belagavi news :
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ : 'ಭಕ್ತರ ನಂಬಿಕೆಯೊಂದಿಗೆ ಆಟವಾಡುವುದನ್ನು ಸಹಿಸುವುದಿಲ್ಲ' - ಸಿಎಂ ಯೋಗಿ ಎಚ್ಚರಿಕೆ.
ಲಖನೌ,ಜೂನ್ 26: ಅಯೋಧ್ಯೆಯ ರಾಮಮಂದಿರದ ದೇಣಿಗೆ ನಿಧಿಯ ದುರುಪಯೋಗ ಮತ್ತು ಕಳ್ಳತನದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಭಕ್ತರ ಧಾರ್ಮಿಕ ನಂಬಿಕೆ ಹಾಗೂ ಶ್ರದ್ದೆಯೊಂದಿಗೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಶುಕ್ರವಾರ ಮಾತನಾಡಿದ ಅವರು, ಈ ಪ್ರಕರಣವನ್ನು ರಾಜಕೀಯಗೊಳಿಸುತ್ತಿರುವ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಕೋಟ್ಯಾಂತರ ಭಕ್ತರು ಅಪಾರ ಭಕ್ತಿ- ಭಾವದಿಂದ ರಾಮ ಜನ್ಮ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಕಾಣಿಕೆ ನೀಡುತ್ತಾರೆ. ಆ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ಅದರೊಂದಿಗೆ ಆಟವಾಡುವ ಯಾವುದೇ ಕೃತ್ಯವನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ," ಎಂದು ಅವರು ಹೇಳಿದರು.
ಈ ಪ್ರಕರಣದ ತನಿಖೆಗಾಗಿ ಈಗಾಗಲೇ ವಿಶೇಷ ತನಿಖಾತಂಡ ರಚಿಸಲಾಗಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಇದುವರೆಗೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಯೋಗಿ ತಿಳಿಸಿದರು. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.
ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗೆ ಸಾರ್ವಜನಿಕರು ನೀಡಿದ ದೇಣಿಗೆಗಳಲ್ಲಿ ಅವ್ಯವಹಾರ ಎಸೆಗಿರುವ ಆರೋಪಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಪ್ರತಿಯೊಂದು ಅಂಶವನ್ನು ಸಮಗ್ರವಾಗಿ ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಪ್ರತಿಪಕ್ಷಗಳು ಈ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದೆ ಯೋಗಿ, ಸರ್ಕಾರದ ಆದ್ಯತೆ ರಾಜಕೀಯವಲ್ಲ, ಭಕ್ತರ ವಿಶ್ವಾಸವನ್ನು ಕಾಪಾಡುವುದು ಮತ್ತು ತಪಿತಸ್ಥರಿಗೆ ಶಿಕ್ಷೆ ಖಚಿತಪಡಿಸಿಸಲಾಗಿದೆ ಎಂದು ಹೇಳಿದರು.
ಅಯೋಧ್ಯೆಯ ರಾಮ ಮಂದಿರ ದೇಶದ ಕೋಟ್ಯಾಂತರ ಜನರ ಭಕ್ತಿಯ ಸಂಕೇತವಾಗಿದ್ದು, ಅದರೊಂದಿಗೆ ಸಂಬಂಧಿಸಿದೆ ಯಾವುದೇ ಆರ್ಥಿಕ ಅವ್ಯವಹಾರ ಅಥವಾ ಅಕ್ರಮವನ್ನು ಸರ್ಕಾರ ಸಹಿಸುವುದಿಲ್ಲ. ಧಾರ್ಮಿಕ ಸಂಸ್ಥೆಗಳ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯೋಗಿ ಆದಿತ್ಯನಾಥ್ ಪುನರುತ್ಚರಿಸಿದರು.
'ರಾಮ ಮಂದಿರವು ಕೋಟ್ಯಾಂತರ ಭಕ್ತರ ನಂಬಿಕೆಯ ಸಂಕೇತ; ದುರ್ಬಳಕೆ ಸಹಿಸುವುದಿಲ್ಲ' - ಸಿಎಂ ಯೋಗಿ
ಅಯೋಧ್ಯೆಯ ರಾಮ ಮಂದಿರದ ದೇಣಿಗೆ ನೀಡಿ ದುರುಪಯೋಗ ಮತ್ತು ಕಳ್ಳತನದ ಆರೋಪದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದು, ಭಕ್ತರ ನಂಬಿಕೆಗೆ ದ್ರೋಹ ಬಗೆಯುವವರ ವಿರುದ್ಧ ಕಾನೂನಿನ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಪ್ರಕರಣದ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್, "ರಾಮ ಮಂದಿರವು ಕೇವಲ ಒಂದು ಧಾರ್ಮಿಕ ರಚನೆಯಲ್ಲ. ಅದು ವಿಶ್ವದಾದ್ಯಂತ ಇರುವ ಸನಾತನ ಧರ್ಮೀಯರ ಆಳವಾದ ನಂಬಿಕೆ ಮತ್ತು ಭಕ್ತಿಯ ಸಂಕೇತವಾಗಿದೆ. ಕೋಟ್ಯಾಂತರ ಭಕ್ತರು ತಮ್ಮ ಕಷ್ಟಪಟ್ಟು ಗಳಿಸಿದ ಹಣವನ್ನು ಭಕ್ತಿ-ಭಾವದಿಂದ ಮಂದಿರದ ನಿಧಿಗೆ ಸಮರ್ಪಿಸುತ್ತಾರೆ. ಇಂತಹ ಪವಿತ್ರ ನಿಧಿಯ ಮೇಲೆ ಕಣ್ಣು ಹಾಕುವುದು ಅಥವಾ ಭಕ್ತರ ನಂಬಿಕೆಗೆ ದ್ರೋಹ ಬಗ್ಗೆಯುವುದು ಯಾವುದೇ ಕಾರಣಕ್ಕೂ ಒಪ್ಪಲಾಗದು," ಎಂದು ಹೇಳಿದರು.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಆರೋಪಿಯನ್ನು ಕಾನೂನಿನ ಮುಂದೆ ನಿಲ್ಲಿಸಲಾಗುವುದು ಎಂದು ಅವರು ಹೇಳಿದರು. ದೇಣಿಗೆ ನಿಧಿಯಲ್ಲಿ ಕಳ್ಳತನ ಅಥವಾ ವಂಚನೆ ನಡೆಸಿರುವ ಆರೋಪಗಳಿಗೆ ಯಾವುದೇ ರೀತಿಯ ವಿನಾಯಿತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದವರು, ಅಗತ್ಯವಿದ್ದರೆ ಗ್ಯಾಂಗ್ ಸ್ಟರ್ ಕಾಯ್ದೆ ಸೇರಿದಂತೆ ಕಠಿಣ ಕಾನೂನುಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆಯೇ ನೀಡಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ, ಆರೋಪಿಗಳ ಅಕ್ರಮವಾಗಿ ಸಂಪಾದಿಸಿರುವ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳುವಂತಹ ಕಠಿಣ ಕ್ರಮಗಳಿಗೂ ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಯೋಗಿ ಹೇಳಿದರು. ಭಕ್ತರ ವಿಶ್ವಾಸಕ್ಕೆ ಧಕ್ಕೆ ತಂದವರ ವಿರುದ್ಧ ಕಠಿಣ ಶಿಕ್ಷೆ ಖಚಿತಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಈ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ ಈಗಾಗಲೇ ತನಿಖೆ ಆರಂಭಿಸಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ತನಿಖೆಯಲ್ಲೂ ಯಾವುದೇ ರಾಜಿ ಇಲ್ಲದೆ ಕ್ರಮ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ರಾಮ ಮಂದಿರಕ್ಕೆ ಭಕ್ತರು ಸಲ್ಲಿಸುವ ಕಾಣಿಕೆಗಳು ಅವರ ನಂಬಿಕೆ ಮತ್ತು ಭಕ್ತಿಯ ಪ್ರತೀಕವಾಗಿದ್ದು, ಆ ನಿಧಿಯ ಸುರಕ್ಷತೆ ಮತ್ತು ಪಾರದರ್ಶಕ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ತಪಿತಸ್ಥರ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಿ, ಭಕ್ತರ ವಿಶ್ವಾಸವನ್ನು ಉಳಿಸಿಕೊಳ್ಳಲಾಗುವುದು ಎಂದು ಯೋಗಿ ಆದಿತ್ಯನಾಥ್ ಪುನರುಚ್ಚರಿಸಿದ್ದರು.
ಪಾರದರ್ಶಕತೆಗೆ ಆದ್ಯತೆ : ರಾಮ ಮಂದಿರದ ದೇಣಿಗೆ ವ್ಯವಸ್ಥೆಗೆ ಕಠಿಣ ಭದ್ರತಾ ಕ್ರಮಗಳ ಭರವಸೆ - ಸಿಎಂ ಯೋಗಿ
ಅಯೋಧ್ಯೆಯ ರಾಮಮಂದಿರ ದೇಣಿಗೆ ವ್ಯವಸ್ಥೆ ಹಾಗೂ ನಿರ್ವಹಣೆಯನ್ನು ಸಂಪೂರ್ಣವಾಗಿ ಸುರಕ್ಷಿತ ಮತ್ತು ಪಾರದರ್ಶಕವಾಗಿಡಲು ಸರ್ಕಾರ ಮತ್ತು ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಬದ್ಧವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭರವಸೆ ನೀಡಿದ್ದಾರೆ.
ಭವಿಷ್ಯದಲ್ಲಿ ಇಂತಹ ಯಾವುದೇ ಲೋಪದೋಷಗಳು ಮರುಕಳಿಸದಂತೆ ತಡೆಯಲು ತಾಂತ್ರಿಕ ಹಾಗೂ ಭದ್ರತಾ ಆಡಿಟ್ ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ದೇಣಿಗೆ ಸಂಗ್ರಹ ಮತ್ತು ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಅತ್ಯಂತ ಅಗತ್ಯವಾಗಿದ್ದು, ಸಾರ್ವಜನಿಕರ ನಂಬಿಕೆಯನ್ನು ಉಳಿಸುವುದು ಸರ್ಕಾರದ ಪ್ರಮುಖ ಆದ್ಯತೆಯೆಂದು ಸಿಎಂ ಹೇಳಿದ್ದಾರೆ.
ಇತ್ತೀಚಿಗೆ ರಾಮ ಮಂದಿರದ ದೇಣಿಗೆ ಪೆಟ್ಟಿಗೆಗಳು ಹಾಗೂ ಬ್ಯಾಂಕ್ ಖಾತೆಗಳ ನಿರ್ವಹಣೆಯಲ್ಲಿ ಹಲವು ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡು ಬ್ಯಾಂಕ್ ನೌಕರರು ಹಾಗೂ ಮಧ್ಯವರ್ತಿಗಳು ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಪ್ರಕರಣ ಬೆಳವಣಿಗೆಯ ಬೆನ್ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ, ಸರ್ಕಾರ ಕಾನೂನು ವ್ಯವಸ್ಥೆ ಹಾಗೂ ಧಾರ್ಮಿಕ ಸಂಸ್ಥೆಗಳ ಕಾನೂನು ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪವನ್ನು ಸಹಿಸುವುದಿಲ್ಲ ಎಂದು ಕಟ್ಟುನಿಟ್ಟಿನ ಸಂದೇಶವನ್ನು ರವಾನಿಸಿದೆ.
ಅಧಿಕಾರಿಗಳು ತನಿಖೆಯನ್ನು ವೇಗವಾಗಿ ಮುಂದುವರಿಸುತ್ತಿದ್ದು, ದೇಣಿಗೆ ಸುರಕ್ಷತೆ ಮತ್ತು ಪಾರದರ್ಶಕತೆ ಸಂಬಂಧಿಸಿದ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಸರ್ಕಾರ ಹೊಸ ಕ್ರಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
'ರಾಮ ಮಂದಿರ ವಿಷಯವನ್ನು ರಾಜಕೀಯಗೊಳಿಸುವುದು ಸರಿಯಲ್ಲ' - ಪ್ರತಿಪಕ್ಷಗಳ ವಿರುದ್ಧ ಸಿಎಂ ಯೋಗಿ ತೀವ್ರ ವಾಗ್ದಾಳಿ
ಸಿಎಂ ಯೋಗಿ ಮಾತನಾಡಿ, "ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಯಾವಾಗಲೂ ವಿರೋಧಿಸುತ್ತಿದ್ದವರು ಈ ಶ್ರೀರಾಮ ಅಸ್ತಿತ್ವವನ್ನೇ ನಿರಾಕರಿಸಿದವರೇ ಇಂದು ರಾಮ ಮಂದಿರದ ದೇಣಿಗೆ ವಿಷಯವನ್ನು ರಾಜಕೀಯದ ಅಸ್ತ್ರವಾಗಿ ಬಳಸುತ್ತಿದ್ದಾರೆ" ಎಂದು ಆರೋಪಿಸಿದರು. ಅವರು ಸುಪ್ರೀಂ ಕೋರ್ಟ್ ನಲ್ಲಿ ಮಂದಿರ ನಿರ್ಮಾಣದ ವಿರುದ್ಧ ನಿರಂತರವಾಗಿ ಹೋರಾಡಿದ್ದರೆಂದು ಹೇಳಿದ ಯೋಗಿ, ಭಕ್ತರ ನಂಬಿಕೆ ಮತ್ತು ಧಾರ್ಮಿಕ ಭಾವನೆಗಳ ಮೇಲೆ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
"ಅವರು ರಾಮಭಕ್ತರ ಮೇಲೆ ದಾಳಿಗಳಾಗಿದ್ದವೆಂದು ಆರೋಪಿಸುತ್ತಿದ್ದಾರೆ. ಆದರೆ ಈ ಕುರಿತು ಅವರ ಬಳಿ ಯಾವುದೇ ಪುರಾವೆಗಳಿದ್ದರೆ ಅದನ್ನು ವಿಶೇಷ ತನಿಕಾ ತಂಡಕ್ಕೆ ಹಸ್ತಾಂತರಿಸಲಿ. ಇದಲ್ಲದೆ ಈ ವಿಚಾರವನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು," ಎಂದು ಸಿಎಂ ಎಚ್ಚರಿಕೆ ನೀಡಿದರು.
ಈ ಹೇಳಿಕೆಗಳು, ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ, ಚಂಪತ್ ರಾಯ್ ಅವರ ಪ್ರಮುಖ ಸಹಾಯಕ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಸೇರಿದಂತೆ ಎಂಟು ಮಂದಿಯನ್ನು ಎಸ್ಐಟಿ ವರದಿಯ ಆಧಾರದ ಮೇಲೆ ಬಂಧಿಸಿರುವ ಹಿನ್ನೆಲೆಯಲ್ಲಿ ಬಂದಿವೆ.ತನಿಕಿಯ ಪ್ರಗತಿಯಂತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬಂಧನಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು,ದೇಣಿಗೆ ನಿಧಿಯ ದುರುಪಯೋಗ,ವಂಚನೆ ಹಾಗೂ ಅಕ್ರಮ ಹಣಕಾಸು ವ್ಯವಹಾರಗಳ ಕುರಿತು ಸಂಪೂರ್ಣ ತನಿಖೆ ನಡೆಯುತ್ತಿದೆ.ತಪಿತಸ್ತರಿಗೆ ಕಠಿಣ ಶಿಕ್ಷೆ ಖಚಿತಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿರುವ ಮಧ್ಯೆ,ಸರ್ಕಾರದ ವಾದವು ಭಕ್ತರ ನಂಬಿಕೆ ರಕ್ಷಣೆ ಮತ್ತು ತನಿಕೆಯ ಪಾರದರ್ಶಕತೆ ಕಾಪಾಡುವ ದಿಕ್ಕಿನಲ್ಲಿ ಮುಂದುವರೆದಿದೆ.
Also Read:
ಪ್ರಧಾನಿ ಮೋದಿ ಭೇಟಿಯಾದ ಅಮೆಜಾನ್ ಸಿಇಒ: 4 ವರ್ಷಗಳಲ್ಲಿ $48 ಬಿಲಿಯನ್ ಹೂಡಿಕೆ ಘೋಷಣೆ