Belagavi News:
ಶ್ರೀರಾಮ ಜನ್ಮ ಭೂಮಿ ಮಂದಿರದ ದೇಣಿಗೆ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ನಿಟ್ಟಿನಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಶೀಲನೆಗೆ ತೆಗೆದುಕೊಂಡಿದೆ.
ದೇಣಿಗೆ ಹಣದ ಬಳಕೆ ಹಾಗೂ ನಿರ್ವಹಣೆಯಲ್ಲಿ ಪಾರದರ್ಶಕತೆ ಕೊರತೆಯಿದೆ ಎಂಬ ಆರೋಪಗಳು ಈ ಪ್ರಕರಣಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಸರ್ಕಾರವು ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಿ ಸಮಗ್ರ ತನಿಖೆಗೆ ಆದೇಶಿಸಿದೆ.
ದೇಣಿಗೆ ಸಂಗ್ರಹ ಮತ್ತು ವೆಚ್ಚದ ವಿವರಗಳಲ್ಲಿ ಅಕ್ರಮಗಳ ಆರೋಪ ಕೇಳಿ ಬಂದಿದ್ದು, ಪ್ರಕರಣದ ಸತ್ಯತೆ ಹೊರಬರುವ ನಿರೀಕ್ಷೆ ಇದೆ. ಎಸ್ಐಟಿ ತನಿಕೆಯ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ .
ಈ ನಡುವೆ, ಸಾರ್ವಜನಿಕರ ವಿಶ್ವಾಸ ಕಾಪಾಡುವುದು ಪ್ರಮುಖವಾಗಿದ್ದು, ದೇಣಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಅಗತ್ಯವಿದೆ ಎಂಬ ಮಾತುಗಳು ಚರ್ಚೆಗೆ ಗ್ರಾಸವಾಗಿವೆ.
ಅಯೋಧ್ಯ ರಾಮ ಮಂದಿರ ದೇಣಿಗೆ ಅಕ್ರಮ ಆರೋಪ :
ಶ್ರೀರಾಮ ಜನ್ಮಭೂಮಿಯ ಮಂದಿರದ ದೇನಿಗೆ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ತಿರುವು ಪಡೆದಿದೆ. ಪ್ರಕರಣದ ಪಾರದರ್ಶಕತೆ ಮತ್ತು ಸತ್ಯಾಸತ್ಯತೆಯನ್ನು ಹೊರ ಹಾಕಲು ಉತ್ತರ ಪ್ರದೇಶ ಸರ್ಕಾರ ಈಗಾಗಲೇ ಉನ್ನತ ಮಟ್ಟದ ವಿಶೇಷ ತನಿಕಾ ತಂಡ ರಚಿಸಿ ತನಿಖೆ ಆರಂಭಿಸಿದೆ.
ಈ ನಡುವೆ ವಕೀಲ ಅನುಪ್ ಅವಸ್ಥಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ, ಮಂದಿರದ ದೇಣಿಗೆಗೆ ಸಂಬಂಧಿಸಿದ ಆರೋಪಗಳನ್ನು ನ್ಯಾಯಾಲಯವೇ ನೇರವಾಗಿ ಪರಿಶೀಲಿಸಬೇಕು ಹಾಗೂ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಮನವಿ ಮಾಡಿದ್ದಾರೆ.
ಈ ಮನವಿಗೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತವರು, ನ್ಯಾಯಾಲಯದಲ್ಲಿ ಇಂತಹ ವಿಷಯಗಳನ್ನು ಕೇವಲ ಮೌಖಿಕವಾಗಿ ಪ್ರಸ್ತಾಪಿಸವ ಬದಲು ಅಧಿಕೃತ ಲಿಖಿತ ಟಿಪ್ಪಣಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ಟಿಪ್ಪಣಿಗಳನ್ನು ಪರಿಶೀಲಿಸಿದ ನಂತರ ವಿಷಯದ ಪ್ರಸ್ತುತತೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದೇಣಿಗೆ ನಿರ್ವಹಣೆಯಲ್ಲಿನ ಅಕ್ರಮ ಆರೋಪಗಳು ಮತ್ತು ತನಿಖೆಯ ಪ್ರಗತಿ ಸಾರ್ವಜನಿಕ ಚರ್ಚೆಗೆ ಕಾರಣವಾಗಿದ್ದು, ಎಸ್ಐಟಿ ತನಿಖೆಯ ಫಲಿತಾಂಶದತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಅಯೋಧ್ಯ ರಾಮ ಮಂದಿರ ದೇಣಿಗೆ ವಿವಾದಕ್ಕೆ ಬ್ರೇಕ್ - ಯುಪಿ ಸರ್ಕಾರದಿಂದ ಮೂವರು ಸದಸ್ಯರ SIT ರಚನೆ:
ಶ್ರೀರಾಮ ಜನ್ಮಭೂಮಿ ಮಂದಿರದ ದೇಣಿಗೆ ಪೆಟ್ಟಿಗೆಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ತೆರೆ ಹಾಕಿ ಸತ್ಯವನ್ನು ಜನರೆದುರು ತರಲ "ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್" ಸ್ವತಃ ನಿಷ್ಪಕ್ಷಪಾತ ತನಿಖೆಗೆ ಮನವಿ ಮಾಡಿದೆ.
ಟ್ರಸ್ಟ್ ನ ಕೋರಿಕೆಯ ಮೇರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂವರು ಉನ್ನತ ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಿದ್ದಾರೆ. ಈ ತಂಡವು ಪ್ರಕರಣದ ಎಲ್ಲಾ ಅಂಶಗಳನ್ನು ಕುಲಂಕುಶವಾಗಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
SIT ತಂಡದ ಸದಸ್ಯರು ಈ ಕೆಳಗಿನವರು:
1. ವಿಜಯ್ ವಿಶ್ವಸ್ ಪಂತ್ : ಹಿರಿಯ IAS ಅಧಿಕಾರಿ ಹಾಗೂ ಲಕ್ನೋ ವಿಭಾಗಿಯ ಆಯುಕ್ತರು
2. ಕಿರಣ್ ಎಸ್: ಹಿರಿಯ IPS ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರು
3. ನೀಲ್ ರತನ್: ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿಗಳು
ಈ ವಿಶೇಷ ತಂಡವು ದೇಣಿಗೆ ನಿರ್ವಹಣೆ, ಪೆಟ್ಟಿಗೆಗಳ ಲೆಕ್ಕಪತ್ರ ಹಾಗೂ ಸಂಬಂಧಿತ ಆರೋಪಗಳನ್ನು ಸಮಗ್ರವಾಗಿ ತನಿಖೆ ನಡೆಸಲಿದೆ. ತನಿಖೆಯ ನಂತರ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳ ನಡುವೆ ಸರ್ಕಾರದ ಈ ಕ್ರಮಕ್ಕೆ ಮಹತ್ವ ದೊರೆತಿದ್ದು, ಪ್ರಕರಣದ ಪಾರದರ್ಶಕತೆ ಹೆಚ್ಚಲಿದೆ ಎಂದು ನಿರೀಕ್ಷಿಸಲಾಗಿದೆ.
ಅಯೋಧ್ಯ ರಾಮ ಮಂದಿರ ದೇಣಿಗೆ ವಿವಾದ - ಹಣಕಾಸು ವಿಷಯಕ್ಕೂ ನನಗೂ ಸಂಬಂಧವಿಲ್ಲ - ನೃಪೇಂದ್ರ ಮಿಶ್ರಾ ಸ್ಪಷ್ಟನೆ :
ಅಯೋಧ್ಯಮಂದಿರದ ದೇಣಿಗೆ ಕುರಿತು ಕೇಳಲಾದ ಪ್ರಶ್ನೆಗಳಿಗೆ ರಾಮಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಜವಾಬ್ದಾರಿ ಕೇವಲ ಮಂದಿರ ನಿರ್ಮಾಣ ಕಾರ್ಯಗಳ ಮೇಲ್ವಿಚಾರಣೆಗೆ ಮಾತ್ರ ಸೀಮಿತವಾಗಿದ್ದು, ಹಣಕಾಸು ವ್ಯವಹಾರಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.
ಮಂದಿರದ ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಲು ಅಯೋಧ್ಯೆಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದು, ದೇಣಿಗೆ ನಿರ್ವಹಣೆ ಅಥವಾ ಹಣಕಾಸು ಸಂಬಂಧಿತ ವಿಷಯಗಳಲ್ಲಿ ತಮ್ಮ ಪಾತ್ರ ಇಲ್ಲ ಎಂದು ಹೇಳಿದ್ದಾರೆ.
ಈ ನಡುವೆ ದೇಣಿಗೆ ಕುರಿತು ಆರೋಪಗಳ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲೂ ಚರ್ಚೆಗಳು ತೀವ್ರಗೊಂಡಿವೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ವಿರೋಧ ಪಕ್ಷಗಳು ಅನಗತ್ಯಾವದಂತಿಗಳನ್ನು ಹರಡುತ್ತಿವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾತಂಡ ಈಗಾಗಲೇ ತನಿಖೆ ಆರಂಭಿಸಿದ್ದು, ಪ್ರಕರಣದ ಸತ್ಯಾಸತ್ಯತೆ ಶೀಘ್ರದಲ್ಲೇ ಹೊರಬರುವ ನಿರೀಕ್ಷೆ ಇದೆ. ಪಾರದರ್ಶಕ ತನಿಕೆಯಿಂದ ವದಂತಿಗಳಿಗೆ ಅಂತ್ಯ ಬೀಳಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Also Read:
ಜಾಗತಿಕ ಪರಿಹಾರಗಳ ಕೇಂದ್ರವಾಗುತ್ತಿದೆ ಭಾರತ; ಭಾರತ ಜಗತ್ತಿಗೆ ನಾವಿನ್ಯತೆ ನೀಡುವ ಶಕ್ತಿ: ಮೋದಿ