<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬಾರಿ ಮಳೆ ಎಫೆಕ್ಟ್ : ಬೆಳಗಾವಿ ಪರಿಸ್ಥಿತಿ ಬಗ್ಗೆ ಡಿಸಿ ಹೇಳಿದ್ದೇನು?

ಬಾರಿ ಮಳೆ ಎಫೆಕ್ಟ್ : ಬೆಳಗಾವಿ ಪರಿಸ್ಥಿತಿ ಬಗ್ಗೆ ಡಿಸಿ ಹೇಳಿದ್ದೇನು?
Summary: Belgaum, July 06: The water level of major rivers in Belgaum district has risen due to the heavy rains that have been pouring in the Western Ghats region for the past few days, and the district administration is continuously monitoring the situation. In this regard, the District Collector has given detailed information about the rainfall situation in the district, the flow of rivers, the inflow of reservoirs and precautionary measures.

BELAGAVI NEWS:

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ ಬೆಳಗಾವಿ ಜಿಲ್ಲೆಯ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಭೀತಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟೆಚರ ವಹಿಸಿದೆ.

ಈ ಕುರಿತು ಖಾಸಗಿ ಮಾಧ್ಯಮ ಒಂದರಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹದಂತ ಪರಿಸ್ಥಿತಿ ಎದುರಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿರಂತರ ಮಳೆಯಿಂದ ನದಿಗಳ ಹರಿವು ಹೆಚ್ಚಾಗಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಆಡಳಿತವು ಎಲ್ಲಾ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದೆ ಎಂದು ತಿಳಿಸಿದ್ದಾರೆ.

ಜಲಾಶಯಗಳ ಒಳಹರಿವು, ನದಿಗಳ ನೀರಿನ ಮಟ್ಟ ಹಾಗೂ ತಗ್ಗು ಪ್ರದೇಶಗಳ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಭಾರಿ ಮಳೆ ಮುಂದುವರೆದರೆ ಅನಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ನದಿ ತೀರ ಹಾಗೂ ಜಲಾವೃತ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಪ್ರವಾಹ ಪರಿಸ್ಥಿತಿಯ ಎದುರಾದರೆ ತಕ್ಷಣ ಸ್ಪಂದಿಸಲು ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತುರ್ತು ಸೇವಾ ಇಲಾಖೆಗಳನ್ನು ಕಟ್ಟೇಚ್ಚರದಲ್ಲಿರಿಸಲಾಗಿದ್ದು, ನದಿ ತೀರದ ಗ್ರಾಮಗಳ ಮೇಲೆ ವಿಶೇಷ ನಿಗಾ ವಹಿಸಲಾಗಿದೆ.

ಪ್ರಸ್ತುತ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿ ವ್ಯಾಪ್ತಿಯಲ್ಲಿ ಒಟ್ಟು ಏಳು ಸೇತುವೆಗಳು ಜಲಾವೃತಗೊಂಡಿವೆ. ನೀರಿನ ಮಟ್ಟ ಏರಿಕೆ ಆಗಿರುವ ಕಾರಣ ಕೆಲ ಗ್ರಾಮಗಳ ಸಂಪರ್ಕಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದ್ದು, ಸಾರ್ವಜನಿಕರು ಜಲಾವೃತ ಸೇತುವೆಗಳನ್ನು ದಾಟದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದ್ದು, ಮಳೆ ಮುಂದುವರೆದರೆ ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತಕ್ಷಣ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನದೀ ತೀರದ ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕೃತ ಸೂಚನೆಯನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ನಿರಂತರ ಮಳೆಯ ಪರಿಣಾಮ ಜಿಲ್ಲೆಯಲ್ಲಿ ಇದುವರೆಗೆ 5 ಮನೆಗಳಿಗೆ ಹಾನಿ ಸಂಭವಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾನಿಗೊಳಗಾದ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಬಾರಿ ಮಳೆಯಿಂದ ಜಲಪಾತಗಳಲ್ಲಿ ನೀರಿನ ಹರಿವು ಅಪಾಯದ ಮಟ್ಟಕ್ಕೆ ಏರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಪ್ರಮುಖ ಜಲಪಾತಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ಜಲಪಾತ ಮತ್ತು ಜಲಾವೃತ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಕರೆ ನೀಡಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online