<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Education

ಬೆಂಗಳೂರು ಶಾಕ್: ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಐಟಿ ದಾಳಿ

ಬೆಂಗಳೂರು ಶಾಕ್: ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಐಟಿ ದಾಳಿ
Summary: ED officials have raided the offices and residences of online gaming companies in several cities including Bengaluru. Bank deposits, mutual funds and other assets worth crores of rupees have been seized on charges of money laundering and illegal money laundering.

belagavi news :

ಭಾರತದಲ್ಲಿ ಈಗಾಗಲೇ ಹಲವು ಆನ್ ಲೈನ್ ಗೇಮ್ ಗಳ ಮೇಲೆ ನಿರ್ಬಂಧ ಹೇರಲಾಗುತ್ತಿದ್ದು, ಆನ್ ಲೈನ್ ಗೇಮಿಂಗ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನೂತನ ಶಾಸನಾತ್ಮಕ ಚೌಕಟ್ಟನ್ನು ಜಾರಿಗೊಳಿಸಿದೆ. ಇದರ ಬೆನ್ನಲ್ಲೇ ಇದೀಗ ಜಾರಿ ನಿರ್ದೇಶನಾಲಯ ಆನ್ಲೈನ್ ಗೇಮಿಂಗ್ ಕಂಪನಿಗಳ ವಿರುದ್ಧ ದೊಡ್ಡ ಮಟ್ಟದ ದಾಳಿ ನಡೆಸಿದೆ.

ದೆಹಲಿ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಇಡೀ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಹಣ ಸುಳಿವು ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಕಂಪನಿಗಳ ಕಚೇರಿ ಹಾಗೂ ಸಂಬಂಧಿತ ಅಧಿಕಾರಿಗಳನ್ನು ನಿವಾಸಗಳನ್ನು ತಪಾಸನೆ ಮಾಡಲಾಗಿದೆ. ದಾಳಿಯ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಬ್ಯಾಂಕ್ ಖಾತೆಗಳು,

ಹೂಡಿಕೆಗಳು ಹಾಗೂ ಇತರೆ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಆನ್ಲೈನ್ ಗೇಮಿಂಗ್ ಮೂಲಕ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಶಂಕೆ ಮೇರೆಗೆ ತನಿಖೆ ಮುಂದುವರೆದಿದೆ. ಈ ದಾಳಿ ಆನ್ಲೈನ್ ಗೇಮಿಂಗ್ ನಿಯಂತ್ರಣದ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಹೊಸ ಕಾನೂನು ಚೌಕಟ್ಟನ್ನು ಜಾರಿಗೆ ತಂದಿದೆ.

Sponsored

ಹೊಸ ನಿಯಮಗಳ ಪ್ರಕಾರ, ಆನ್ಲೈನ್ ಬೆಟ್ಟಿಂಗ್ ಇದೀಗ ಶಿಕ್ಷಾರ್ಹ ಅಪರಾಧವಾಗಿದ್ದು, ಅಕ್ರಮ ಮನಿ ಗೇಮ್ಗಳನ್ನು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆನ್ಲೈನ್ ಮನಿ ಗೇಮ್ ಗಳನ್ನು ಒದಗಿಸುವ ಸಂಸ್ಥೆಗಳು ಅಥವಾ ವ್ಯಕ್ತಿಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹ 1 ಕೋಟಿ ವರೆಗೆ ದಂಡ ವಿಧಿಸಲು ಅವಕಾಶವಿದೆ. ಇದೇ ವೇಳೆ, ಇಂತಹ ಆಟಗಳನ್ನು ಜಾಹೀರಾತು ಮಾಡುವವರೆಗೂ ಕಠಿಣ ಶಿಕ್ಷೆ ಯ ವ್ಯವಸ್ಥೆ ಮಾಡಲಾಗಿದೆ.ಜಾಹೀರಾತು ನೀಡಿದರೆ ಎರಡು ವರ್ಷಗಳವರೆಗೆ ಜೈಲು ಹಾಗೂ ₹50ಲಕ್ಷ ದವರೆಗೆ ದಂಡ ವಿಧಿಸಬಹುದು.

ಕೇಂದ್ರ ಸರ್ಕಾರದ ಈ ಕ್ರಮ ಆನ್ ಲೈನ್ ಗೇಮಿಂಗ್ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಅಕ್ರಮ ಹಣ ವರ್ಗಾವಣೆ,ವಂಚನೆ ಬೆಟ್ಟಿಂಗ್ ಚಟುವಟಿಕೆಗಳನ್ನು ನಿರ್ವಹಿಸುವ ಉದ್ದೇಶ ಹೊಂದಿದೆ.

ಬೆಂಗಳೂರು,(ಮೇ7): ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲಿನ ಬೆಂಗಳೂರು ಘಟಕದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ನಡೆದಿದೆ ಎಂಬ ಆರೋಪದ ಹಿನ್ನೆಲೆ Games kraft ಕಂಪನಿಗೆ ಸಂಬಂಧಿಸಿದಂತೆ ದೆಹಲಿ ಹಾಗೂ ಬೆಂಗಳೂರಿನ ಒಟ್ಟು 16 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪದಡಿ ದೆಹಲಿಯಲ್ಲಿ ಹಲವು ಎಫ್ ಐ ಆರ್ ಗಳು ದಾಖಲಾಗಿದ್ದವು.ಈ ಪ್ರಕರಣಗಳ ಆಧಾರದ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು.

ಕಂಪನಿಯ ಕಚೇರಿಗಳು ಹಾಗೂ ಸಂಬಂಧಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ಮಹತ್ವದ ದಾಖಲೆಗಳು,ಬ್ಯಾಂಕ್ ಖಾತೆಗಳ ಮಾಹಿತಿ ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.ಹಣ ಸುಳಿವು ಹಾಗೂ ಅಕ್ರಮ ಹಣ ವರ್ಗಾವಣೆ ಶಂಕೆಯ ಮೇರೆಗೆ ಇಡಿ ಅಧಿಕಾರಿಗಳು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.

Sponsored

Also Read:

ಕ್ರಿಕೆಟ್ ಲೋಕದಲ್ಲಿ ದುಃಖದ ಕ್ಷಣ : ಗೆಳೆಯನನ್ನು ಕಳೆದುಕೊಂಡ ವಿರಾಟ್ ಕೊಹ್ಲಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online