<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Trending

ಉಗ್ರರ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಉಗ್ರರ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Summary: The release of a book written about terrorists has sparked controversy across the country, and BJP Yuva Morcha activists have repeatedly protested against it.

BELAGAVI NEWS:

ಬೆಂಗಳೂರು: 2020ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಬಂಧನವಾಗಿ ತಿಹಾರ್ ಜೈಲಿನಲ್ಲಿ ಇರುವ ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆಗೆ ರಾಜ್ಯ ಸರ್ಕಾರ ಅವಕಾಶ ನೀಡಿದ್ದನ್ನು ವಿರೋಧಿಸಿ ಬಿಜೆಪಿ ರಾಜ ಯುವ ಮೋರ್ಚಾ ಮಂಗಳವಾರ ದೊಮ್ಮಲೂರಿನ ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ ಬಳಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ರಾಜ್ಯ ಬಿಜೆಪಿ ನಿಯೋಗವು ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತ್ತು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪಿ.ಸಿ. ಮೋಹನ್ ಅವರು,"2020ರ ದೆಹಲಿ ದೆಂಗೆ ಪ್ರಕರಣದಲ್ಲಿ ಪ್ರಮುಖ ಆಪಾದಿತನಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಉಮರ್ ಖಾಲಿದ್ ಅವರನ್ನು ವೈಭವಿಕರಿಸುವ ಅಗತ್ಯವೇನು? ಆ ಗಲಭೆಯಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದು ಆಸ್ತಿ ಪಾಸ್ತಿಗೂ ಹಾನಿಯಾಗಿದೆ," ಎಂದು ಪ್ರಶ್ನಿಸಿದರು.

ದೇಶದ್ರೋಹಿಗಳನ್ನು ವೈಭವಿಕರಿಸಲು ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತದೆ. ಗಾಂಧಿನಗರದ ಗೋಡೆಗಳ ಮೇಲೆ ಬರಹಗಳನ್ನು ಬರೆದಿದ್ದಾರೆ. ಈ ಸರ್ಕಾರ ಇಂತಹುದಕ್ಕೆಲ್ಲ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Sponsored

ಇಂತಹ ಕಾರ್ಯಕ್ರಮಗಳ ಆಯೋಜಕರು ದೇಶದ್ರೋಹಿಗಳಾದ ಅಜ್ಮಲ್ ಕಸಾಬ್ ಹಾಗೂ ಸಂಸತ್ ದಾಳಿ ಕೋರರನ್ನು ವೈಭವಿಕರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದವರು ಬೇರೆ ರಾಜ್ಯಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದರು. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಭಯೋತ್ಪಾದಕರ ಬಗ್ಗೆ ಸರ್ಕಾರ ಮೃದು ಧೋರಣೆ ತೋರಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದಲೇ ರಾಜ್ಯದಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಲು ಅವಕಾಶ ದೊರೆತಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂದಿದ್ದನಾಗಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ಭಾರತೀಯ ಜನತಾ ಪಾರ್ಟಿ ವಿರೋಧವಿದೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದರು.

ಭಯೋತ್ಪಾದಕರ ಕುರಿತ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಯುತ್ತಿರುವುದನ್ನು ಅವರು ಆಕ್ಷೇಪಿಸಿದರು. 2020ರ ಫೆಬ್ರುವರಿಯಲ್ಲಿ ನಡೆದ ದೆಹಲಿ ಗಲಭೆ ಸಂಬಂಧ ಸುಪ್ರೀಂ ಕೋರ್ಟ್ ಇವರಿಬ್ಬರ ಜಾಮೀನು ಅರ್ಜಿಯನ್ನು ಎಂದು ಅವರು ಹೇಳಿದರು. ಶಾರ್ಜಿಲ್ ಇಮಾಮನ್ನು ಸಿ. ಎ. ಎ ಮತ್ತು ಎನ್. ಆರ್. ಸಿ ವಿರೋಧಿ ಪ್ರತಿಭಟನೆಗಳ ವೇಳೆ ಮಾಡಿದ ಭಾಷಣಗಳ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದರು.

ಎನ್, ಆರ್, ಸಿ ಮತ್ತು ಸಿ, ಎ, ಎ ವಿರುದ್ಧ ಹೋರಾಟದ ಸಂದರ್ಭದಲ್ಲಿ 53 ಜನರ ಹತ್ಯೆ ಯಾಗಿತ್ತು. ಸುಮಾರು 700 ಜನರು ಗಾಯಗೊಂಡಿದ್ದರು. ಈಗ ಇವರ ಬಗ್ಗೆಯೇ ಪುಸ್ತಕ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

Sponsored

ಇವರಿಬ್ಬರ ಜೊತೆಗೆ 18 ಜನರನ್ನು ಬಂಧಿಸಲಾಗಿದ್ದು 11 ಜನರಿಗೆ ಜಾಮೀನು ದೊರೆತಿದೆ ಹಾಗೂ ಇನ್ನು 7 ಆರೋಪಿಗಳಿಗೆ ಜಾಮೀನು ಸಿಕ್ಕಿಲ್ಲ ಎಂದು ವಿವರಿಸಿದ್ದರು. ಇಂತಹ ಭಯೋತ್ಪಾದಕ ಮತ್ತು ದೇಶದ್ರೋಹಿ ಆರೋಪಿಗಳ ಕುರಿತು ಪುಸ್ತಕ ಬಿಡುಗಡೆ ಮಾಡುವ ಅವಶ್ಯಕತೆ ಏನು ಎಂದು ಅವರು ಪ್ರಶ್ನಿಸಿದರು.

Also Read:

ಜನಗಣತಿ ರಾಷ್ಟ್ರೀಯ ಕಾರ್ಯ: ಖಾಸಗಿ ಶಾಲೆ ಸಿಬ್ಬಂದಿ ಭಾಗವಹಿಸಲು ಹೈಕೋರ್ಟ್ ಸೂಚನೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online