<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಳಗಾವಿ ಪ್ರಗತಿ ಪರಿಶೀಲನಾ ಸಭೆ: ಜನ ಸೇವೆಗೆ ಆದ್ಯತೆ ನೀಡಲು ಡಿ.ಕೆ.ಶಿವಕುಮಾರ್ ಸೂಚನೆ

ಬೆಳಗಾವಿ ಪ್ರಗತಿ ಪರಿಶೀಲನಾ ಸಭೆ: ಜನ ಸೇವೆಗೆ ಆದ್ಯತೆ ನೀಡಲು ಡಿ.ಕೆ.ಶಿವಕುಮಾರ್ ಸೂಚನೆ
Summary: At a division-level progress review meeting held at Suvarna Vidhana Soudha in Belgaum, Chief Minister Siddaramaiah said that officials should stop crowding people into offices and ensure that government services reach people's doorsteps. He pointed out that offices should work with dignity, responsibility and a people-friendly attitude.

belagavi news:

ಬೆಳಗಾವಿ : ಜನರ ಬಳಿ ಸರ್ಕಾರ ಇರಬೇಕು, ಕಚೇರಿಗೆ ಅಲೆ ಇಳಿಸುವುದನ್ನು ನಿಲ್ಲಿಸಿ – ಸಿಎಂಡಿ.ಕೆ.ಶಿವಕುಮಾರ್

"ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಗೇ ಸರ್ಕಾರ ತಲುಪಬೇಕು.ಜನರನ್ನು ಕಚೇರಿಗಳಿಗೆ ಅಲೆಸುವ ಪದ್ಧತಿ ನಿಲ್ಲಬೇಕು. ಅಧಿಕಾರಿಗಳು ಘನತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು" ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಗುರುವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಕಾರ್ಯ ನಿರ್ವಹಿಸುತ್ತಿರುವುದು ಜಿಲ್ಲಾಧಿಕಾರಗಳು ಮತ್ತು ಸಿಇಒಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.ಅಧಿಕಾರಿಗಳ ಚಲನವಲನದ ಮೇಲೂ ನಿರಂತರ ನಿಗ ಇರಬೇಕು ಎಂದರು.

ಜನರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವೆ ಇಲಾಖೆ ಆರಂಭಿಸಲಾಗಿದ್ದು,ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಸಿಎಂ ತಿಳಿಸಿದರು.

ಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಆಯ್ದ ತಾಲೂಕುಗಳಲ್ಲಿ ಪ್ರಜಾ ಸೇವಾ ಸಂಪರ್ಕ ಸಭೆಗಳನ್ನು ನಡೆಸಬೇಕು. ಈ ಸಭೆಗಳ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಶೀಘ್ರ ಪರಿಹಾರ ಕಲ್ಪಿಸುವಂತೆ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನಸಂಪರ್ಕ ಸಭೆಗೆ ನಿಗದಿತ ಮಾದರಿ, 2000 ಸರ್ಕಾರಿ ಶಾಲೆಗಳ ನಿರ್ಮಾಣ ಗುರಿ-ಸಿಎಂ ಡಿಕೆ ಶಿವಕುಮಾರ್

ಜನರ ಸಮಸ್ಯೆಗಳಿಗೆ ಸ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ನಡೆಯುವ ಪ್ರಜಾ ಸೇವಾ ಜನ ಸಂಪರ್ಕ ಸಭೆಗಳಿಗೆ ಅರ್ಜಿಗಳ ಸ್ವೀಕಾರ, ವಿಲೇವಾರಿ ಸೇರಿದಂತೆ ಪ್ರತಿಯೊಂದು ಹಂತಕ್ಕೂ ನಿಗದಿತ ವಿನ್ಯಾಸ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಾನೂನು ಚೌಕಟ್ಟಿನೊಳಗೆ ಜನರ ಸಮಸ್ಯೆಗಳನ್ನು ದೀರ್ಘವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳ ಉತ್ತಮ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಗ್ರಾಮಗಳಿಂದ ಪಟ್ಟಣಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಡೆಯುವ ಉದ್ದೇಶದಿಂದ, ಸಿಎಸ್‌ಆರ್ ಯೋಜನೆಯಡಿ ₹8000 ಕೋಟಿ ವೆಚ್ಚವನ್ನು ರಾಜ್ಯಾದ್ಯಂತ ಸುಮಾರು 2000 ಸರ್ಕಾರಿ ಶಾಲೆಗಳನ್ನು ನಿರ್ಮಿಸುವ ಗುಡಿ ಹೊಂದಲಾಗಿದೆ ಎಂದು ಸಿಎಂ ತಿಳಿಸಿದರು.

ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದರಂತೆ ₹10ರಿಂದ₹15 ಕೋಟಿ ವೆಚ್ಚದಲ್ಲಿ ಆಧುನಿಕ ಸರಕಾರಿ ಶಾಲೆಗಳನ್ನು ನಿರ್ಮಿಸಲಾಗುವುದು. ಜೊತೆಗೆ, ಪ್ರತಿ ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳು ತಲಾ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲ ಮಕ್ಕಳಿಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ದೊರೆಯಬೇಕು ಎಂಬುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.

ಇದೆ ವೇಳೆ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಸಿಎಂ, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯಬೇಕು ಎಂಬುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಯಾವುದೇ ರಾಜಕೀಯ ಪಕ್ಷದ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೆ,ಬೂತ್ ಮಟ್ಟದ ಅಧಿಕಾರಿಗಳು ನಿಯಮಾನುಸಾರ ಮನೆಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಮತದಾರರ ನೋಂದಣಿ ಕಾರ್ಯವನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಡಿಕೆ ಶಿವಕುಮಾರ್ ನಿರ್ದೇಶನ ನೀಡಿದರು.

ಜಾತಿ - ವಾಸಸ್ಥಳ ಪ್ರಮಾಣ ಪತ್ರ ಡೌನ್ಲೋಡ್ ಸೌಲಭ್ಯ,10,000 ಭಾರತ ಜೋಡೋ ಯುವ ಸಂಘಗಳ ಸ್ಥಾಪನೆ - ಸಿಎಂ ಡಿಕೆ ಶಿವಕುಮಾರ್

ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ನೀತಿನಲ್ಲಿ ಜಾತಿ ಹಾಗೂ ವಾಸ ಸ್ಥಳಗಳ ದೃಢೀಕರಣ ಪ್ರಮಾಣಪತ್ರಗಳನ್ನು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾನದ ಹಕ್ಕು ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರೆ ನೀಡಿದರು. ಯಾವುದೇ ಅರ್ಹ ವ್ಯಕ್ತಿ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದೇಶದ ಸಮಗ್ರತೆ ಮತ್ತು ಐಕ್ಯತೆ ಬಲಪಡಿಸುವ ಉದ್ದೇಶದಿಂದ ಭಾರತ ಜೋಡೋ ಯುವಕ ಸಂಘಗಳು ರಾಜ್ಯಾದ್ಯಂತ ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಿಸಿದರು. ಪ್ರತಿ ಗ್ರಾಮ ಪಂಚಾಯಿತಿಗೆ ಬಂದು ಯುವಕ ಸಂಘ ರಚಿಸಿ, ಪ್ರತಿ ಸಂಘಕ್ಕೆ₹10 ಲಕ್ಷ ನೆರವು ನೀಡಲಾಗುವುದು. ರಾಜ್ಯದಲ್ಲಿ ಒಟ್ಟು 10,000 ಭಾರತ ಜೋಡೋ ಯುವ ಸಂಘಗಳನ್ನುಸ್ಥಾಪಿಸುವ ಗುರಿ ಹೊಂದಿದ್ದು, ಈ ಯೋಜನೆಗಾಗಿ ₹1000ಕೋಟಿ ಮೀಸಲಿಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ,ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಡ ಕುಟುಂಬಗಳಿಗೆ 5,000 ದಿಂದ 10,000 ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಜೊತೆಗೆ,ಪ್ರತಿ ತಾಲೂಕಿನಲ್ಲೂ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಯೋಜನೆ ರೂಪಿಸಲಾಗುತ್ತಿದ್ದು,ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೂಚಿಸುವತ್ತ ಸರ್ಕಾರ ಗಮನ ಹರಿಸಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಜನರ ಬಳಿ ತೆರಳಿ ಸಮಸ್ಯೆ ಆಲಿಸಿ, ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ-ಡಿಸಿಎಂ ಡಾ.ಜಿ.ಪರಮೇಶ್ವರ್

ಹೊಸ ಆಲೋಚನೆಗಳೊಂದಿಗೆ ಆಡಳಿತ ನಡೆಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಂದಿರುವ ಆಶಯದಂತೆ ಅಧಿಕಾರಿಗಳು ತ್ವರಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಪ್ರಾಥಮಿಕವಾಗಿ ಮಾತನಾಡಿದ ಅವರು,ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದಕ್ಕೂ ಸಮಾನ ಆದ್ಯತೆ ನೀಡಬೇಕು ಎಂದರು.

ಅಧಿಕಾರಿಗಳು ಕಚೇರಿಯಲ್ಲೇ ಸೀಮಿತವಾಗಿರದೆ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕಲ್ಪಿಸುವಂತೆ ದಾರಿ ಪರಮೇಶ್ವರ ನಿರ್ದೇಶನ ನೀಡಿದರೆ,

ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಪೂರಕವಾಗಿವೆ. ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ಕುರಿತು ಕಳವಳ ವ್ಯಕ್ತಪಡಿಸಿದ ಡಿಸಿಎಂ, ಈ ಬಾರಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಶೇ. 17ರಷ್ಟು ಕಡಿಮೆಯಾಗಿದೆ ಎಂದು ತಿಳಿಸಿದರು. ಕಳೆದ ಒಂದು ಎರಡು ದಿನಗಳಲ್ಲಿಯೂ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದರೂ, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಬರ ನಿರ್ವಹಣಾ ಟಾಸ್ಕ್ ಫೋರ್ಸ್ಗಳು ನಿಯಮಿತವಾಗಿ ಸಭೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಗತ್ಯವಿದ್ದಲ್ಲಿ ಜಲ ಮೂಲಗಳಿಂದ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಡಾ.ಜಿ.ಪರಮೇಶ್ವರ್ ನಿರ್ದೇಶನ ನೀಡಿದರು.

ಮೇವಿನ ಕಿಟ್ ವಿತರಣೆ,140 ಕೋಟಿ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ವೇಗ -ಡಿಸಿಎಂ ಡಾಜಿ ಪರಮೇಶ್ವರ

ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ರೈತರ ಹಿತಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಯ ಡಾಜಿಪರಮೇಶ್ವರ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು,ಮೇವಿನ ಕೊರತೆ ಇರುವ ಪ್ರದೇಶಗಳಲ್ಲಿ ರೈತರಿಗೆ ಬೇವಿನಕೆಟ್ಟುಗಳನ್ನು ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯ ಪ್ರಮಾಣವನ್ನು ನಿಖರವಾಗಿ ದಾಖಲಿಸಲು ರಾಜ್ಯದ ಮಳೆ ಮಾಪನ ಕೇಂದ್ರಗಳನ್ನು ಆಧುನಿಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ಇದೇ ವೇಳೆ,ಕೇಂದ್ರ ಸರ್ಕಾರ ಇದುವರೆಗೆ ಅಗತ್ಯ ಗೊಬ್ಬರದ ಕೇವಲ 50ರಷ್ಟು ಮಾತ್ರ ಪೂರೈಕೆ ಮಾಡಿದೆ ಎಂದು ಹೇಳಿದವರು,ಉಳಿದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಗಳ ಕುರಿತು ಮಾತನಾಡಿದ ಡಿಸಿಎಂ, ಮನೆ ಮನೆಗೆ ತೆರಳಿ ಹಕ್ಕುಪತ್ರ ವಿತರಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆರಂಭಿಸಿದೆ ಎಂದು ಹೇಳಿದರು.

ಇದಲ್ಲದೆ, ಜಮೀನು ದಾಖಲೆಗಳ ಸುಮಾರು 140 ಕೋಟಿ ಪುಟಗಳನ್ನು ಡಿಜಿಟಲೀಕರಣ ಗೊಳಿಸುವ ಕಾರ್ಯವನ್ನು ಕರ್ನಾಟಕ ಕಂದಾಯ ಇಲಾಖೆ ಕೈಗೆತ್ತಿಕೊಂಡಿದ್ದು, ದೇಶದಲ್ಲಿ ಇದೇ ಮೊದಲ ಪ್ರಯತ್ನವಾಗಿದೆ ಎಂದು ತಿಳಿಸಿದರು.ಈ ಯೋಜನೆ ಯಶಸ್ವಿ ಆದರೆ ಭೂ ದಾಖಲೆಗಳ ನಿರ್ವಹಣೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಹಂಗಾಮಿ ಸಭಾಧ್ಯಕ್ಷ ರುದ್ರಪ್ಪ ಲಮಾಣಿ,ಸಚಿವರಾದ ಎಂ.ಬಿ.ಪಾಟೀಲ್,ಸತೀಶ್ ಜಾರಕಿಹೊಳಿ,ಯುಟಿ ಖಾದರ್, ಈಶ್ವರ್ ಕಂಡ್ರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Also Read:

ಟೀಮ್ ಇಂಡಿಯಾಗೆ ಇಂದು ನಿರ್ಣಾಯಕ ದಿನ: IND vs ENG 4ನೇ T20 ಪಂದ್ಯದಲ್ಲಿ ಗೆಲುವು ಅನಿವಾರ್ಯ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online