Belagavi News:
ರಾಜ್ಯದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗಳ ನಡುವೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
'ಎರಡು ಡಿಸಿಎಂ ಹುದ್ದೆಗಳ ಸೃಷ್ಟಿ ಮಾಡಬೇಕೆ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ತೀರ್ಮಾನ. ನಾನು ಯಾವುದೇ ಸಂದರ್ಭದಲ್ಲಿ ಡಿಸಿಎಂ ಹುದ್ದೆಯನ್ನು ಕೇಳಿಲ್ಲ. ಆದರೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಕಾಯಬೇಕು ' ಎಂದು ಅವರು ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಸಂಪುಟ ಪುನರ್ ರಚನೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತು ಹಲವು ದಿನಗಳಿಂದ ಊಹಾಪೋಹಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಡಿಸಿಎಂ ಹುದ್ದೆ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದ್ದು , ಪಕ್ಷದ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಡಿಸಿಎಂ ಹುದ್ದೆ ಬೇಡಿಕೆ ಇಟ್ಟಿಲ್ಲ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಧಾರ :
ಉಪಮುಖ್ಯಮಂತ್ರಿ ಹುದ್ದೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗಳ ನಡುವೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸೃಷ್ಟಿ ಹಾಗೂ ನೇಮಕಾತಿ ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಎಂದು ಹೇಳಿದ್ದಾರೆ.
"ಡಿಸಿಎಂ ಹುದ್ದೆಗಳ ಸೃಷ್ಟಿ ಮಾಡಬೇಕೆ ಅಥವಾ ಬೇಡವೇ ಎಂಬುವುದು ಪಕ್ಷದ ತೀರ್ಮಾನ. ನಾನು ಡಿಸಿಎಂ ಹುದ್ದೆಗೆ ಯಾವುದೇ ಬೇಡಿಕೆ ಇಟ್ಟಿಲ್ಲ" ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟ ಪಡಿಸಿದರು.
ಇದೇ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಸಿದವರು, ಈ ಬಗ್ಗೆ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಹೇಳಿದರು.
" ಹೈಕಮಾಂಡ್ ನಾಯಕರು ಪ್ರಸ್ತುತ ನೀಟ್ ಪರೀಕ್ಷೆ ವಿರುದ್ಧದ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ " ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತು ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಪಕ್ಷದ ಹೈಕಮಾಂಡ್ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ನಿರ್ಧಾರದತ್ತ ಕಾಂಗ್ರೆಸ್ ನಾಯಕರು ಹಾಗೂ ರಾಜಕೀಯ ವಲಯದ ಗಮನ ನೆಟ್ಟಿದೆ.
ಸಚಿವ ಸಂಪುಟ ವಿಸ್ತರಣೆ ಸಭೆ ಶನಿವಾರ ಅಥವಾ ಭಾನುವಾರ ? ಸತೀಶ್ ಜಾರಕಿಹೊಳಿ ಮಹತ್ವದ ಮಾಹಿತಿ :
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಮತ್ತೆ ವೇಗ ಪಡೆದಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಗಿ ಹೊಳಿ ಮಹತ್ವದ ಮಾಹಿತಿ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಹೈಕಮಾಂಡ್ ನಾಯಕರು ನೀಟ್ ವಿರುದ್ಧದ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಆ ಪ್ರತಿಭಟನೆ ಕೂಡ ದೇಶಕ್ಕೆ ಪ್ರಮುಖ ವಿಷಯವಾಗಿದ್ದರಿಂದ ನಿನ್ನೆ ಸಚಿವ ಸಂಪುಟ ವಿಸ್ತರಣೆ ಕುರಿತು ಸಭೆ ನಡೆಸಲು ಸಾಧ್ಯವಾಗಿಲ್ಲ" ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, "ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಶನಿವಾರ ಅಥವಾ ಭಾನುವಾರ ಪಕ್ಷದ ನಾಯಕರು ಮತ್ತೆ ಸಭೆ ಸೇರಬಹುದು. ಹೈಕಮಾಂಡ್ ನಾವ್ ವೇಳಾಪಟ್ಟಿಗೆ ಅನುಗುಣವಾಗಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ " ಎಂದು ತಿಳಿಸಿದರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ, ಖಾಲಿ ಇರುವ ಸಚಿವ ಸ್ಥಾನಗಳ ಬರ್ತಿ ಹಾಗೂ ರಾಜಕೀಯ ಸಮತೋಲನದ ಕುರಿತು ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಈ ಹೇಳಿಕೆ ಮಹತ್ವ ಪಡೆದಿದೆ. ಇದೀಗ ವರಂತ್ಯದಲ್ಲಿ ನಡೆಯುವ ಸಾಧ್ಯತೆ ಇರುವ ಸೈಕಮಾಂಡ್ ಸಭೆಯತ್ತ ರಾಜ್ಯ ರಾಜಕೀಯದ ಗಮನ ಕೇಂದ್ರೀಕೃತವಾಗಿದೆ.