Belagavi news:
ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಹತ್ವದ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳು ಅಥವಾ ಸಂಬಂಧಿತರು ಶಾಲಾ ಆವರಣಕ್ಕೆ ಕೇಸರಿ ಶಾಲು ಧರಿಸಿವೆಂದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಶಾಲಾ ವಾತಾವರಣ ಶಿಸ್ತು ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂಬುದೇ ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ರೀತಿಯ ಧಾರ್ಮಿಕ ಅಥವಾ ರಾಜಕೀಯ ಸಂಕೇತಗಳು ಶಾಲಾ ಆವರಣದಲ್ಲಿ ಪ್ರವೇಶಿಸುವುದನ್ನು ನಿಯಂತ್ರಿಸಲು ಈ ನಿಯಮ ಜಾರಿಯಲ್ಲಿದೆ ಎಂದು ಅವರು ಹೇಳಿದರು.
ಈ ಹೇಳಿಕೆ ಹೊರಬಂದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದ್ದು, ಶಿಕ್ಷಣ ವಲಯದಲ್ಲೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಗಮನ ಸೆಳೆಯಲಾಗಿದೆ.
ಶಾಲಾ ಶಿಸ್ತು ಮತ್ತು ಸಮಾನತೆಯನ್ನು ಕಾಪಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಒದಗಿಸುವುದು ಆದ್ಯತೆ ಎಂದು ಸಚಿವರು ಮತ್ತೊಮ್ಮೆ ಬತ್ತಿ ಹೇಳಿದರು.
ಹಿಜಾಬ್ ವಿಚಾರದಲ್ಲಿ ಸ್ಪಷ್ಟತೆ ಇದೆ ; ಅದು ಸಮಾನತೆಯ ಸಂಕೇತ, ಸಚಿವ ಮಧು ಬಂಗಾರಪ್ಪ ಹೇಳಿಕೆ:
ಹಿಜಬ್ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಹಿಜಾ ಭವಿಷ್ಯದಲ್ಲಿ ಸರ್ಕಾರಕ್ಕೆ ಸಂಪೂರ್ಣ ಸ್ಪಷ್ಟತೆ ಇದೆ ಎಂದು ಅವರು ಹೇಳಿದ್ದಾರೆ.
"ಹಿಜಾಬ್ ಬಗ್ಗೆ ನಾವು ನಮ್ಮ ಪ್ರಯಾಣಿಕೆಯಲ್ಲೇ ಸ್ಪಷ್ಟವಾಗಿ ಹೇಳಿದ್ದೇವೆ. ಜನರು ನಮಗೆ ಮತ ನೀಡಿದ್ದು, ಅವರ ವಿಶ್ವಾಸ ಮತ್ತು ಋಣವನ್ನು ನಾವು ತೀರಿಸಿದ್ದೇವೆ", ಎಂದು ಸಚಿವರು ಹೇಳಿದ್ದಾರೆ. ಇನ್ನೂ ನಾವು ಸಮಾನತೆಯ ಸಂಕೇತವಾಗಿ ನೋಡುತ್ತೇವೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಬಿಜೆಪಿಗೆ ಇದು ಹಿಜಾಬ್ ವಿಚಾರವಾಗಿದ್ದರೆ, ನಮಗೆ ಅದು ಸಮಾನತೆ ಮತ್ತು ಹಕ್ಕುಗಳ ಪ್ರತೀಕವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಈ ಹೇಳಿಕೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಶಿಕ್ಷಣ ನೀತಿ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಕುರಿತು ಚರ್ಚೆ ಆರಂಭವಾಗಿದೆ.
ಸರ್ಕಾರದ ನಿಲುವು ಸ್ಪಷ್ಟವಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡುವುದು ಮುಖ್ಯ ಗುರಿ ಎಂದು ಸಚಿವರು ಮತ್ತೊಮ್ಮೆ ಹೊತ್ತಿ ಹೇಳಿದ್ದಾರೆ.
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶವಿಲ್ಲ, ಯಾರಾದರೂ ನಿಯಮ ಉಲ್ಲಂಘಿಸಿ ಶಾಲೆಗೆ ಕೇಸರಿ ಶಾಲು ಧರಿಸಿ ಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟವಾಗಿದ್ದು, ಶಾಲಾ ಆವರಣದಲ್ಲಿ ಶಿಸ್ತು ಮತ್ತು ಸಮಾನತೆಯನ್ನು ಕಾಪಾಡುವುದು ಮುಖ್ಯ ಗುರಿ ಎಂದು ಸಚಿವರು ಹೇಳಿದ್ದಾರೆ. ಈ ವಿಷಯವನ್ನು ರಾಜಕೀಯವಾಗಿ ಬಳಸಬಾರದು ಎಂದು ಅವರು ಒತ್ತಿ ಹೇಳಿದ್ದಾರೆ.
ಇದೇ ವೇಳೆ ಕೇಂದ್ರ ವಿದ್ಯಾಲಯಗಳ ನಿಯಮಗಳನ್ನು ಉಲ್ಲೇಖಿಸಿದ ಸಚಿವರು,"ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ನಿಯಮಗಳಿಗೆ ಎಂಬುವುದನ್ನು ಬಿಜೆಪಿ ಮೊದಲು ಪರಿಶೀಲಿಸಬೇಕು" ಎಂದು ಕಿಡಿಕಾರಿದ್ದಾರೆ. ಹಿಜಾಬ್ ಮತ್ತು ಶಾಲಾ ಡ್ರೆಸ್ ಕೋಡ್ ವಿಚಾರವನ್ನು ರಾಜಕೀಯವಾಗಿ ಬಣ್ಣಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಈ ಹೇಳಿಕೆಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಡ್ರೆಸ್ ಕೋಡ್ ಕುರಿತ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
Also Read: