<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬಸ್ ದರ ಹೆಚ್ಚಳ ಕುರಿತು ಬೈರತಿ ಸುರೇಶ್ ಹೇಳಿಕೆ : ಜನರಿಗೆ ಶಾಕ್?

ಬಸ್ ದರ ಹೆಚ್ಚಳ ಕುರಿತು ಬೈರತಿ ಸುರೇಶ್ ಹೇಳಿಕೆ : ಜನರಿಗೆ ಶಾಕ್?
Summary: Minister Bhairati Suresh said that no final decision has been taken yet on the bus fare hike. She said that a final decision on this is likely to be taken in the next cabinet meeting.

Belagavi News :

ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಚರ್ಚೆ ಮುಂದುವರೆದಿದ್ದು, ಈ ಸಭೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಈ ವಿಚಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಸಾರಿಗೆ ಇಲಾಖೆಯ ವೆಚ್ಚಗಳು ಮತ್ತು ನಿರ್ವಹಣಾ ಒತ್ತಡಗಳನ್ನು ಗಮನದಲ್ಲಿಟ್ಟುಕೊಂಡು ದರ ಪರಿಷ್ಕರಣೆ ಕುರಿತು ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಆದರೆ ಈ ಕುರಿತು ಸರ್ಕಾರ ಅಂತಿಮ ತೀರ್ಮಾನಕ್ಕೆ ಇನ್ನೂ ಬಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಬಾಸ್ ಪ್ರಯಾಣ ದರ ಹೆಚ್ಚಳದ ಕುರಿತು ವಿವರವಾದ ಚರ್ಚೆ ನಡೆಯಲಿದ್ದು, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕರ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಎಲ್ಲಾ ಅಂಶಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರದ ವಲಯಗಳು ಹೇಳಿವೆ.

ಈ ನಡುವೆ ಭಾಸ್ದರ ಹೆಚ್ಚಳ ಸಾಧ್ಯತೆ ಕುರಿತು ಪ್ರಯಾಣಿಕರಲ್ಲಿ ಕುತೂಹಲ ಹೆಚ್ಚಾಗಿದ್ದು, ಅಂತಿಮ ನಿರ್ಧಾರಕ್ಕಾಗಿ ಎಲ್ಲರ ಕಣ್ಣು ಮುಂದಿನ ಕ್ಯಾಬಿನೆಟ್ ಸಭೆಯತ್ತ ನೆಟ್ಟಿದೆ.

Karnataka bus fare hike proposal - KSRTC 33%, BMTC 44% ದರ ಏರಿಕೆ ಪ್ರಸ್ತಾವನೆ - ಸರ್ಕಾರದ ನಿರ್ಧಾರಕ್ಕೆ ಕಾಯುತ್ತಿದ್ದಾರೆ ಪ್ರಯಾಣಿಕರು :

ಕರ್ನಾಟಕದಲ್ಲಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿರುವ ಮಾಹಿತಿ ಹೊರಬಂದಿದೆ. ಇಂಧನ ಬೆಲೆ ಏರಿಕೆ ಮತ್ತು ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟವನ್ನು ಕಾರಣವಾಗಿ ಹೇಳಲಾಗಿದ್ದು, ದರ ಪರಿಷ್ಕರಣೆ ಕುರಿತು ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಪ್ರಸ್ತಾವನೆಯ ಪ್ರಕಾರ, ರಾಜ್ಯ ಸಾರಿಗೆ ಸಂಸ್ಥೆಯ KSRTC ಬಸ್ ದರವನ್ನು ಶೇಕಡಾ 33 ರಷ್ಟು ಹಾಗೂ ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆಯ BMTC ಬಸ್ ದರವನ್ನು ಶೇಕಡಾ 44 ರಷ್ಟು ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರ ಏರಿಕೆ ಜಾರಿಯಾದರೆ ಪ್ರಯಾಣಿಕರ ಮೇಲೆ ನೇರ ಆರ್ಥಿಕ ಬಾರ ಬೀರುವ ಸಾಧ್ಯತೆ ಇದೆ.

ಸಾರಿಗೆ ನಿಗಮಗಳು ಇಂಧನ ವೆಚ್ಚ, ನಿರ್ವಹಣಾ ಖರ್ಚು ಹಾಗೂ ಸಾಲದ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ದರಪರಿಷ್ಕರಣೆ ಅಗತ್ಯವಾಗಿದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಆದರೆ ಈ ಕುರಿತು ಸರ್ಕಾರದಿಂದ ಇನ್ನೂ ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.

ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಯ ಕುರಿತು ಚರ್ಚೆ ನಡೆಯಲಿದ್ದು, ಬೈಕ್ ಆಧಾರ ಏರಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸುವೆ. ಸಾರ್ವಜನಿಕರ ಮೇಲೆ ಆಗುವ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

ಈ ನಡುವೆ ಬಸ್ ದರ ಏರಿಕೆ ಸಾಧ್ಯತೆ ಬಗ್ಗೆ ಪ್ರಯಾಣಿಕರಲ್ಲಿ ಆತಂಕ ಮತ್ತು ಕುತೂಹಲ ಹೆಚ್ಚಾಗಿದ್ದು, ಸರ್ಕಾರದ ಅಧಿಕೃತ ಘೋಷಣೆಗೆ ಎಲ್ಲರೂ ಕಾಯುತ್ತಿದ್ದಾರೆ.

Karnataka bus fare hike - ಡೀಸೆಲ್ ದರ ಏರಿಕೆ ಹಿನ್ನೆಲೆ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಸಚಿವ ಭೈರತಿ ಸುರೇಶ್ ಸ್ಪಷ್ಟನೆ :

ಕಳೆದ ಆರು ತಿಂಗಳಲ್ಲಿ ನಾಲ್ಕು ಬಾರಿ ಡೀಸೆಲ್ ದರ ಏರಿಕೆಯಾದರು, ಇದುವರೆಗೆ ಬಸ್ ಟಿಕೆಟ್ ದರವನ್ನು ಹೆಚ್ಚಿಸಲಾಗಿಲ್ಲ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಆದರೆ ಈಗಿನ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದರೆ ದರ ಏರಿಕೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಯನ್ನು ವಿವರಿಸಿದ ಸಚಿವರು , ಪ್ರಸ್ತುತ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ಸುಮಾರು 40 ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿಗಮಗಳನ್ನು ಉಳಿಸಿಕೊಳ್ಳಲು ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪ್ರಯಾಣಿಕರಿಗೆ ಅನಗತ್ಯ ಬಾರ ಬೀರುವಂತಹ ಆಗಬಾರದು ಹಾಗೂ ಸಾರಿಗೆ ನಿಗಮಗಳು ಸುಸ್ಥಿರವಾಗಿರಬೇಕು ಎಂಬ ಉದ್ದೇಶದಿಂದ ಸಮತೋಲನದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಟೀ ಕುಡಿದು ಪ್ರಸ್ತಾವನೆಯನ್ನು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಜನವರಿ 23ರಲ್ಲಿ ಬಸ್ ಪ್ರಯಾಣ ದರವನ್ನು 15 ರಷ್ಟು ಹೆಚ್ಚಿಸಲಾಗಿತ್ತು. ಅದಾಗಿಯೂ ಇತ್ತೀಚಿನ ನಷ್ಟ ಹಾಗೂ ಹೆಚ್ಚುತ್ತಿರುವ ಇಂಧನ ವೆಚ್ಚವನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಅಗತ್ಯವಾಗಿದೆ ಎಂದು ಸರ್ಕಾರ ಅಭಿಪ್ರಾಯ ಪಟ್ಟಿದೆ.

ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇರುವುದರಿಂದ, ಪ್ರಯಾಣಿಕರು ಸರ್ಕಾರದ ಘೋಷಣೆಯನ್ನು ಕಾಯುತ್ತಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online