belagavi news :
'ಬಾಸ್ ' ಸಿನಿಮಾ ಪ್ರದರ್ಶನಕ್ಕೆ ಹೈಕೋರ್ಟ್ ಅಸ್ತು: ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಹಿನ್ನಡೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿಕೊಂಡು ನಿರ್ಮಿಸಲಾಗಿದೆ ಎನ್ನಲಾಗುತ್ತಿರುವ 'ಬಾಸ್' ಸಿನಿಮಾ ಬಿಡುಗಡೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಚಿತ್ರದ ಪ್ರದರ್ಶನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ಆದೇಶದೊಂದಿಗೆ 'ಬಾಸ್' ಚಿತ್ರದ ಪ್ರದರ್ಶನಕ್ಕೆ ಇದ್ದ ಅಡ್ಡಿ ದೂರವಾಗಿದ್ದು, ಚಿತ್ರ ಬಿಡುಗಡೆಗೆ ಹಾದಿ ಸುಗಮವಾಗಿದೆ. ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ, ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿಯನ್ನು ಪರಿಗಣಿಸಿ ಈ ಆದೇಶ ನೀಡಿದೆ.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿಂದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿ ಆದೇಶ ಪ್ರಕಟಿಸಿದೆ. ಹೈ ಕೋರ್ಟ್ ತೀರ್ಪಿನಿಂದಾಗಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿಯವರಿಗೆ ಹಿನ್ನಡೆಯಾಗಿದೆ.
'ಬಾಸ್' ಚಿತ್ರಕ್ಕೆ ಹೈಕೋರ್ಟ್ ಶರತು ಬದ್ಧ ಅನುಮತಿ : ಡಿಸ್ಕ್ಲೆಮರ್ ಪ್ರದರ್ಶಿಸಲು ಸೂಚನೆ
'ಬಾಸ್' ಚಿತ್ರದ ಬಿಡುಗಡೆಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ದೋಷವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ಚಿತ್ರದ ಪ್ರದರ್ಶನಕ್ಕೆ ಇದ್ದ ಅಡ್ಡಿ ಮತ್ತಷ್ಟು ದೂರವಾಗಿದೆ.
ಆದರೆ, ಚಿತ್ರದ ನಿರ್ಮಾಣ ಸಂಸ್ಥೆ ಸಿರಿ ಪ್ರೊಡಕ್ಷನ್ಸ್ ಗೆ ಹೈಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಚಿತ್ರದ ಆರಂಭದಲ್ಲಿ ಕಡ್ಡಾಯವಾಗಿ ಡಿಸ್ಕ್ಲೆಮರ್ ಪ್ರದರ್ಶಿಸುವಂತೆ ನ್ಯಾಯಾಲಯದ ಸೂಚನೆ ನೀಡಿದೆ.
ವಿಚಾರಣೆ ವೇಳೆ, ಚಿತ್ರದ ಆರಂಭದಲ್ಲಿ 30 ಸೆಕೆಂಡುಗಳ ಕಾಲ ನಡೆಯುತ್ತಿದೆ ಡಿಸ್ಕ್ಲೆಮರ್ ಪ್ರದರ್ಶಿಸಲಾಗುವುದು ಹಾಗೂ ಅರ್ಜಿದಾರರ ವೈಯಕ್ತಿಕ ಜೀವನ, ಕುಟುಂಬ ಅಥವಾ ನಟನ ಬದುಕಿಗೆ ಸಂಬಂಧಿಸಿದ ಯಾವುದೇ ನೈಜ ಘಟನೆಗಳನ್ನು ಚಿತ್ರದಲ್ಲಿ ಬಳಸಿಲ್ಲ ಎಂದು ನಿರ್ಮಾಣ ಸಂಸ್ಥೆ ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ನೀಡಿತು.
ಈ ಹೇಳಿಕೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿಂದ ಏಕ ಸದಸ್ಯ ಪೀಠ ಸೂಚಿಸಿದೆ.
'ಬಾಸ್' ಚಿತ್ರದ ಬಿಡುಗಡೆ ಸಂಬಂಧಿಸಿದಂತೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ಕನಿಷ್ಠ ಒಂದು ವಾರ ಮುಂದೂಡಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು.
ಆದರೆ, ಈ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿತು. ವಿಚಾರಣಾ ನ್ಯಾಯಾಲಯದ ತಡೆಯಾಜ್ಞೆ ತೆರವು ಆದೇಶದ ವಿರುದ್ಧ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವುದರ ಮುಖ್ಯ ಉದ್ದೇಶವೇ ಚಿತ್ರದ ಬಿಡುಗಡೆಗೆ ಅವಕಾಶ ನೀಡುವುದಾಗಿದೆ ಎಂದು ನ್ಯಾಯ ಪೀಠ ಮೌಖಿಕವಾಗಿ ತಿಳಿಸಿತು.
ಪ್ರಕರಣ ದ ಹಿನ್ನಲೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ನಟ ದರ್ಶನ್,'ಬಾಸ್' ಸಿನಿಮಾ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆ ಮೇಲೆ ಪರಿಣಾಮ ಬೀರಬಹುದು ಎಂದು ಆಕ್ಷೇಪಿಸಿದ್ದರು. ಚಿತ್ರವು ರೇಣುಕಾಸ್ವಾಮಿ ಪ್ರಕರಣದಿಂದ ಪ್ರೇರಿತವಾಗಿದೆ ಎಂದು ಆರೋಪಿಸಿ, ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕಳೆದ ಮಾರ್ಚ್ ನಲ್ಲಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.
ಈ ಹಿನ್ನೆಲೆಯಲ್ಲಿ ಚಿತ್ರದ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಹೈಕೋರ್ಟ್ ವಿಚಾರಣಾ ನ್ಯಾಯಲಯದ ತಡೆಯಾಜ್ಞೆ ತೆರೆವು ಆದೇಶವನ್ನು ಎತ್ತಿ ಹಿಡಿದಿದೆ.
ಬಾಸ್ ಸಿನಿಮಾ ವಿವಾದ : ತೆರವು ಪ್ರಶ್ನಿಸಿದ್ದ ವಿಜಯಲಕ್ಷ್ಮಿ ಅರ್ಜಿ ಹೈಕೋರ್ಟ್ ನಲ್ಲಿ ವಜಾ
ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮಾರ್ಚ್ 27 ರದ್ದು ಚಿತ್ರ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿತು. ಬಳಿಕ ಮೇ ಎರಡರಂದು ಪ್ರತಿಪಾದಿಗಳ ವಾದ ಆಲಿಸಿದ ನಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತು. ಈ ಆದೇಶವನ್ನು ಪ್ರಶ್ನಿಸಿ, ವಿಜಯಲಕ್ಷ್ಮಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದರು.
ಈ ವಿಚಾರಣೆ ವೇಳೆ ವಿಜಯಲಕ್ಷ್ಮಿ ಪರ ವಕೀಲರು, ಚಿತ್ರದ ಕಥೆಯ ಮುಖ್ಯ ಪಾತ್ರವು ಕ್ರಿಕೆಟಿಗನ ಕುರಿತಾಗಿದ್ದು, ಅರ್ಜಿದಾರರು ಮಾಡುತ್ತಿರುವ ಆರೋಪಗಳಿಗೆ ಆಧಾರವಿಲ್ಲ ಎಂದು ವಾದಿಸಿದರು. ಅರ್ಜಿಯನ್ನು ವಜಾಗೊಳಿಸುವಂತೆ ಕೋರಿದರು.
ವಾದ ಪ್ರತಿವಾದಗಳನ್ನು ಆಲಿಸಿದ ಹೈ ಕೋರ್ಟ್, ವಿಚಾರಣಾ ನ್ಯಾಯಾಲಯದ ತಡೆಯಾಜ್ಞೆ ತೆರೆವು ಆದೇಶದಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿಸಿ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಿತು.
Also Read:
ಬಿಡದಿ ಟೌನ್ ಶಿಪ್ ಗೆ ಆಕ್ರೋಶ : 'ಪ್ರಿಯಾಂಕಾ ಗಾಂಧಿ ಕೊಟ್ಟ ಭರವಸೆ ಈಡೇರಿಸಲು ಟೌನ್‌ಶಿಪ್?'