belagavi news:
ಮೇ 10 ರಂದು ಬೆಂಗಳೂರಿನ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಅಗತ್ಯ ನಿರ್ವಹಣಾ ಕಾಮಗಾರಿಕೆಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಹೊಸಹಳ್ಳಿ ಮತ್ತು ಕಬ್ಬನ ಪಾರ್ಕ್ ನಡುವಿನ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ಕುರಿತು ಪ್ರಕಟನೆ ಹೊರಡಿಸಿದು ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಸೂಚಿಸಿದೆ.
ಬೆಂಗಳೂರು, ಮೇ 8: ಅಗತ್ಯ ನಿರ್ವಹಣಾ ಕಾಮಗಾರಿಕೆಗಳ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇಹತ್ತರ ಭಾನುವಾರ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಕಟನೆ ಮೂಲಕ ತಿಳಿಸಿದೆ.
ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯ ವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಬಿ
ಎಂಆರ್ ಸಿಎಲ್ ವಿನಂತಿಸಿದೆ.
• ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
• ನಿರ್ವಹಣಾ ಕಾಮಗಾರಿಕೆಗಳ ಹಿನ್ನೆಲೆ ಸಂಚಾರ ತಾತ್ಕಾಲಿಕ ಸ್ಥಗಿತ
• ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡ ಬಿಎಂಆರ್ ಸಿಎಲ್
ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ (ಸೆಂಟ್ರಲ್ ಕಾಲೇಜ್) ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಡುವಿನ ಮೆಟ್ರೋ ರೈಲು ಸೇವೆ ತಾತ್ಕಾಲಿಕವಾಗಿ 2 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ.
ಅದಾಗ್ಯೂ, ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾನಗಳಿಂದ ಬೆಳಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿದ್ದು, ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಸಂಚರಿಸಲಿವೆ.
• ಚಳ್ಳಘಟ್ಟ - ವಿಜಯನಗರ
• ಎಂ. ಜಿ. ರಸ್ತೆ - ವೈಟ್ ಫೀಲ್ಡ್ (ಕಾಡುಗೋಡಿ)
• ಮಾದಾವರ - ಸಿಲ್ಕ್ ಇನ್ ಸ್ಟಿಟ್ಯೂಟ್
• ಆರ್. ವಿ. ರಸ್ತೆ - ಬೊಮ್ಮಸಂದ್ರ
ಬೆಳಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ - ಹೊಸ ಹಳ್ಳಿ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಈ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬೆಂಗಳೂರಿನ ರೈಲು ನಿಗಮ ನಿಯಮಿತ ( BMRCL) ತಿಳಿಸಿದೆ.
Also Read: