belagavi news :
ಬೆಳಗಾವಿಯಲ್ಲಿ ಸಂಚಲನ ಸೃಷ್ಟಿಸಿರುವ ಆದಿತ್ಯ ರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಮಹತ್ವದ ಮಾಹಿತಿ ನೀಡಿದ್ದಾರೆ.ಕಳೆದ ಎರಡು ದಿನಗಳ ಕಾಲ ನಡೆದ ದಾಳಿಯಿಂದ ಸಂಸ್ಥೆಯು ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಅಕ್ರಮವಾಗಿ ಹಣ ಸಂಗ್ರಹಿಸಿರುವುದು ಪ್ರಾರ್ಥಮಿಕ ತನಿಕೆಯಲ್ಲಿ ಬೆಳಕಿಗೆ ಬಂದಿದೆ.
ಎಸಿ ಶ್ರವಣ್ ನಾಯಕ್ ನೇತೃತ್ವದ ಕಂದಾಯ,ಸಹಕಾರ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ನಡೆಸಿದ ಪರಿಶೀಲನೆಯಲ್ಲಿ ಸಂಸ್ಥೆಯು ವಿವಿಧ ಹೂಡಿಕೆ ಯೋಜನೆಗಳ ಮೂಲಕ ಸಾವಿರಾರು ಜನರಿಗೆ ಹಣ ಸಂಗ್ರಹಿಸಿ ಹೆಚ್ಚಿನ ಲಾಭದ ಭರವಸೆ ನೀಡಿರುವುದು ಪತ್ತೆಯಾಗಿದೆ.ಹೂಡಿಕೆಗಳಿಗೆ ಹೂಡಿಕೆಗಳಿಗೆಸಂಬಂಧಿಸಿದ ಅಪಾಯಗಳ ಬಗ್ಗೆ ಸೂಕ್ತ ಮಾಹಿತಿ ನೀಡದೆ, ಶೇಕಡಾ ಐದರಷ್ಟು ಮಾಸಿಕ ಬಡ್ಡಿಯ ಆಮಿಷವೊಡ್ಡಿ ಸಾರ್ವಜನಿಕರನ್ನು ಸೆಳೆದಿರುವ ಆರೋಪ ಕೇಳಿ ಬಂದಿದೆ.
ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿದ್ದು,ರಾಜ್ಯ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಮಗ್ರ ವರದಿ ಸಲ್ಲಿಸಲಾಗಿದೆ.6500ಕ್ಕೂ ಹೆಚ್ಚು ಠೇವಣಿದಾರರಿಂದ ರೂ 50 ಕೋಟಿಗೂ ಅಧಿಕ ಹಣ ಸಂಗ್ರಹಿಸಿರುವ ಸಂಖ್ಯೆ ವ್ಯಕ್ತವಾಗಿದ್ದು,ತನಿಖೆ ಮತ್ತಷ್ಟು ತೀವ್ರಗೊಂಡಿದೆ.
ಸಂಸ್ಥೆಯು ಸೆಬಿ ಅಥವಾ ಇತರ ನಿಯಂತ್ರಣ ಸಂಸ್ಥೆಗಳ ಮಾನ್ಯತೆ ಹೊಂದಿರುವ ಪೋರ್ಟ್ ಪೋಲಿಯೋ ವ್ಯವಸ್ಥಾಪಕ ಸಂಸ್ಥೆಯಾಗಿಲ್ಲ.ಆದರೂ ಸಾರ್ವಜನಿಕರಿಂದ ಹಣ ಸಂಗ್ರಹಿಸಿರುವುದು ಕೆಪಿಐಡಿ ಕಾಯ್ದೆಯ ಉಲ್ಲಂಘನೆಯಾಗಿದೆ.ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 6500ಕ್ಕೂ ಹೆಚ್ಚು ಠೇವಣಿದಾರರಿಂದ 50 ಕೋಟಿಗೂ ಅಧಿಕ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ. ಚೆಕ್ ಮೂಲಕ ಹಣ ಸಂಗ್ರಹಿಸಲಾಗಿದ್ದು,ದಾಖಲೆಗಳ ಪರಿಶೀಲನೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಆದಿತ್ಯ ರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗು ಸಂಸ್ಥೆಯ ಮುಖ್ಯಸ್ಥ ಬಾಲರಾಜ್ ಮಾನೆ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಮ್ಮದ್ ರೋಷನ್ ತಿಳಿಸಿದ್ದಾರೆ. ಅವರ ಚಲನವಲನಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ದೇಶ ತೊರೆಯದಂತೆ ಎಲ್ಲಾ ವಿಮಾನ ನಿಲ್ದಾಣಗಳಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಸಹಾಯವಾಣಿ ತೆರೆಯಲಾಗಿದ್ದು,ಠೇವಣಿದಾರರು ತಮ್ಮ ದೂರುಗಳನ್ನು ಸಲ್ಲಿಸಬಹುದು.ದೂರುದಾರರ ವೈಯಕ್ತಿಕ ಮಾಹಿತಿಯನ್ನು ಸಂಪೂರ್ಣ ಗೌಪ್ಯವಾಗಿ ಇಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ,ಠೇವಣಿದಾರರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ ಅವರು,ಸರ್ಕಾರ ಹೂಡಿಕೆದಾರರ ಹಿತಾಸಕ್ತಿಯನ್ನು ಕಾಪಾಡಲು ಬದ್ಧವಾಗಿದೆ ಎಂದರು.ಕೆಪಿಐಡಿ ಕಾಯ್ದೆ ಅಡಿ ಕಾನೂನು ಕ್ರಮ ಜರುಗುತ್ತಿದ್ದು, ಪ್ರಕ್ರಿಯೆ ಪೂರ್ಣಗೊಂಡ ನಂತರ ಸುಮಾರು ಆರು ತಿಂಗಳೊಳಗೆ ಠೇವಣಿ ದಾರದ ಹಣವನ್ನು ಮರಳಿ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪ್ರಕರಣದ ತನಿಖೆ ಮುಂದುವರೆದಿದ್ದು,ಸಾವಿರಾರು ಠೇವಣಿದಾರರು ಸರ್ಕಾರದ ಮುಂದಿನ ಕ್ರಮಗಳತ್ತ ಗಮನಹರಿಸುತ್ತಿದ್ದಾರೆ.
ಆದಿತ್ಯ ರಾಜ್ ಕ್ಯಾಪಿಟಲ್ ಬಹುಕೋಟಿ ವಂಚನೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.ನಗರ ಪೊಲೀಸ್ ಆಯುಕ್ತ ಭೂಷಣ್ ಬೋರೆಸೆ ಅವರ ಪ್ರಕಾರ,ಸಂಸ್ಥೆಯ ಪ್ರಮುಖ ಆರು ಜನರ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸಂಸ್ಥೆಯು ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸೆಬಿಯಲ್ಲಿ ನೋಂದಣಿ ಹೊಂದಿರದಿರುವುದು ತನಿಕೆಯಲ್ಲಿ ದೃಢಪಟ್ಟಿದೆ.
ಸಂಸ್ಥೆಯ ಸಿಇಓ ಬಾಲರಾಜ್ ಮಾನೆ ಬಂಧನಕ್ಕಾಗಿ ವಿಶೇಷ ಪೋಲಿಸ್ ತಂಡ ರಚಿಸಲಾಗಿದ್ದು,ಅವರು ಪರಾರಿಯಾಗಿರುವ ಹಿನ್ನೆಲೆಯಲ್ಲಿ ದೇಶ ತೊರೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಪ್ರಕರಣದ ಸಮಗ್ರ ತನಿಖೆಗಾಗಿ ಸಿಡಿಐ ತನಿಖೆಗೆ ಶಿಫಾರಸ್ಸು ಮಾಡಲಾಗಿದೆ.
ದಾಳಿ ವೇಳೆ ಲ್ಯಾಪ್ ಟಾಪ್ ಗಳು,ಪ್ರಮುಖ ದಾಖಲೆಗಳು ಹಾಗೂ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದ್ದುನಾಲ್ಕು ವಿವಿಧ ಬ್ಯಾಂಕುಗಳಲ್ಲಿ ಹಣ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.ಶಿವಂ ಅಸೋಸಿಯೇಟ್ಸ್ ಮೇಲಿನ ಗಾಳಿಯ ನಂತರ ಆದಿತ್ಯ ರಾಜ್ ಕ್ಯಾಪಿಟಲ್ ನವರು ಸಾಕ್ಷ್ಯ ನಾಶಕ್ಕೆ ಯತ್ನಿಸಿರುವಶಂಕೆ ವ್ಯಕ್ತವಾಗಿದ್ದು,ತನಿಖೆಗೆ ಅಗತ್ಯ ಸಹಕಾರ ದೊರೆಯುತ್ತಿಲ್ಲ ಎಂದು ಪೊಲೀಸ ಆಯುಕ್ತರು ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿಯೂ ಇದೇ ಮಾದರಿಯ ಹಣಕಾಸು ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ,ಬೆಳಗಾವಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ.
ಸಂಸ್ಥೆಯ ಸಿಇಓ ಹಾಗೂ ಪ್ರಮುಖ ಆರೋಪಿ ಬಾಲರಾಜ್ ಮಾನೆ ಬಂಧನಕ್ಕಾಗಿ ವಿಶೇಷತಂಡ ರಚಿಸಲಾಗಿದ್ದು,ಅವರು ದೇಶ ತೊರೆಯದಂತೆ ಕಟ್ಟುನಿತಿನ ಕ್ರಮ ಕೈಗೊಳ್ಳಲಾಗಿದೆ.ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರ ತರಲು ಸಿಐಡಿ ತನಿಖೆಗೆ ಶಿಫಾರಸು ಮಾಡಲಾಗಿದೆ.
ದಾಳಿ ವೇಳೆ ಲ್ಯಾಪ್ ಟಾಪ್ ಗಳು,ಮಹತ್ವದ ದಾಖಲೆಗಳುಹಾಗೂ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದ್ದು,ನಾಲ್ಕು ವಿವಿಧ ಬ್ಯಾಂಕುಗಳಲ್ಲಿ ಹಣ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.ಶಿವಂ ಅಸೋಸಿಯೇಟ್ ಮೇಲಿನ ದಾಳಿಗೆ ಬಳಿಕ ಸಾಕ್ಷ್ಯ ನಾಶಕ್ಕೆ ಯತ್ನಿಸಿರುವ ಶಂಖೆಯು ವ್ಯಕ್ತವಾಗಿದ್ದು,ತನಿಕೆಗೆ ಅಗತ್ಯ ಸಹಕಾರ ದೊರೆಯುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವಿರಾರು ಠೇವಣಿದಾರರ ಹಣದ ಭವಿಷ್ಯ ಆತಂಕ ಮೂಡಿಸಿರುವ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು,ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆದಿದೆ.ಪ್ರಕರಣದ ಮತ್ತಷ್ಟು ಸ್ಪೋಟಕ ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.
Also Read:
ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ : ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ