H16 News
Logo

By Samreen | Published on November 19, 2025

Image Not Found
Sports / November 19, 2025

ಅಫ್ರಿದಿಯನ್ನೇ ಹಿಂದಿಕ್ಕಿ ಹೀನಾಯ ದಾಖಲೆ ಬರೆದ ಬಾಬರ್ ಆಝಂ

Pakistan vs Zimbabwe: ಝಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆಲುವು ದಾಖಲಿಸಿದೆ. ರಾವಲ್ಪಿಂಡಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ 20 ಓವರ್ಗಳಲ್ಲಿ 147 ರನ್ ಕಲೆಹಾಕಿದ್ದರು. ಈ ಗುರಿಯನ್ನು ಪಾಕಿಸ್ತಾನ್ ತಂಡ 19.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್ಗಳ ಜಯ ಸಾಧಿಸಿದೆ.

ಬಾಬರ್ ಆಝಂ (Babar Azam) ಪಾಕ್ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿಯ ಅನಗತ್ಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಪಾಕಿಸ್ತಾನ್ ಪರ 90 ಟಿ20 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ ಶಾಹಿದ್ ಅಫ್ರಿದಿ 8 ಬಾರಿ ಸೊನ್ನೆಗೆ ಔಟಾಗಿದ್ದರು. ಈ ಮೂಲಕ ಪಾಕ್ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಝೀರೋಗೆ ಔಟಾದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದರು. ರಾವಲ್ಪಿಂಡಿಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್ ಆಝಂ ಝೀರೋಗೆ ಔಟಾಗಿದ್ದಾರೆ. ಹೀಗೆ ಸೊನ್ನೆ ಸುತ್ತುವುದರೊಂದಿಗೆ ಪಾಕಿಸ್ತಾನದ ಡಕ್ಮ್ಯಾನ್ಗಳ ಪಟ್ಟಿಯಲ್ಲಿ ಬಾಬರ್ ಮೂರನೇ ಸ್ಥಾನಕ್ಕೇರಿದ್ದಾರೆ. ಅದು ಸಹ ಅಫ್ರಿದಿಯನ್ನು ಹಿಂದಿಕ್ಕುವ ಮೂಲಕ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸೈಮ್ ಅಯ್ಯೂಬ್ ಹಾಗೂ ಉಮರ್ ಅಕ್ಮಲ್. ಪಾಕ್ ಪರ 50 ಟಿ20 ಇನಿಂಗ್ಸ್ ಆಡಿರುವ ಸೈಮ್ 10 ಬಾರಿ ಝೀರೋಗೆ ಔಟಾಗಿದ್ದಾರೆ. ಇನ್ನು ಉಮರ್ ಅಕ್ಮಲ್ 79 ಇನಿಂಗ್ಸ್ಗಳಲ್ಲಿ 10 ಬಾರಿ ಸೊನ್ನೆ ಸುತ್ತಿದ್ದಾರೆ. ಈ ಮೂಲಕ ಪಾಕ್ ತಂಡದ ಡಕ್ಮ್ಯಾನ್ ಎನಿಸಿಕೊಂಡಿದ್ದಾರೆ. ಇದೀಗ ಈ ಹೀನಾಯ ದಾಖಲೆಯನ್ನು ಬಾಬರ್ ಆಝಂ ತಮ್ಮದಾಗಿಸಿಕೊಂಡಿದ್ದಾರೆ. ಪಾಕ್ ಪರ ಈವರೆಗೆ 125 ಟಿ20 ಇನಿಂಗ್ಸ್ ಆಡಿರುವ ಬಾಬರ್ 9 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನಷ್ಟು ಓದಿರಿ: ಬರ್ಸಪಾರ ಕ್ರೀಡಾಂಗಣದಲ್ಲಿ ಚೊಚ್ಚಲ ಟೆಸ್ಟ್ ಆಡಲು ಭಾರತ ತಯಾರಿ
Sponsored Ads
image computer academy
image computer academy
image computer academy
image computer academy
LANDSCAPING IN CAD
LANDSCAPING IN CAD
HSRNEWS
HSRNEWS

Related News

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy