Belagavi News:
ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೈಗೊಂಡಿರುವ ಫುಟ್ ಪಾತ್ 10:30 ಸೆರವು ಕಾರ್ಯಾಚರಣೆ ಬೀದಿಬದಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಹಲವು ಪ್ರದೇಶಗಳಲ್ಲಿ ಫುಡ್ ಪಾತ್ ಗಳನ್ನು ತೆರವುಗೊಳಿಸಿರುವ ಅಧಿಕಾರಿಗಳು ಕ್ರಮವನ್ನು ವಿರೋಧಿಸಿ, ನೂರಾರು ಬೀದಿಬದಿ ವ್ಯಾಪಾರಿಗಳು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪುಟ್ ಪಾತ್ ತೆರವು ಕಾರ್ಯಾಚರಣೆಯಿಂದ ಜೀವನೋಪಾಯ ಕಳೆದುಕೊಂಡಿರುವ ವ್ಯಾಪಾರಿಗಳು, ತಮಗೆ ಹಿಂದಿ ವ್ಯಾಪಾರ ಮಾಡುತ್ತಿದ್ದ ಅದೇ ಸ್ಥಳವನ್ನು ಮರು ಹಂಚಿಕೆ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ವ್ಯಾಪಾರ - ವಹಿವಾ ಟು ಸಂಪೂರ್ಣ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ ವ್ಯಾಪಾರಿಗಳು, ಜೀವನೋಪಾಯ ರಕ್ಷಣೆ ಹಾಗೂ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವು ಕಾರ್ಯಚರಣೆ ನಡೆಸಿರುವುದರಿಂದ ಸಾವಿರಾರು ಕುಟುಂಬಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು. ಬೀದಿಬದಿ ವ್ಯಾಪಾರಿಗಳ ಹಕ್ಕುಗಳನ್ನು ಕಾಪಾಡಬೇಕು ತೆರವುಗೊಳಿಸಿದ ಸ್ಥಳಗಳಲ್ಲಿ ಮತ್ತೆ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು.
ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರು ಫುಡ್ಪಾತ್ ಕೆರೆವು ಕಾರ್ಯಚರಣೆ ವಿರುದ್ಧ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ - ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ :
ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಡೆಸುತ್ತಿರುವ ಫುಟ್ಪಾತ್ ಒತ್ತೂವರೆ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿ ಬೀದಿಬದಿ ವ್ಯಾಪಾರಿಗಳು ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಕೇಂದ್ರ , ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ ಅಧಿಕಾರಿಗಳು ಫುಟ್ ಪಾತ್ ಗಳನ್ನು ಅತಿಕ್ರಮ ಸಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸುತ್ತಿರುವುದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಫುಟ್ಪಾತ್ ತೆರವು ಕಾರ್ಯಾಚರಣೆಯಿಂದ ಜೀವನೋಪಾಯಕ್ಕೆ ಧಕ್ಕೆಯಾಗಿದ್ದು, ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ತೆರವುಗೊಳಿಸಿದ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು, ಹಿಂದಿ ವ್ಯಾಪಾರ ನಡೆಸುತ್ತಿದ್ದ ಸ್ಥಳದಲ್ಲೇ ಮತ್ತೆ ಅವಕಾಶ ನೀಡಬೇಕು ಹಾಗೂ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ವ್ಯಾಪಾರ - ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ನೂರಾರು ಬೀದಿ ಬದಿ ವ್ಯಾಪಾರಿಗಳು, ತಮ್ಮ ವಿವಿಧ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು. ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಮಾನವೀಯ ದೃಷ್ಟಿಕೋನದಿಂದ ನಡೆದುಕೊಳ್ಳಬೇಕು ಹಾಗೂ ಜೀವನೋಪಾಯ ಕಾಪಾಡುವ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬೆಂಗಳೂರು ಫುಟ್ ಪಾತ್ ತೆರೆವು ವಿರೋಧಿಸಿ ಬೀದಿಬದಿ ವ್ಯಾಪಾರಿಗಳ ಎಚ್ಚರಿಕೆ - ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡದಿದ್ದರೆ ತೀವ್ರ ಹೋರಾಟ :
ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಬೀದಿಬದಿ ವ್ಯಾಪಾರಿಗಳು ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಹಾಗೂ ಸಚಿವ ಕೃಷ್ಣ ಬೈರೇಗೌಡ ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಬೀದಿ ಬದಿ ವ್ಯಾಪಾರಿಗಳ ಪ್ರಮುಖ ಬೇಡಿಕೆಗಳು :
1. ತೆರವುಗೊಳಿಸಿದ ಬೀದಿಬದಿ ವ್ಯಾಪಾರಿಗಳಿಗೆ ಅವರು ಹಿಂದೆ ವ್ಯಾಪಾರ ಮಾಡುತ್ತಿದ್ದ ಅದೇ ಸ್ಥಳವನ್ನು ಮರು ಹಂಚಿಕೆ ಮಾಡಬೇಕು.
2. ಫುಟ್ಪಾತ್ ನಲ್ಲಿ ವ್ಯಾಪಾರಕ್ಕೆ ಅವಕಾಶ ಇಲ್ಲದಿದ್ದರೆ, ಸಮಾನ ವ್ಯಾಪಾರ ಸಾಧ್ಯವಾಗುವ ಪರ್ಯಾಯ ಸ್ಥಳ ಒದಗಿಸಬೇಕು.
3. ಜಪ್ತಿ ಮಾಡಿರುವ ವ್ಯಾಪಾರ ಸಾಮಗ್ರಿಗಳನ್ನು ತಕ್ಷಣವೇ ವಾಪಸ್ ನೀಡಬೇಕು.
4. ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು.
5. ಸಮಗ್ರ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಬೇಕು.
6. ನಗರದ ಫುಟ್ ಪಾತ್ ಗಳನ್ನು ಅಗಲೀಕರಣ ಮಾಡಿ ವ್ಯಾಪಾರ ಹಾಗೂ ಸಾರ್ವಜನಿಕ ಸಂಚಾರಕ್ಕೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು.
7. ಹೊಸನಗರ ಪಾಲಿಕೆಗಳಲ್ಲಿ ಟೌನ್ ವೆಂಡಿಂಗ್ ಕಮಿಟಿಗಳನ್ನು ಶೀಘ್ರ ರಚಿಸಬೇಕು.
ಪ್ರತಿಭಟನೆಗೆ ಹಲವು ಸಂಘಟನೆಗಳ ಬೆಂಬಲ :
ಬೀದಿಬದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಕರ್ನಾಟಕ ಪ್ರಗತಿಪರ ಬೀದಿಬದಿ ವ್ಯಾಪಾರಿಗಳ ಸಂಘ (ರಿ), ಕರುನಾಡು ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟ (ರಿ), ನವ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘ (ರಿ), ಬೀದಿಬದಿ ವ್ಯಾಪಾರಿಗಳ ಸಂಘ (ರಿ), ಕರ್ನಾಟಕ ರಾಜ್ಯ ರಸ್ತೆ ಬದಿ ವ್ಯಾಪಾರಿಗಳ ಮಹಾಮಂಡಳ (ರಿ), ಹಾಗೂ ಕರ್ನಾಟಕ ಮಹಿಳಾ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ (ರಿ) ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದವು.
ಪ್ರತಿಭಟನಾ ಕಾರರು ತಮ್ಮ ಬೇಡಿಕೆಗಳನ್ನು ಸರ್ಕಾರ ಶೀಘ್ರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ವಿಸ್ತರಿಸುವ ಎಚ್ಚರಿಕೆ ನೀಡಿದ್ದು, ಸರ್ಕಾರದ ಮುಂದಿನ ಕ್ರಮದತ್ತ ಬೀದಿಬದಿ ವ್ಯಾಪಾರಿಗಳು ಕಾದು ನೋಡುತ್ತಿದ್ದಾರೆ.