belagavi news :
ದೆಹಲಿ ಬಿಜೆಪಿ ಪ್ರತಿಭಟನಾ ಹಿಂಸಾತ್ಮಕ : 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, ಹಲವು ಪ್ರತಿಭಟನಕಾರರಿಗೂ ಪೆಟ್ಟು
ಕಾಕ್ರೋ ಜನತಾ ಪಾರ್ಟಿ ಬೆಂಬಲಿಗರು ನಡೆಸಿದ ಪ್ರತಿಭಟನೆ ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಹಲವು ಪ್ರತಿಭಟನಾಕಾರರು ಹಾಗೂ ದೆಹಲಿ ಪೊಲೀಸ್ ಮತ್ತು ಕೇಂದ್ರ ಭದ್ರತಾ ಪಡೆಗಳ 118ಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಪ್ರತಿಭಟನೆಯ ವೇಳೆ ಉಂಟಾದ ಘರ್ಜನೆಯಲ್ಲಿ ವಿಶೇಷ ಪೊಲೀಸ್ ಆಯುಕ್ತರು, ಜಂಟಿ ಆಯುಕ್ತರು, ಹೆಚ್ಚುವರಿ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರ ಹಂತದ ಹಿರಿಯ ಅಧಿಕಾರಿಗಳಿಗೂ ಗಾಯಗಳಾಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಘಟನೆಯ ಕುರಿತು ತನಿಖೆ ಮುಂದುವರೆದಿದೆ.
ಈ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ವ್ಯವಸ್ಥೆ ಕುರಿತು ಆತಂಕ ಮೂಡಿಸಿದ್ದು, ಪ್ರತಿಭಟನೆ ಮತ್ತು ಪೊಲೀಸರ ಕ್ರಮ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ದೆಹಲಿ ಸಿಜೆಪಿ ಪ್ರತಿಭಟನೆ : ಐಪಿಎಸ್ ಅಧಿಕಾರಿಗಳಿಗೂ ಗಾಯ, ನೀಟ್ - ಯುಜಿ ಪತ್ರಿಕೆ ಸೋರಿಕೆ ವಿರುದ್ಧ ಹೋರಾಟ ಹಿಂಸಾತ್ಮಕ
ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆ ವೇಳೆ ಹಲವು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ದೆಹಲಿ ಪೊಲೀಸರ ಮಾಹಿತಿ ಪ್ರಕಾರ, ನವದೆಹಲಿ ಜಿಲ್ಲೆಯ ಹೆಚ್ಚುವರಿ ಡಿಸಿಪಿ ಆನಂದ್ ಕುಮಾರ್ ಮಿಶ್ರಾ ಅವರ ಕೈ ಮೂಳೆ ಮುರಿದಿದ್ದು, ಉತ್ತರ ದೆಹಲಿಯ ಹೆಚ್ಚುವರಿ ಡಿಸಿಪಿ ನಿಹಾರಿಕಾ, ನವದೆಹಲಿ ಜಿಲ್ಲೆಯ ನಾಲ್ವರು ಎಸಿಪಿಗಳು ಹಾಗೂ ಒಬ್ಬ ವಿಶೇಷ ಪೊಲೀಸ ಆಯುಕ್ತರು ಗಾಯಗೊಂಡಿದ್ದಾರೆ.
ನೀಟ್ - ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪದೇಪದೇ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಈ ಪ್ರತಿಭಟನೆ ಆಯೋಜಿಸಿತ್ತು. ಸೋಮವಾರ ಸಾವಿರಾರು ವಿದ್ಯಾರ್ಥಿಗಳು ಮತ್ತು ಪಕ್ಷದ ಬೆಂಬಲಿಗರು ಜಂತರ್ ಮಂತರ್ ನಿಂದ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಮುಂದಾದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಮುನ್ನೆಚ್ಚರಿಕ ಕ್ರಮವಾಗಿ ದೆಹಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿ, ಸಂಸತ್ ಮಾರ್ಗದಲ್ಲಿ ಬ್ಯಾರಿಕೆಟ್ ಗಳನ್ನು ಅಳವಡಿಸಿದ್ದರು. ಪ್ರತಿಭಟನಾಕಾರರು ಬ್ಯಾರಿಕೆಟ್ ಗಳನ್ನು ದಾಟಲು ಯತ್ನಿಸಿದಾಗ ಅವರನ್ನು ತಡೆಯಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದಾದ ಬಳಿಕ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡು ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಯಿತು.
118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್
ಸಿಜೆಪಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಮತ್ತು ಕೇಂದ್ರ ಭದ್ರತಾ ಪಡೆಗಳ 118ಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ವಿಶೇಷ ಪೋಲಿಸ್ ಆಯುಕ್ತರು, ಜಂಟಿ ಆಯುಕ್ತರು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸೇರಿದ್ದಾರೆ.
ಘಟನೆಯ ಬಳಿಕ ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಅಧಿಕಾರಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ, "ಸಮವಸ್ತ್ರದಲ್ಲಿರುವ ಪ್ರತಿಯೊಂದು ಗಾಯವೂ ಕರ್ತವ್ಯದ ಸಮರ್ಪಣೆಗೆ ಸಾಕ್ಷಿಯಾಗಿದೆ" ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಾಯಗೊಂಡ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಜನಪಥ್ ಪ್ರಧಾನಿ ನರೇಂದ್ರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಜಮಾಯಿಸಿದ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು ಘರ್ಷಣೆ ಉಂಟಾಗಿ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜನಪಥ್ ನಲ್ಲಿ ಕಲ್ಲುತುರಾಟ, ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗ ಖಂಡಿಸಿದ ಅಭಿಜಿತ್ ದಿಪ್ಕೆ
ಜನಪಥ್ ನ ಕ್ಲಾರಿಡ್ಜಸ್ ಹೋಟೆಲ್ ಸಮೀಪದ ಕರ್ತವ್ಯದಲ್ಲಿದ್ದ ವೇಳೆ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಜಮಾಯಿಸಿದರು.
ಇದ್ದಕ್ಕಿದ್ದಂತೆ ಎರಡು ಕಡೆಯಿಂದ ಕಲ್ಲುತೂರಾಟ ಆರಂಭವಾಗಿ ಪರಿಸ್ಥಿತಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು ಎಂದು ಗಾಯಗೊಂಡ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
"ಪ್ರತಿಭಟನಾಕಾರರು ಸಮಾಧಾನ ಪಡಿಸಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದ್ದರು ಅವರು ಹಿಂದೆ ಸರಿಯಲಿಲ್ಲ. ಪರಿಣಾಮ ಕಾನ್ಸ್ಟೇಬಲ್ ಗಳಿಂದ ಐಪಿಎಸ್ ಅಧಿಕಾರಿಗಳ ವರೆಗೆ ಅನೇಕ ಸಿಬ್ಬಂದಿ ಗಾಯಗೊಂಡರು", ಎಂದು ಅವರು ವಿವರಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ, ಜಂತರ್ ಮಂತರ್ ನಿಂದ ಸಂಸತ್ ವರೆಗೆ ನಡೆದ ಮೆರವಣಿಗೆಯ ವೇಳೆ ವಿದ್ಯಾರ್ಥಿಗಳ ವಿರೋಧ ದೆಹಲಿ ಪೊಲೀಸರನ್ನು ಅನಗತ್ಯ ಬಲಪ್ರಯೋಗ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಮುಖ ಪ್ರತಿಭಟನೆಯ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಖಂಡನೀಯ ಎಂದು ಅವರು ಹೇಳಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿದ ಅಭಿಜಿತ್ ದಿಪ್ಕೆ ; ಧರ್ಮೇಂದ್ರ ಪ್ರಧಾನ ರಾಜಿನಾಮೆಗೆ ಆಗ್ರಹ.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರು ದೆಹಲಿ ಪೊಲೀಸ್ ಕ್ರಮವನ್ನು ಖಂಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಂಸತ್ ಮೆರವಣಿಗೆಯನ್ನು ಮಧ್ಯದಲ್ಲೇ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ದಿಪ್ಕೆ, ಕೇಂದ್ರ ಶಿಕ್ಷಣ ಸಚಿವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡುವವರೆಗೆ ಸೋನಂ ವಾಂಗ್ಚುಕ್ ನೇತೃತ್ವದಲ್ಲಿ ನಡೆಯುತ್ತಿರುವ ಆಂದೋಲನ ಮತ್ತು ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದ್ದರು ಪೊಲೀಸರು ಲಾಟಿಚಾರ್ಜ್ ನಡೆಸಿದ್ದಾರೆ ಎಂದು ಆರೋಪಿಸಿದವರು, ಇದರಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ತಲೆಗೆ ಗಾಯಗಳಾಗಿದ್ದು, ಇನ್ನು ಕೆಲವರ ಕೈಕಾಲುಗಳಿಗೆ ಪೆಟ್ಟು ಬಿದ್ದಿದೆ ಎಂದು ದಿಪ್ಕೆ ದೂರಿದರು.
ದೆಹಲಿ ಪೊಲೀಸರ ಕ್ರಮ ಖಂಡನೀಯವಾಗಿದ್ದು, ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಸತ್ ಮೆರವಣಿಗೆಯನ್ನು ಮಧ್ಯದಲ್ಲೇ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಸೋನಮ್ ನೇತೃತ್ವದ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹ ಮುಂದುವರಿಲಿದೆ ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದ್ದರು ಪೊಲೀಸರು ಲಾಟಿ ಚಾರ್ಜ್ ನಡೆಸಿದರು. ಇದರಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಹಲವರಿಗೆ ತಲೆಗೆ ಪೆಟ್ಟು ಬಿದ್ದರೆ, ಇನ್ನು ಕೆಲವರ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ದಿಪ್ಕೆ ಆರೋಪಿಸಿದರು. ದೆಹಲಿ ಪೊಲೀಸರ ಕ್ರಮವನ್ನು ಅವರು ತೀವ್ರವಾಗಿ ಖಂಡಿಸಿದರು.