<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಬಿಡದಿ ಟೌನ್ ಶಿಪ್ ವಿವಾದಕ್ಕೆ ತೀವ್ರ ತಿರುವು : ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬಿಡದಿ ಟೌನ್ ಶಿಪ್ ವಿವಾದಕ್ಕೆ ತೀವ್ರ ತಿರುವು : ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಕುಮಾರಸ್ವಾಮಿ
Summary: The Bidadi Township controversy has taken a new turn. "We will fight this issue legally," HD Kumaraswamy has announced.

Belagavi News:

ರಾಮನಗರ ಜಿಲ್ಲೆಯ ಬಿಡದಿ ಟೌನ್ ಶಿಪ್ ಯೋಜನೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿವಾದಕ್ಕೆ ಸಂಬಂಧಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ತೀವ್ರ ಪ್ರತಿಕ್ರಿಯೆ ನೀಡಿದ್ದು,"ಜನರ ಹಕ್ಕುಗಳಿಗೆ ಧಕ್ಕೆ ಉಂಟಾದರೆ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಡದಿ ಪ್ರದೇಶದಲ್ಲಿ ಟೌನ್ಶಿಪ್ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿ ದಂತೆ ಸ್ಥಳೀಯರು ಹಾಗೂ ರೈತರಿಂದ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ಸರ್ಕಾರ ಜನಾಭಿಪ್ರಾಯವನ್ನು ಕಡೆಗಣಿಸಿ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದವರು, ರೈತರ ಭೂಮಿ ಮತ್ತು ಹಕ್ಕುಗಳ ರಕ್ಷಣೆಗೆ ಜೆಡಿಎಸ್ ಬದ್ಧವಾಗಿದೆ ಎಂದು ಹೇಳಿದರು.

ಈ ಯೋಜನೆ ಕುರಿತು ಸರ್ಕಾರ ಪ್ರಶ್ನೆ ನೀಡಬೇಕು ಎಂದು ಆಗ್ರಹಿಸಿದ ಕುಮಾರಸ್ವಾಮಿ, ಅಗತ್ಯವಿದ್ದರೆ ನ್ಯಾಯಾಲಯದ ಮೆಟ್ಟಿಲೇರಲು ಹಿಂದೇಟು ಹಾಕುವುದಿಲ್ಲ ಎಂದರು. ಬಿಡದಿ ಟೌನ್ ಶಿಪ್ ವಿವಾದ ಇದೀಗ ರಾಜಕೀಯ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Sponsored

ಬಿಡದಿ ಟೌನ್ ಶಿಪ್ ವಿವಾದ ರಾಜ್ಯ ರಾಜಕಾರಣದಲ್ಲಿ ಮತ್ತೆ ಸದ್ದು ಮಾಡುತ್ತಿದ್ದು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಕುರಿತು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. " ನಾವು ಕಾನೂನಾತ್ಮಕವಾಗಿ ಹೋರಾಡುತ್ತೇವೆ" ಎಂದು ಸ್ಪಷ್ಟಪಡಿಸಿರುವವರು, ತಮ್ಮ ಆಡಳಿತ ಅವಧಿಯಲ್ಲಿ ಟೌನ್‌ಶಿಪ್ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು 5 ಭಾಗಗಳಲ್ಲಿ ಟೌನ್ ಶಿಪ್ ನಿರ್ಮಾಣ ಮಾಡುವ ಪ್ಲಾನ್ ಇತ್ತು ಎಂದು ಹೇಳಿದ ಕುಮಾರಸ್ವಾಮಿ,"ಆ ಸಂದರ್ಭದಲ್ಲಿ ರೈತರ ಜೊತೆ ಚರ್ಚೆ ನಡೆಸಿ ಅವರ ಒಪ್ಪಿಗೆಯನ್ನು ಪಡೆದಿದ್ದೇವೆ"ಎಂದು ಹೇಳಿದ್ದಾರೆ. ಆದರೆ ಆ ಸಮಯದಲ್ಲಿ ವಿರೋಧ ಪಕ್ಷಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದವು ಎಂದು ಆರೋಪಿಸಿದರು.

"ಈ ಹಿಂದೆಹಲವು ರೀತಿಯ ಡ್ರಾಮಾಗಳು ನಡೆದಿದ್ದವು. ಆದರೆ ಆಗಿನ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೂ ಭಾರಿ ವ್ಯತ್ಯಾಸವಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ಸುತ್ತ ಮತ್ತೆ ರಾಜಕೀಯ ಚರ್ಚೆ ಗರಿಗೆದರಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರ ಮತ್ತಷ್ಟು ತೀವ್ರ ವಾಗುವ ಸಾಧ್ಯತೆ ಇದೆ.

ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದಿರುವ ಈ ವಿವಾದ ಇದೀಗ ಕಾನೂನು ಹೋರಾಟದ ಹಾದಿ ಹಿಡಿಯುವ ಸೂಚನೆ ನೀಡಿದ್ದು, ರೈತರು, ಸ್ಥಳೀಯರು ಹಾಗೂ ರಾಜಕೀಯ ಪಕ್ಷಗಳ ಗಮನ ಸೆಳೆದಿದೆ.

Sponsored

ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದೆ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ."ಈ ಟೌನ್ ಶಿಪ್ ಗೆ ಅಲ್ಲಿನ ರೈತರ ಸಹಮತವೇ ಇಲ್ಲ. ಕೃಷಿ ಭೂಮಿಯನ್ನು ವಶಕ್ಕೆ ಪಡೆದು ಟೌನ್ ಶಿಪ್ ನಿರ್ಮಿಸಲು ಯತ್ನ ನಡೆಯುತ್ತಿದೆ" ಎಂದು ಆರೋಪಿಸಿದ್ದಾರೆ.

ಈ ಭಾಗದ ರೈತರು ಯೋಜನೆಗೆ ವಿರೋಧ ವ್ಯಕ್ತಪಡಿಸಿ ನಿರಂತರವಾಗಿ ಪ್ರತಿಭಟನೆಗಳು ನಡೆಸುತ್ತಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, ರೈತರಿಗೆ ಗೌರವ ನೀಡದೆ ಸರ್ಕಾರ ಏಕ ಪಕ್ಷಿಯವಾಗಿ ಮುಂದುವರೆಯುತ್ತಿದೆ ಎಂದು ಟೀಕಿಸಿದರು. "ಸಂಬಂಧಪಟ್ಟ ಅಧಿಕಾರಿಗಳು ರೈತರನ್ನು ಭೇಟಿಯಾಗದೆ, ಅವರ ಅಭಿಪ್ರಾಯ ಕೇಳದೆ ಕಾನೂನುಬಾಹಿರ ಚಟುವಟಿಕೆ ಮಾಡಲು ಹೊರಟಿದ್ದಾರೆ" ಎಂದು ಅವರು ಆರೋಪಿಸಿದ್ದರು.

ರೈತರ ಹಕ್ಕುಗಳ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, "ನಮ್ಮನ್ನ ಬೆಳೆಸಿದ ಜನರಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ" ಎಂದು ಹೇಳಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ಇದೀಗ ರೈತರು ಹಾಗೂ ಸರ್ಕಾರದ ವಿರುದ್ಧ ದೊಡ್ಡ ವಿವಾದವಾಗಿ ಮಾರ್ಪಟ್ಟಿದ್ದು, ಮುಂದಿನ ದಿನಗಳಲ್ಲಿ ಕಾನೂನು ಹೋರಾಟದ ರೂಪ ಪಡೆಯುವ ಸಾಧ್ಯತೆ ಇದೆ.

ರಾಜಕೀಯವಾಗಿ ಮಹತ್ವ ಪಡೆದಿರುವ ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ರೈತರ ವಿತಾಸಕ್ತಿಯ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.

Sponsored

Also Read:

Fake Rape Case ಮೂಲಕ ವಂಚನೆ: ಬೆಳಗಾವಿಯಲ್ಲಿ ಮಹಿಳೆ ಬಂಧನ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online