Belagavi News:
ಕಡಬ (ದಕ್ಷಿಣ ಕನ್ನಡ): ಕಡಬ ಪಟ್ಟಣದ ಬ್ಯಾಂಕ್ ಗಳಲ್ಲಿ ನಕಲಿ ಚಿನ್ನದ ಅಭರಣಗಳನ್ನು ಅಡವಿಟ್ಟು ಮೋಸದಿಂದ ಹಣ ಪಡೆಯಲು ಯತ್ನಿಸಿದ ಆರೋಪದಲ್ಲಿ ಕಡಬ ಪೊಲೀಸರು ಇಬ್ಬರನ್ನು ಬಂಧಿಸಿ, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಬಂಧಿತರನ್ನು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಭಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷಿದ್ (45) ಎಂದು ಗುರುತಿಸಲಾಗಿದೆ.
ಜುಲೈ 3 ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ಸಂಶಯಾಸ್ಪದವಾಗಿ ಓಡಾಡುತ್ತಿರುವ ಕುರಿತು ಪೋಲಿಸರಿಗೆ ಮಾಹಿತಿ ಲಭಿಸಿತು. ತಕ್ಷಣ ಸ್ಥಳಕ್ಕೆ ತೆರಳಿದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರನೆ ನಡೆಸಿದರು.
ಪ್ರಾಥಮಿಕ ವಿಚಾರಣೆಯಲ್ಲಿ, ಅವರು ಬ್ಯಾಂಕ್ ನಲ್ಲಿ ಸುಮಾರು 120 ಗ್ರಾಂ ಚಿನ್ನದ ಅಮರನವನ್ನು ಅಡವಿಟ್ಟು ಸಾಲ ಪಡೆಯಲು ಬಂದಿರುವುದಾಗಿ ತಿಳಿಸಿದ್ದಾರೆ. ಬಳಿಕ ಅನುಮಾನಗೊಂಡ ಪೊಲೀಸರು ಅಭರಣಗಳನ್ನು ಪರಿಶೀಲನೆಗೆ ಒಳಪಡಿಸಿದಾಗ ಅವು ನಕಲಿ ಚಿನ್ನವಾಗಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳು ನಕಲಿ ಚಿನ್ನವನ್ನು ಅಡವಿಟ್ಟು ಬ್ಯಾಂಕ್ ನಿಂದ ಹಣ ಪಡೆದು ವಂಚನೆ ನಡೆಸಲು ಯತ್ನಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಕಲಿ ಚಿನ್ನ ಎಲ್ಲಿಂದ ತರಲಾಗಿದೆ. ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಹಾಗೂ ಇದೇ ರೀತಿಯ ವಂಚನೆಗೆ ಹಿಂದೆ ಯತ್ನಿಸಿದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಘಟನೆ ಬ್ಯಾಂಕ್ ಗಳಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆಯುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ.
ಪೊಲೀಸರ ಪ್ರಕಾರ, ಆರೋಪಿಗಳ ನಡೆ - ನುಡಿ ಹಾಗೂ ನೀಡದ ಉತ್ತರಗಳಲ್ಲಿ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕಡಬ ಪೋಲಿಸ್ ಠಾಣೆಗೆ ಕರೆತರಲಾಯಿತು. ಅವರ ಬಳಿಯಿದ್ದ ಚಿನ್ನದ ಅಭರಣಗಳ ಮಾಲೀಕತ್ವ ಅಥವಾ ಖರೀದಿಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಸಲ್ಲಿಸಲು ಅವರು ವಿಫಲರಾದರು.
ತೀವ್ರ ವಿಚಾರಣೆ ನಡೆಸಿದಾಗ, ಅಭರಣಗಳನ್ನು ಕೃತಕವಾಗಿ ಹೆಚ್ಚು ತೂಕ ಬರುವಂತೆ ಮಾರ್ಪಡಿಸಿ ಬ್ಯಾಂಕ್ ನಲ್ಲಿ ಅಡವಿಟ್ಟು ಬ್ಯಾಂಕ್ ಅಧಿಕಾರಿಗಳಿಗೆ ಮೋಸ ಮಾಡಿ ಹಣ ಪಡೆಯುವ ಆದೇಶ ಹೊಂದಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 83/2026 ರಡಿ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 318(4) ಹಾಗೂ 62ರ ಅಡಿಯಲ್ಲಿ ತನಿಖೆ ಮುಂದುವರಿದಿದೆ.
ಈ ಪ್ರಕರಣವು ಕೇವಲ ಇಬ್ಬರ ಬಂಧನಕ್ಕೆ ಸೀಮಿತವಾಗಿದೆಯೇ ಅಥವಾ ಬ್ಯಾಂಕ್ ಕಳಿಗೆ ನಕಲಿ ಅಥವಾ ತೂಕ ಹಚ್ಚಿಸಿದ ಚಿನ್ನದ ಅಭರಣಗಳನ್ನು ಅಡವಿಟ್ಟು ವಂಚನೆ ನಡೆಸುವ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದೆಯೇ ಎಂಬ ದಿಕ್ಕಿನಲ್ಲಿಯೋ ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ವಶಪಡಿಸಿಕೊಂಡಿರುವ ಚಿನ್ನದ ಅಭರಣಗಳ ನೈಜತೆ, ತೂಕದಲ್ಲಿ ಮಾಡಿರುವ ಬದಲಾವಣೆ ಹಾಗೂ ಅವುಗಳ ಮೂಲ ಪತ್ತೆ ಹಚ್ಚಲು ತಾಂತ್ರಿಕ ಮತ್ತು ವೈಜ್ಞಾನಿಕ ಪರೀಕ್ಷೆ ನಡೆಸುವ ಸಾಧ್ಯತೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಬ್ಯಾಂಕ್ ಗಳು ಹಾಗೂ ಹಣಕಾಸು ಸಂಸ್ಥೆಗಳು ಚಿನ್ನದ ಅಡವಿನ ವೇಳೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಕೊಡ ನಕಲಿ ಚಿನ್ನ, ಬ್ಯಾಂಕ್ ವಂಚನೆ ಅಥವಾ ಇಂತಹ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಇಲಾಖೆ ಮನವಿ ಮಾಡಿದೆ.