಥವಾ ಆಡಳಿತಾತ್ಮಕ ಕಾರಣಗಳಿಂದಾಗಿ ತರಕಾರಿ ಹಾಗೂ ಖಾಸಗಿ ಬಸ್ ಸೇವೆಗಳು ಭಾಗಶಃ ಅಥವಾ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸಿವೆ.

ಈ ಹಿನ್ನಲೆಯಲ್ಲಿ, ದಿನನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರು ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಚಿಸಿಕೊಳ್ಳುವುದು ಉತ್ತಮ.ವಿಶೇಷವಾಗಿ ಕೆಲಸಕ್ಕೆ ಹೋಗುವವರು, ವಿದ್ಯಾರ್ಥಿಗಳು ಮತ್ತು ತುರ್ತು ಕಾರ್ಯಗಳಿಗಾಗಿ ಹೊರಡುವವರು ಪರ್ಯಾಯ ಸಾರಿಗೆ ವ್ಯವಸ್ಥೆಗಳನ್ನು ಬಳಸುವಂತೆ ಸೂಚಿಸಲಾಗಿದೆ. ಸ್ಥಳೀಯವಾಗಿ ಆಟೋ ಟ್ಯಾಕ್ಸಿ ಅಥವಾ ರೈಲು ಸೇವೆಗಳನ್ನು ಪರಿಗಣಿಸಬಹುದು.

ಸಾರಿಗೆ ಇಲಾಖೆ ಇನ್ನಷ್ಟು ಸ್ಪಷ್ಟ ಮಾಹಿತಿ ನೀಡುವ ನಿರೀಕ್ಷೆ ಇದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಯಾಣಿಕರು ಅಧಿಕೃತ ಪ್ರಕಟಣೆಗಳು ಹಾಗೂ ಸ್ಥಳೀಯ ಸುದ್ದಿಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ರೂಪಿಸಿಕೊಳ್ಳುವುದು ಸೂಕ್ತ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ 50 ವರ್ಷದ ದೀರ್ಘ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಒಂಬತ್ತರಂದು ಚಿತ್ರದುರ್ಗದಲ್ಲಿ ಭವ್ಯ ಯಡಿಯೂರಪ್ಪ ಅಭಿಮಾನಿಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವಿಶೇಷ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಆಗಮಿಸುವ ನಿರೀಕ್ಷೆ ಇದೆ.

ಈ ಅಭಿಮಾನೋತ್ಸವ ಯಡಿಯೂರಪ್ಪ ಅವರ ರಾಜಕೀಯ ಪಯಣ, ನಾಯಕತ್ವ ಹಾಗೂ ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ನಡೆಯಲಿದೆ. ಹಲವು ಹಿರಿಯರ ರಾಜಕೀಯ ಮುಖಂಡರು, ಗಣ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ ಹಾಗೂ ಯಡಿಯೂರಪ್ಪ ಅವರ ರಾಜಕೀಯ ಜೀವನದ ಪ್ರಮುಖ ಘಟ್ಟಗಳನ್ನು ಪರಿಚಯಿಸುವ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಅಭಿಮಾನಿಗಳಿಗಾಗಿ ವಿವಿಧ ವ್ಯವಸ್ಥೆಗಳು ಮಾಡಲಾಗುತ್ತಿದ್ದು, ಭದ್ರತಾ ಕ್ರಮಗಳನ್ನು ಕೂಡ ಕಟ್ಟುನಿಟ್ಟಾಗಿ ಕೈಗೊಳ್ಳಲಾಗಿದೆ.

ಈ ಭವ್ಯ ಕಾರ್ಯಕ್ರಮದ ಹಿನ್ನೆಲೆ, ಚಿತ್ರದುರ್ಗ ನಗರದಲ್ಲಿ ಹೆಚ್ಚಿನ ಜನಸಂದನೆ ನಿರೀಕ್ಷೆಯಿದ್ದು, ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಗಳ ಸಾಧ್ಯತೆ ಇದೆ. ಸಾರ್ವಜನಿಕರು ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಚಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಯಡಿಯೂರಪ್ಪ ಅಭಿಮಾನೋತ್ಸವವು ಕೇವಲ ಒಂದು ಕಾರ್ಯಕ್ರಮವಲ್ಲ, ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ಘಟ್ಟವಾಗಿ ಗುರುತಿಸಲ್ಪಡುವ ಸಾಧ್ಯತೆ ಇದೆ.

ಚಿತ್ರದುರ್ಗದಲ್ಲಿ ಮೇ 9ರಂದು ಭಾರಿ ಜನಸಾಗರ ಸೇರಲಿದ್ದು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನದ ಸಂಭ್ರಮಾಚರಣೆಯ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅಭಿಮಾನಿಯೋತ್ಸವ ಕಾರ್ಯಕ್ರಮ ಭಾರಿ ಮಠದಲ್ಲಿ ಸಿದ್ಧವಾಗುತ್ತಿದೆ. ನಗರದ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆ ನಿರ್ಮಾಣವಾಗಲಿದ್ದು, ಲಕ್ಷಾಂತರ ಜನರನ್ನು ಸ್ವಾಗತಿಸಲು ವಿಶೇಷ ವ್ಯವಸ್ಥೆಗಳು ಕಂಡುಕೊಳ್ಳಲಾಗಿದೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು,ಸ್ವಾಮೀಜಿಗಳು ಹಾಗೂ ರಾಜ್ಯದ ಹಿರಿಯ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಯಡಿಯೂರಪ್ಪ ಅವರ ದೀರ್ಘ ರಾಜಕೀಯ ಪಯಣವನ್ನು ಸ್ಮರಿಸುವ ಸಂಖ್ಯೆಯ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದೆ.

ಆಯೋಜಕರ ಅಂದಾಜಿನಂತೆ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಇದಕ್ಕಾಗಿ ವಿವಿಧ ಜಿಲ್ಲೆಗಳಿಂದ ಜನರನ್ನು ಕರೆ ತರಲು ಸುಮಾರು 10,000ಕ್ಕೂ ಹೆಚ್ಚು ಬಸ್ ಗಳನ್ನು ಬುಕ್ ಮಾಡಲಾಗಿದೆ. ಈ ಹಿನ್ನಲೆ, ನಗರದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ವಾಹನದಟ್ಟನೆ ಉಂಟಾಗುವ ಸಾಧ್ಯತೆ ಇದೆ.

ವಿಶೇಷವಾಗಿ ಮೇ 9ರಂದು ಚಿತ್ರದುರ್ಗ ಹಾಗೂ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರದಲ್ಲಿ ವ್ಯಥೆಯ ಉಂಟಾಗುವ ಸಾಧ್ಯತೆ ಇರುತ್ತದೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ತುರ್ತು ಪ್ರಯಾಣವಿದ್ದರೆ ಪರ್ಯಾಯ ಮಾರ್ಗಗಳನ್ನು ಬಳಸುವುದು, ಸಮಯವನ್ನು ಮುಂಚಿತವಾಗಿ ಯೋಜಿಸುವುದು ಒಳಿತು ಎಂದು ಸೂಚಿಸಲಾಗಿದೆ.

ಭದ್ರತೆ, ವಾಹನ ನಿಲುಗಡೆ ಹಾಗೂ ಜನಸಂದನೆ ನಿಯಂತ್ರಣಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಎಲ್ಲಾ ಸಿದ್ಧತೆಗಳು ಬರದಿಂದ ಸಾಗುತ್ತಿವೆ.

ಈ ಭವ್ಯ ಯಡಿಯೂರಪ್ಪ ಅಭಿಮಾನೋತ್ಸವ ರಾಜ್ಯ ರಾಜಕೀಯದಲ್ಲಿ ವಲಯದಲ್ಲಿ ವಿಶೇಷ ಗಮನ ಸೆಳೆಯುತ್ತಿದ್ದು, ಚಿತ್ರದುರ್ಗ ನಗರಕ್ಕೆ ಒಂದು ಐತಿಹಾಸಿಕ ಕ್ಷಣವಾಗಲಿದೆ.

Also Read:

400 ವರ್ಷಗಳ ಹಳೆ ಕಥೆಗೆ ಜೀವ: ಮದನಿಕ ರೂಪದಲ್ಲಿ ರಾಗಿಣಿ ದ್ವಿವೇದಿ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online