<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಮೋದಿ ಆಗಮನಕ್ಕೆ ಬೆಂಗಳೂರು ಸಜ್ಜು! ವಾಹನ ಸವಾರರಿಗೆ ಮಹತ್ವದ ಸೂಚನೆ

ಮೋದಿ ಆಗಮನಕ್ಕೆ ಬೆಂಗಳೂರು ಸಜ್ಜು! ವಾಹನ ಸವಾರರಿಗೆ ಮಹತ್ವದ ಸೂಚನೆ
Summary: Ahead of Prime Minister Narendra Modi's visit to Bengaluru tomorrow, temporary changes have been made to the traffic system on some major roads in the city. Motorists can avoid traffic problems if they plan their journey in advance.

belagavi news:

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದು, ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯವರು ಸಂಚರಿಸುವ ಮಾರ್ಗಗಳಿಂದ ನಾಳೆ ಸಂಚಾರ ಮಾರ್ಪಾಡು ಗಳನ್ನು ಮಾಡಲಾಗಿದೆ.

ಈ ವರ್ಷ ಆರ್ಟ್ ಆಫ್ ಲಿವಿಂಗ್ ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು, ಸಂಸ್ಥೆಯ ಸ್ಥಾಪಕ ರವಿಶಂಕರ್ ಗುರೂಜಿ ಅವರು ಇದೇ ಸಂದರ್ಭದಲ್ಲಿ ತಮ್ಮ 70ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ

ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆ ನಗರದ ಕೆಲ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ.

ಇಲ್ಲಿ ವಾಹನ ನಿಲುಗಡೆ ನಿಷೇಧ:

• ಹೆಚ್ ಎಎಲ್ ಗೇಟ್ ನಂ 30ರ ಮುಂಭಾಗದಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಾಹನ ನಿಲುಗಡೆ ಸಂಪೂರ್ಣ ನಿಷೇಧ.

• ಹೆಚ್ ಎಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆ: ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿವರೆಗೆ ಎರಡು ಬದಿಯಲ್ಲಿ ಪಾರ್ಕಿಂಗ್ ನಿರ್ಬಂಧ.

• ಹೆಚ್ಎಎಲ್ ವಿಮಾನ ನಿಲ್ದಾಣ ಗೇಟ್ ನಂ 30 ರಸ್ತೆ: ಅಂಬ್ರೆಲಾ ಜಂಕ್ಷನ್ ನಿಂದ ಗೇಟ್ ನಂ. 30ರವರೆಗೆ ಎರಡು ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ.

• ಹಳೆ ವಿಮಾನ ನಿಲ್ದಾಣ ರಸ್ತೆ :ಎಸ್ .ಡಿ ರಸ್ತೆ ಜಂಕ್ಷನ್ ನಿಂದ ಟ್ರಿನಿಟಿ ಜಂಕ್ಷನ್ ವರೆಗೆ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

• ವಾಹನ ನಿಲುಗಡೆ ಸ್ಥಳ: ಗಣ್ಯ ವ್ಯಕ್ತಿಗಳು ಮತ್ತು ಹಿರಿಯ ಅಧಿಕಾರಿಗಳು ಎಸ್ಡಿ ರಸ್ತೆ ಜಂಕ್ಷನ್ ನಲ್ಲಿರುವ ಎಚ್ಎಎಲ್ ಡಿಪಾರ್ಟ್ಮೆಂಟ್ ಪಾರ್ಕಿಂಗ್ ಮತ್ತು ಸುರಂಜನ್ ದಾಸ್ ರಸ್ತೆಯ ಹೆಚ್ಎಎಲ್ ಬಸ್ ಯಾರ್ಡ್ ಬಳಿ ವಾಹನ ನಿಲುಗಡೆ ಮಾಡಬಹುದು.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಸಂಚಾರ ದಟ್ಟಣೆ ತಪ್ಪಿಸಲು ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ.

• ತುಮಕೂರು ರಸ್ತೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುವವರು ಸಿಎಂಟಿಐ ಜಂಕ್ಷನ್ ಬಳಿ ಬಲ ಅಥವಾ ಎಡ ತಿರುವು ಪಡೆದು ರಾಜ ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಾಗಬಹುದು.

• ಮಾಗಡಿ ರಸ್ತೆಯಿಂದ ಕನಕಪುರ ರಸ್ತೆ ಕಡೆಗೆ ಹೋಗುವವರು ಸುಮ್ಮನಹಳ್ಳಿ ಜಂಕ್ಷನ್ ಬಳಿ ಬಲ ಅಥವಾ ಎಡ ತಿರುವು ಪಡೆದು ಮುಂದುವರೆಯಬಹುದು.

• ಮೈಸೂರು ರಸ್ತೆಯಿಂದ ಕನಕಪುರ ರಸ್ತೆ ಕಡೆಗೆ ಸಂಚರಿಸುವವರು ನಾಯಂಡಹಳ್ಳಿ ಜಂಕ್ಷನ್ ಬಳಿ ತಿರುವು ಪಡೆದು ಔಟರ್ ರಿಂಗ್ ರಸ್ತೆ ಮೂಲಕ ತೆರಳಬಹುದು.

ಬೆಂಗಳೂರಿನಿಂದ ಕನಕಪುರಕ್ಕೆ ಪರ್ಯಾಯ ಮಾರ್ಗಗಳು;

Route -01: ಬೆಂಗಳೂರು - ಕೋಣನಕುಂಟೆ - ವಸಂತಪುರ- ಕೆಂಗೇರಿ - ಮೈಸೂರು ರಸ್ತೆ - ಅಗರ - ಬಂಜಾರಪಾಳ್ಯ - ಕಗ್ಗಲಿಪುರ ಮಾರ್ಗವಾಗಿ ಸಂಚರಿಸಬಹುದು.

Route -02: ಎ2ಬಿ ಜಂಕ್ಷನ್ - ನಾರಾಯಣ್ ನಗರ್ ಜೋಡಿ ರಸ್ತೆ - ಅಂಜನಾಪುರ 80 ಅಡಿ ರಸ್ತೆ - ಬನ್ನೇರುಘಟ್ಟ ಮುಖ್ಯ ರಸ್ತೆ ಮೂಲಕ ಕಗ್ಗಲಿಪುರ ತಲುಪಬಹುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read:

IFS Result: ಅಥಣಿಯ ಗ್ರಾಮೀಣ ಪ್ರತಿಭೆ ದೇಶಕ್ಕೆ ಟಾಪರ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online