ಇಸ್ಲಾಮಾಬಾದ್ ಜಿಲ್ಲಾ ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟ: 12 ಮಂದಿ ಸಾವು
ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಇಸ್ಲಾಮಾಬಾದ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದು, ಈ ಸ್ಫೋಟಕ್ಕೆ ಕಾರಣ ಏನು ಎಂಬುದು ಪತ್ತೆಯಾಗಿಲ್ಲ.
ಇಸ್ಲಾಮಾಬಾದ್ (ಪಾಕಿಸ್ತಾನ):
ಸ್ಫೋಟ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ಹರಿದಾಡುತ್ತಿದ್ದು, ಬೆಂಕಿಯ ದಟ್ಟ ಹೊಗೆ ಆವರಿಸಿದೆ. ಸ್ಫೋಟದ ನಂತರ ಭದ್ರತಾ ತಡೆಗೋಡೆಯ ಹಿಂದೆ ಸುಟ್ಟ ವಾಹನದ ಅವಶೇಷಗಳು ಕಂಡುಬಂದಿವೆ.
ಘಟನೆಯಲ್ಲಿ ಗಾಯಗೊಂಡವರನ್ನು ಪಾಕಿಸ್ತಾನ ವಿಜ್ಞಾನ ವೈದ್ಯಕೀಯ ಸಂಸ್ಥೆ ಆಸ್ಪತ್ರೆಗೆ ರವಾನಿಸಲಾಗಿದೆ.
ತೀವ್ರ ಮಟ್ಟದಲ್ಲಿ ಸ್ಫೋಟಕ್ಕೆ ಸುಮಾರು ಆರು ಕಿಲೋ ಮೀಟರ್ ವರೆಗೆ ಶಬ್ಧ ಕೇಳಿಸಿದ್ದು, ರಕ್ಷಣಾ ಮತ್ತು ತನಿಖಾ ತಂಡ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿವೆ. ಸ್ಫೋಟದಿಂದ ಆತ್ಮಹುತಿ ಬಾಂಬ್ ದಾಳಿಕೋರದ ತಲೆ ರಸ್ತೆ ಮೇಲೆ ಬಿದ್ದಿದೆ ಎಂದು ವರದಿ ತಿಳಿಸಿದೆ.
ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಯಾವುದೇ ಗುಂಪು ಅಥವಾ ವ್ಯಕ್ತಿಗಳು ಹೊಣೆ ಹೊತ್ತಿಕೊಂಡಿಲ್ಲ. ಅಫ್ಘಾನಿಸ್ತಾನದ ಭಯೋತ್ಪಾದನೆಯ ಸಮಸ್ಯೆಯನ್ನು ನಿಭಾಯಿಸಲು ಪಾಕಿಸ್ತಾನ ಮತ್ತು ಅಫ್ಘಾನ್ ತಾಲಿಬಾನ್ ನಡುವಿನ ಮೂರನೇ ಸುತ್ತಿನ ಮಾತುಕತೆಗಳು ಯಾವುದೇ ಒಪ್ಪಂದಕ್ಕೆ ಬರಲು ವಿಫಲವಾದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ.
ಪಾಕಿಸ್ತಾನ ರಾಜಧಾನಿ ಇಸ್ಲಾಬಾದ್ನ ಜಿ 11 ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ನ ಹೊರಗೆ ಆತ್ಮಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 12 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಇಸ್ಲಾಮಾಬಾದ್ನ ಹಿರಿಯ ಪೊಲೀಸ್ ಅಧಿಕಾರಿ ದೃಢಪಡಿಸಿದ್ದು, ಈ ಸ್ಫೋಟಕ್ಕೆ ಕಾರಣ ಏನು ಎಂಬುದು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ಸಾಗಿದೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಸೋಮವಾರ ದೆಹಲಿಯ ಕೆಂಪು ಕೋಟೆ ಬಳಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಸಾವಿನ ಸಂಖ್ಯೆ 12 ಕ್ಕೇರಿದ್ದರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಇದು ಕೂಡ ಆತ್ಮಾಹುತಿ ದಾಳಿ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಫೋಟಗೊಂಡ ಕಾರನ್ನು ಕಾಶ್ಮೀರದ ವೈದ್ಯ ಉಮರ್ ಮೊಹಮ್ಮದ್ ಚಲಾಯಿಸುತ್ತಿದ್ದ. ಆತ ಆತ್ಮಾಹುತಿ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ತನಿಖಾ ಏಜೆನ್ಸಿಗಳು ಶಂಕಿಸಿವೆ.
ಜೈಶ್ ಸಂಘಟನೆಯ ತನ್ನ ಸಹಚರರನ್ನು ಇತ್ತೀಚೆಗೆ ಕಾಶ್ಮೀರದಲ್ಲಿ ಬಂಧಿಸಿದ್ದನ್ನು ತಿಳಿದ ನಂತರ ಉಮರ್ ಉತ್ತರ ಪ್ರದೇಶದ ಫರಿದಾಬಾದ್ನಿಂದ ಪರಾರಿಯಾಗಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ತಿಳಿಸಿವೆ.
ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ್ದು, ಅಪರಾಧಿಗಳಿಗೆ ತಕ್ಕ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದರು.
ಘಟನೆಯನ್ನು ಪಾಕಿಸ್ತಾನ ಅಧ್ಯಕ್ಷ ಆಸಿಫ್ ಆಲಿ ಜರ್ದಾರಿ ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಓದಿರಿ :
ನಿಥಾರಿ ಹತ್ಯೆ ಪ್ರಕರಣ: ಸುರೇಂದ್ರ ಕೋಲಿ ಬಿಡುಗಡೆಗೆ ಆದೇಶ