<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಂಗಳೂರು ಹವಾಮಾನ : ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ ಜಾರಿ

ಬೆಂಗಳೂರು ಹವಾಮಾನ : ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ ಜಾರಿ
Summary: Heavy rain with thunderstorms expected in Bengaluru till Friday. The Meteorological Department has issued a warning and advised people to be vigilant.

Belagavi News:

ಬೆಂಗಳೂರು ನಿವಾಸಿಗಳಿಗೆ ಭಾರತೀಯ ಹವಾಮಾನ ಇಲಾಖೆ ಕೂಲ್ ಸುದ್ದಿ ನೀಡಿದೆ. ಮೇ 29 ರವರೆಗೆ ನಗರದಲ್ಲಿ ಗುಡುಗು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿ ಚಂಡಮಾರುತದ ಪರಿಣಾಮ ತಾಪದಲ್ಲೂ ಭಾರಿ ಇಳಿಕೆ ಕಂಡುಬಂದಿದೆ.

ತೀವ್ರ ಬಿಸಿಲು ಮತ್ತು ಉಷ್ಣಾಂಶದಿಂದ ಕಂಗೆತ್ತಿದ್ದ ಬೆಂಗಳೂರು ಜನತೆಗೆ ಭಾರತೀಯ ಹವಾಮಾನ ಇಲಾಖೆ ಕೊನೆಗೂ ತಂಪಾದ ಸುದ್ದಿ ನೀಡಿದೆ. ಭಾನುವಾರ ಬಿಡುಗಡೆ ಮಾಡಿದ ಹವಾಮಾನ ಮುನ್ಸೂಚನೆಯ ಪ್ರಕಾರ, ಮೇ 29 ರವರೆಗೆ ನಗರದಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ.

ಮುಂದಿನ ಕೆಲವು ದಿನಗಳ ಕಾಲ ಬೆಂಗಳೂರಿನ ಹಲವೆಡೆ ಗುಡುಗು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆ ಆಗಲಿದ್ದು, ಕೆಲ ಪ್ರದೇಶಗಳಲ್ಲಿ ಹೆಚ್ಚು ಮಳೆಯು ದಾಖಲಾಗಬಹುದು ಎಂದು ಇಲಾಖೆ ಎಚ್ಚರಿಸಿದೆ. ಈ ಹಿನ್ನಲೆ ನಗರಕ್ಕೆ ಎಲ್ಲೊ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆಯ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಅದರ ಪರಿಣಾಮವಾಗಿ ಬೆಂಗಳೂರಿನಲ್ಲಿ ತಾಪಮಾನದಲ್ಲಿ ಗಮನಾರ್ಹ ಕುಸಿತವಾಗಿದ್ದು, ಜನರು ಬಿಸಿಲಿನ ಬೇಗೆಯಿಂದ ಸ್ವಲ್ಪ ನಿರಾಳರಾಗಿದ್ದಾರೆ.

ಹವಾಮಾನ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದು, ಮಳೆಯ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸಿದಂತೆ ಮನವಿ ಮಾಡಿದೆ.

ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ವಾರಪೂರ್ತಿ ಮಳೆಯ ಮುನ್ಸೂಚನೆ. 40-50 ಕಿಮೀ ವೇಗದ ಬಿರುಗಾಳಿ ಸಾಧ್ಯತೆ ಹಿನ್ನೆಲೆ ಐಎಂಡಿ ಎಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರದಲ್ಲಿ ಹವಾಮಾನ ಪರಿಸ್ಥಿತಿ ಏಕಾಏಕಿ ಬದಲಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆ ನಗರದಲ್ಲಿ ನಿರಂತರ ಮಳೆಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ, ಬಿಹಾರದ ದಕ್ಷಿಣ ಭಾಗದಿಂದ ಜಾರ್ಖಂಡ್ ಮತ್ತು ಓಡಿಸ್ಸಾ ಮೂಲಕ ಆಂಧ್ರಪ್ರದೇಶದ ಉತ್ತರ ಕರಾವಳಿವರೆಗೆ ವಿಸ್ತರಿಸಿರುವ ಉತ್ತರ ದಕ್ಷಿಣ ವಾಯು ಭಾರ ಕುಸಿತ ರಾಜ್ಯದ ಹವಾಮಾನ ವೈಪರ್ಯತ್ವಕ್ಕೆ ಪ್ರಮುಖ ಕಾರಣವಾಗಿದೆ.

ಸೋಮವಾರ ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಬೆಂಗಳೂರು ಪೂರ್ತಿ ದಟ್ಟವಾದ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.

ನಗರದ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಫಿಯ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ವಾರಪೂರ್ತಿ ಬೆಂಗಳೂರಿಗೆ ಹಳದಿ ಎಚ್ಚರಿಕೆ( ಎಲ್ಲೋ ಅಲರ್ಟ್) ಘೋಷಿಸಲಾಗಿದೆ.

ಬೆಂಗಳೂರು ನಿವಾಸಿಗಳಿಗೆ ಈ ಮಳೆ ತಾತ್ಕಾಲಿಕ ನಿರಾಳತೆ ತಂದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ನಿರೀಕ್ಷೆ ಇದೆ.

ಕಳೆದ ವಾರದ ತೀವ್ರ ಬಿಸಿಲಿಗೆ ಹೋಲಿಸಿದರೆ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಗಮನಹ ಕುಸಿತ ಕಂಡು ಬಂದಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 2ರಿಂದ5 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆಯಾಗಲಿದೆ.

ಬೆಂಗಳೂರು ನಗರದಲ್ಲಿ ಈ ಹಿಂದೆ ಸರಾಸರಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದ ಗರಿಷ್ಠ ತಾಪಮಾನವು ಇದೀಗ 30 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಇಳಿದಿದ್ದು, ಜನರಿಗೆ ಬಿಸಿಲಿನ ಬೇಗೆಯಿಂದ ನಿರಾಳತೆ ದೊರೆತಿದೆ. ನಿರಂತರ ಮೋಡ ಕವಿದ ವಾತಾವರಣ ಮತ್ತು ಮಳೆಯ ಪರಿಣಾಮ ಸಂಪಾದ ಹವಾಮಾನ ನಿರ್ಮಾಣವಾಗಿದೆ.

ಇನ್ನು ಬೆಂಗಳೂರು ಮಾತ್ರವಲ್ಲದೆ, ಉತ್ತರ ಒಳನಾಡು ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೂ ಮೇ 29 ರವರೆಗೆ 'ಹಳದಿ ಎಚ್ಚರಿಕೆ' ಘೋಷಿಸಲಾಗಿದೆ. ಹಲವೆಡೆ ಗುಡುಗು, ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆ ಹಾಗೂ ವಾಯು ಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ. ಹೀಗಾಗಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ತಿಳಿಸಿದ್ದಾರೆ.

Also Read:

UPSC ನೇಮಕಾತಿ 2026:ಪರೀಕ್ಷೆ ಇಲ್ಲದೆ ಸರ್ಕಾರಿ ಜಾಬ್ ಪಡೆಯುವ ಚಾನ್ಸ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online