<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

Belagavi Hostel Tragedy: ಹುಟ್ಟುಹಬ್ಬದಂದೇ ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Belagavi Hostel Tragedy: ಹುಟ್ಟುಹಬ್ಬದಂದೇ ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ
Summary: A tragic incident has taken place in a government hostel in Belagavi where a B.Sc. student committed suicide on her birthday. The incident has shocked the students and the police have registered a case and started an investigation.

belagvi news :

ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು ಹುಟ್ಟು ಹಬ್ಬದ ದಿನವೇ ಅಂತಿಮ ವರ್ಷದ ಬಿಎಸ್ ಸಿ ವಿದ್ಯಾರ್ಥಿನಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಹಾಸ್ಟೆಲ್ ನಲ್ಲಿ ಈ ದುರ್ಘಟನೆ ನಡೆದಿದ್ದು ವಿದ್ಯಾರ್ಥಿನಿಯ ಸಾವಿನಿಂದ ಕುಟುಂಬಸ್ಥರು ಹಾಗೂ ಸಹಪಾಠಿಗಳು ಶೋಕದಲ್ಲಿ ಮುಳುಗಿದ್ದಾರೆ.

ಮೃತ ವಿದ್ಯಾರ್ಥಿನಿ ಅಂತಿಮ ವರ್ಷದ ಬಿ ಎಸ್ ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಹುಟ್ಟುಹಬ್ಬ ಆಚರಿಸಬೇಕಿದ್ದ ದಿನವೇ ಅವರು ಆತ್ಮಹತ್ಯೆಗೆ ಶರಣಾಗಿರುವುದು ಎಲ್ಲರನ್ನು ಆಘಾತ ಮೂಡಿಸಿದೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲೆ ನಡೆಸಿದ್ದು ಪ್ರಕರಣ ದಾಖಲಿಸಿ ಕೊಂಡು ತನಿಖೆ ಆರಂಭಿಸಿದ್ದಾರೆ ವಿದ್ಯಾರ್ಥಿನಿಯ ಸಾವಿನ ಹಿನ್ನೆಲೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Sponsored

ಬೆಳಗಾವಿಯಲ್ಲಿ ಮನಕಲಕುವ ಘಟನೆ ನಡೆದಿದ್ದು ಹುಟ್ಟು ಹಬ್ಬದ ದಿನವೇ ಕಾಲೇಜಿ ವಿದ್ಯಾರ್ಥಿನಿ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯ ವಸತಿ ನಿಲಯದಲ್ಲಿ ಸೋಮವಾರ ಸಂಜೆ 4:00 ಸುಮಾರಿಗೆ ಈ ದುರ್ಘಟನೆ ನಡೆದಿದೆ.

ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ. ಅವರು ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯ ವಸತಿ ನಿಲಯದಲ್ಲಿ ವಾಸವಿದ್ದು ಕೆ ಎಲ್ ಇ ಆರ್ .ಎಲ್. ಎಸ್. ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದರು.

ಸೋಮವಾರ ಕಾಲೇಜಿಗೆ ತೆರಳದೆ ಹಾಸ್ಟೆಲ್ ನಲ್ಲೆ ಉಳಿದಿದ್ದ ಕಾವೇರಿ ಬೆಳಗ್ಗೆಯಿಂದ ಮಧ್ಯಾಹ್ನ ದವರೆಗೆ ಸಹಪಾಠಿಗಳು ಹಾಗೂ ಸಿಬ್ಬಂದಿಯೊಂದಿಗೆ ಖುಷಿಯಾಗಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಬಳಿಕ ತಮ್ಮ ಕೊಠಡಿಯನ್ನು ಒಳಗಡೆಯಿಂದ ಲಾಕ್ ಮಾಡಿಕೊಂಡಿದ್ದರು. ಊಟಕ್ಕೆ ಕರೆಯಲು ಅಡುಗೆ ಸಿಬ್ಬಂದಿ ಬಾಗಿಲು ತಟ್ಟಿದಾಗ ಪ್ರತಿಕ್ರಿಯೆ ಸಿಗದ ಹಿನ್ನೆಲೆ ಪರಿಶೀಲನೆ ನಡೆಸಿದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಹಾಸ್ಟೆಲ್ ಸಿಬ್ಬಂದಿ ತಿಳಿಸಿದ್ದಾರೆ.

ಘಟನೆಯಿಂದ ಹಾಸ್ಟೆಲ್ ವಿದ್ಯಾರ್ಥಿನಿಯರು ಹಾಗೂ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಎನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Sponsored

ಕಳೆದ ಮೂರು ತಿಂಗಳ ಹಿಂದಷ್ಟೇ ಕಾವೇರಿ ಉಮೇಶ್ ನಾಯಕ್ ಅವರ ನಿಶ್ಚಿತಾರ್ಥ ನಡೆದಿದ್ದು, ಪೋಲಿಸ್ ಕಾನ್ಸ್ಟೇಬಲ್ ಒಬ್ಬರೊಂದಿಗೆ ಮದುವೆ ನಿಶ್ಚಯವಾಯಿತ್ತು ಎಂಬ ಮಾಹಿತಿ ತಿಳಿದು ಬಂದಿದೆ. ಸೋಮವಾರ ಕಾವೇರಿಯ ಹುಟ್ಟುಹಬ್ಬ ಆಗಿದ್ದರಿಂದ ಕುಟುಂಬಸ್ಥರು, ಭಾವಿಪತಿ ಹಾಗೂ ಸ್ನೇಹಿತರು ಶುಭಾಶಯ ಕೋರಿದ್ದರು. ಕಾವೇರಿಯು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದರು ಎನ್ನಲಾಗಿದೆ.

ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿ ಇರಬೇಕಿದ್ದ ಕಾವೇರಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಮತ್ತು ಸ್ನೇಹಿತರನ್ನು ತೀವ್ರ ಆಘಾತಕ್ಕೀಡಾಗಿಸಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹಾಸ್ಟೆಲಿಗೆ ಆಗಮಿಸಿದ ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪರಿಶಿಷ್ಟ ಪಂಗಡಗಳ ಇಲಾಖೆ ಜಿಲ್ಲಾಧಿಕಾರಿ ಬಸವರಾಜ್ ಕುರಿಹುಲಿ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ಮಧ್ಯಾಹ್ನ 4:00 ಸುಮಾರಿಗೆ ಅಡುಗೆ ಸಿಬ್ಬಂದಿ ರೂಮ್ ಬಾಗಿಲು ತಟ್ಟಿ ಕರೆಯಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ .

Sponsored

"ಕಾವೇರಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ ಅವರು ಪ್ರತಿಭಾನಿತ್ವ ವಿದ್ಯಾರ್ಥಿನಿಯಾಗಿದ್ದು, ಈ ತರ ವಿದ್ಯಾರ್ಥಿನಿಯರಿಗೂ ಮಾರ್ಗದರ್ಶನ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಇದೇ ಹಾಸ್ಟೆಲ್ ನಲ್ಲಿ ವಾಸವಾಗಿದ್ದರು. ಇನ್ನೇನು ಎರಡು ತಿಂಗಳಲ್ಲಿ ಅವರ ಡಿಗ್ರಿ ಪೂರ್ಣಗೊಳ್ಳಬೇಕಿತ್ತು," ಎಂದು ಬಸವರಾಜ ಕುರಿಹುಲಿ ಮಾಹಿತಿ ನೀಡಿದ್ದಾರೆ.

ನಮ್ಮ ಅಕ್ಕ ಎಲ್ಲರ ಜೊತೆಗೆ ಚೆನ್ನಾಗಿಯೇ ಇದ್ದರು. ನಿನ್ನೆ ರಾತ್ರಿ ಕಾಲ್ ಮಾಡಿ ಮಾತಾಡಿದ್ದರು. ಪರೀಕ್ಷೆ ನಡೆದಿವೆ ಅಂತಾ ಹೇಳಿದ್ದರು. ಇವತ್ತು ಆಕೆಯ ಬರ್ತಡೆ ಇತ್ತು. ಮೂರು ತಿಂಗಳ ಹಿಂದೆ ಫೆಬ್ರುವರಿಯಲ್ಲಿ ನಿಶ್ಚಿತಾರ್ಥ ಆಗಿತ್ತು. ಈಗ ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಸಹೋದರ ಲಗಮೇಶ ನಾಯಕ ಅಕ್ಕನನ್ನು ನೆನೆದು ಕಣ್ಣೀರು ಹಾಕಿದರು.

Also Read:

ಏಕದಿನ ಕ್ರಿಕೆಟ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿ ಮುಂದುವರಿಕೆ: ICC ವಾರ್ಷಿಕ ರ‍್ಯಾಂಕಿಂಗ್

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online