ಬ್ಯಾಂಕ್ ಆಫ್ ಬರೋಡ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಲಕ್ಷ ರೂಪಾಯಿಗಳವರೆಗೆ ಸಂಬಳ ದೊರೆಯುವ ಸಾಧ್ಯತೆ ಇದೆ. ಈ ನೇಮಕಾತಿಯ ಮೂಲಕ ಮ್ಯಾನೇಜರ್ ಸ್ಪೇಷಲಿಸ್ಟ್ ಆಫೀಸರ್ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ವಯೋಮಿತಿ ಹಾಗೂ ಅನುಭವದ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆಗೆ ಒಳಪಡಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಸಂದರ್ಶನ ಅಥವಾ ಶಾರ್ಟ್ ಲಿಸ್ಟಿಂಗ್ ವಿಧಾನವನ್ನು ಅನುಸರಿಸುವ ಸಾಧ್ಯತೆ ಇದೆ. ಒಟ್ಟು 419 ಹಿರಿಯ ವ್ಯವಸ್ಥಾಪಕ, ಉಪಯುಕ್ತ ಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ MBA ಅರ್ಹತೆ ಹೊಂದಿರುವವರು ಫೆಬ್ರುವರಿ 26 ಒಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಇಲ್ಲದೆ ಸಂದರ್ಶನ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರ ಉದ್ಯೋಗ ಆಕರ್ಷಕ ಸಂಬಳ ಭವಿಷ್ಯ ಭದ್ರತೆ ಮತ್ತು ಪ್ರೋತ್ಸಾಹಕ ಸೌಲಭ್ಯಗಳು ಬೇಕೆನ್ನುವವರಿಗೆ ಇದು ಉತ್ತಮ ಅವಕಾಶವಾಗಿದೆ.
ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನ ವಾಗಿ ಓದುವುದ ಅತ್ಯಂತ ಮುಖ್ಯ. ಇದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಲು ಉತ್ತಮ ಅವಕಾಶವಾಗಿದೆ.
ಆಸಕ್ತರು ಫೆಬ್ರವರಿ 6 ರಿಂದ ಫೆಬ್ರವರಿ 26 ರವರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರದೆ, ಅಭ್ಯರ್ಥಿಗಳ ಆಯ್ಕೆ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ಓಬಿಸಿ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳು ರೂ. 850 ಪಾವತಿಸಬೇಕಾಗಿದ್ದು ಎಸ್ಸಿ,ಎಸ್ಟಿ, ಪಿಡಬ್ಲ್ಯೂಡಿ, ಇಎಸ್ ಎಂ, ಡಿಇಎಸ್ ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 175 ಮಾತ್ರ ನಿಗದಿಯಾಗಿದೆ.
ಬ್ಯಾಂಕ್ ಆಫ್ ಬರೋಡ (Bank of Baroda) ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಿಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಅಥವಾ MBA, PGDM, CA, CFA, CMA ಮುಂತಾದ ವೃತ್ತಿಪರ ಅರ್ಹತೆಗಳನ್ನು ಹೊಂದಿರಬೇಕು. ನಿಯಮಿತ ಹಾಗೂ ಒಪ್ಪಂದದ ಆಧಾರದ ಮೇಲೆ ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ, ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಪ್ರಕಾರ ವಯೋಮಿತಿ 22 ರಿಂದ ೪೦ ವರ್ಷಗಳ ನಡುವೆ ನಿಗದಿ ಪಡಿಸಲಾಗಿದೆ. ಸರ್ಕಾರ ನಿಯಮಗಳಂತೆ ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪಿ ಎಚ್ ಡಿ ಪಡೆದವರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಲು ಬಯಸುವವರಿಗೆ ಇದು ಉತ್ತಮ ಸುವರ್ಣ ಅವಕಾಶವಾಗಿದೆ.
ಅರ್ಹರು ಅಂತಿಮ ದಿನಾಂಕ ಗಿಂತ ಮುಂಚಿತವಾಗಿ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವುದು ಉತ್ತಮವಾಗಿದೆ. ಒಟ್ಟಿನಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ಹುದ್ದೆ ಮತ್ತು ಸ್ಥಿರ ವೃತ್ತಿ ಜೀವನ ಕನಸು ಕಾಣುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡ ಈ ನೇಮಕಾತಿ ಒಂದು ಸುವರ್ಣ ಅವಕಾಶವಾಗಿದೆ.
ಇನ್ನಷ್ಟು ಓದಿರಿ:
Pariksha Pe Charcha' 2026ರಲ್ಲಿ AI ಕುರಿತು ಪ್ರಧಾನಿ ಮೋದಿ ಎಚ್ಚರಿಕೆ!