<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಕಾಂಗ್ರೆಸ್ ನಲ್ಲಿ ದೊಡ್ಡ ಬದಲಾವಣೆ ! ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್

ಕಾಂಗ್ರೆಸ್ ನಲ್ಲಿ ದೊಡ್ಡ ಬದಲಾವಣೆ ! ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್
Summary: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್ ಬಂದಿರುವ ಸುದ್ದಿ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

Belagavi News:

ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಹಿರಿಯ ನಾಯಕ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್ ಬಂದಿರುವ ಮಾಹಿತಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಂಡಿರುವ ನಡುವೆಯೇ ಜಾರಕಿಹೊಳಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.

ಡಿ.ಕೆ.ಶಿವಕುಮಾರ್ ಅವರ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ಅಲಂಕರಿಸಲಿದ್ದಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿತು. ಇದೀಗ ಹೈಕಮಾಂಡ್ ಮಟ್ಟದಲ್ಲಿ ನಡೆದ ಚರ್ಚೆಗಳ ಬಳಿಕ ಸತೀಶ್ ಜಾರಕಿಹೊಳಿಗೆ ಮಹತ್ವದ ಜವಾಬ್ದಾರಿ ನೀಡುವ ಬಗ್ಗೆ ಚರ್ಚೆಗಳು ಗಂಭೀರ ಹಂತ ತಲುಪಿದೆ ಎಂಬ ಮೂಲಗಳು ತಿಳಿಸಿವೆ.

ಸತೀಶ್ ಜಾರಕಿಹೊಳಿ ಉತ್ತರ ಕರ್ನಾಟಕದಲ್ಲಿ ಪ್ರಭಾವಿ ನಾಯಕನಾಗಿದ್ದು, ಸಂಘಟನೆ ಹಾಗೂ ಆಡಳಿತ ಅನುಭವ ಹೊಂದಿದ್ದಾರೆ. ದಲಿತ ಹಾಗೂ ಹಿಂದುಳಿದ ವರ್ಗಗಳಲ್ಲಿ ಉತ್ತಮ ಹಿಡಿತ ಹೊಂದಿರುವ ಅವರು, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಸೂಕ್ತ ಆಯ್ಕೆಯನ್ನು ಮಾತುಗಳು ಕಾಂಗ್ರೆಸ್ ಒಳಗೆ ಕೇಳಿ ಬರುತ್ತಿವೆ.

ಇನ್ನೊಂದೆಡೆ, ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಒಳ ರಾಜಕೀಯ ಸಮೀಕರಣಗಳ ನಡುವೆ ಈ ನಿರ್ಧಾರ ರಾಜ್ಯಕಾರಣದಲ್ಲಿ ಹೊಸ ತಿರುಗು ತರಬಹುದೆಂಬ ವಿಶ್ಲೇಷಣೆ ನಡೆಯುತ್ತಿದೆ ಹೈ ಕಮಾಂಡ್ ಅಂತಿಮ ತೀರ್ಮಾನ ಏನು ಕೈಗೊಳ್ಳಲಿದೆ ಎಂಬುದರ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಕೇಳಿ ಬರುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹವನ್ನು ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಫೈನಲ್ ? :

ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳೆ ಅವರನ್ನು ಆಯ್ಕೆ ಮಾಡಲು ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಅವರು ಸ್ವತಹ ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸ್ವೀಕರಿಸುವ ಕುರಿತು ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ಸಂಘಟನೆಗೆ ಹೊಸ ಬಲತುಂಬುವ ಉದ್ದೇಶದಿಂದ ಹೈಕಮಾಂಡ್ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಆದರೆ, ಈ ಆಫರ್ ಅನ್ನು ಒಪ್ಪಿಕೊಳ್ಳುವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಒಂದು ಪ್ರಮುಖ ಶರತ್ತು ಮುಂದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಸಚಿವ ಸ್ಥಾನವನ್ನು ಉಳಿಸಿಕೊಂಡೆ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ನಿರ್ವಹಿಸಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ ಪ್ರಭಾವಿ ನಾಯಕ ರಾಗಿರುವ ಸತೀಶ್ ಜಾರಕಿಹೊಳಿ, ಉತ್ತರ ಕರ್ನಾಟಕದಲ್ಲಿ ದೊಡ್ಡ ಮಟ್ಟದ ರಾಜಕೀಯ ಹಿಡಿತ ಹೊಂದಿದ್ದಾರೆ. ದಲಿತ ಹಾಗೂ ಹಿಂದುಳಿದ ವರ್ಗಗಳಲ್ಲಿ ಉತ್ತಮ ಪ್ರಭಾವವಿರುವ ಅವರು, ಪಕ್ಷ ಸಂಘಟನೆಗೂ ಶಕ್ತಿ ತುಂಬವಲ್ಲ ನಾಯಕ ಎನ್ನುವ ಅಭಿಪ್ರಾಯ ಕಾಂಗ್ರೆಸ್ ಒಳವಲಯದಲ್ಲಿ ಕೇಳಿ ಬರುತ್ತಿದೆ.

ಡಿಕೆ ಶಿವಕುಮಾರ್ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ಅಲಂಕರಿಸಲಿದ್ದಾರೆ ಎಂಬ ಪ್ರಶ್ನೆ ನಡುವೆ ಇದೀಗ ಸತೀಶ್ ಜಾರಕಿಹೊಳಿ ಹೆಸರು ಮುನ್ನಡೆಯಲ್ಲಿದ್ದು, ಕಾಂಗ್ರೆಸ್ಗಳ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

ಹೈಕಮಾಂಡ್ ಅಂತಿಮ ನಿರ್ಧಾರ ಯಾವಾಗ ಪ್ರಕಟವಾಗಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಇದೇ ವೇಳೆ ಸತೀಶ್ ಜಾರಕಿಹೊಳಿ ಅವರ ಶರತ್ತಿಗೆ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿಯಲ್ಲಿ ಪ್ರತಿಗ್ರಹಿಸಲಿದೆ ಎಂಬುದು ಚರ್ಚೆಯ ಕೇಂದ್ರ ಬಿಂದುವಾಗಿದೆ.

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ :

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಕರ್ನಾಟಕದ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಬೇಗ ಪಡೆದಿವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಸಾಧ್ಯತೆ ಹೆಚ್ಚಾಗಿದ್ದು, ಅದೇ ವೇಳೆ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗುವ ದಾರಿ ಸುಗಮವಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಹೊಸ ನಾಯಕತ್ವ ಸಮೀಕರ್ಣ ರೂಪಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಯಾಗಿ ಘೋಷಿಸುವ ಸಾಧ್ಯತೆಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಬೆಳವಣಿಗೆಯೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಮತ್ತೆ ಮುನ್ನಡೆಗೆ ಬಂದಿದೆ.

ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಕಳೆದ ಒಂದು ವರ್ಷದಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದರು ಆದರೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ಮಾತ್ರ ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನ ಸ್ವೀಕರಿಸುವುದಾಗಿ ಅವರು ಹೈಕಮಾಂಡ್ ಗೆ ಸ್ಪಷ್ಟಪಡಿಸಿದ್ದರು ಎನ್ನಲಾಗಿದೆ.

"ಕೇವಲ ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಿಲ್ಲದೆ ಕೆಲಸ ಮಾಡುವುದು ಕಷ್ಟಕರ" ಎಂಬ ಅಭಿಪ್ರಾಯವನ್ನು ಜಾರಕಿಹೊಳಿ ವ್ಯಕ್ತಪಡಿಸಿದ್ದಾರಂತೆ . ಹೀಗಾಗಿ, ಪಕ್ಷ ಹಾಗೂ ಸರ್ಕಾರದ ನಡುವೆ ಸಮತೋಲನ ಕಾಯ್ದುಕೊಳ್ಳುವ ರೀತಿಯಲ್ಲಿ ನಾಯಕತ್ವ ಬದಲಾವಣೆ ಆಗಬೇಕೆಂದು ಅವರು ಬಯಸಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರ ಕರ್ನಾಟಕದಲ್ಲಿ ಪ್ರಭಾವಿ ನಾಯಕ ರಾಗಿರುವ ಸತೀಶ್ ಜಾರಕಿಹೊಳಿ, ಸಂಘಟನೆ ಮತ್ತು ಆಡಳಿತ ಎರಡರಲ್ಲೂ ಅನುಭವ ಹೊಂದಿದ್ದಾರೆ. ದಲಿತ ಹಾಗೂ ಹಿಂದುಳಿದ ವರ್ಗಗಳಲ್ಲಿ ಅವರ ಹಿಡಿತ ಕಾಂಗ್ರೆಸ್ ಬಲ ತುಂಬಲಿದೆ ಎಂಬ ಲೆಕ್ಕಾಚಾರವು ಪಕ್ಷದೊಳಗೆ ನಡೆಯುತ್ತಿದೆ.

ಈಗ ರಾಜ್ಯ ರಾಜಕಾರಣದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಾಗೂ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಎಂಬ ಹೊಸ ಸಮೀಕರಣ ಜೋರಾಗಿ ಕೇಳಿ ಬರುತ್ತಿದ್ದು, ಹೈಕಮಾಂಡ್ ಅಂತಿಮವಾಗಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ.

Also Read :

ವಾಯುಪಡೆಗೆ ಸುವರ್ಣ ಅವಕಾಶ: IAS ತಾಂತ್ರಿಕ ಅಧಿಕಾರಿ ಹುದ್ದೆಗೆ ನೇಮಕಾತಿ ಆರಂಭ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online