Belagavi News:
ಎಸ್ ಐ ಆರ್ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಹಲವು ಸರ್ಕಾರಿ ಶಾಲೆಗಳಲ್ಲಿ ಬೋಧನಾ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿದ್ದು, ತರಗತಿಗಳು ಸ್ಥಗಿತಗೊಂಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
ಶಿಕ್ಷಕರನ್ನು SIR ಕರ್ತವ್ಯಕ್ಕೆ ನಿಯೋಜಿಸಿದ ಪರಿಣಾಮ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದ್ದು, ಹಲವು ಕಡೆ ನಿಯಮಿತ ಪಾಠಗಳು ನಯಮಿತ ಪಾಠಗಳು ನಡೆಯದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಉಂಟಾಗಲಿದೆ ಎಂಬ ಆತಂಕವು ವ್ಯಕ್ತವಾಗಿದೆ.
ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಪೋಷಕರು, ಶಾಲೆಗಳಲ್ಲಿ ಬೋಧನಾ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಎಸ್ಐಆರ್ ಕರ್ತವ್ಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸರ್ಕಾರ ಹಾಗೂ ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದ್ದಾರೆ. ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಎಸ್ಐಆರ್ ಕರ್ತವ್ಯ ಮತ್ತು ಶಾಲಾ ಬೋಧನೆ ಎರಡನ್ನು ಸಮನ್ವಯಗೊಳಿಸುವ ಬಗ್ಗೆ ಸರ್ಕಾರದ ಮುಂದಿನ ನಿರ್ಧಾರದತ್ತ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಕಾದು ನೋಡುತ್ತಿದ್ದಾರೆ.
SIR ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ - ಶಾಲಾ ಶಿಕ್ಷಣದ ಮೇಲೆ ಪರಿಣಾಮ, ವಿದ್ಯಾರ್ಥಿಗಳು - ಪೋಷಕರ ಆತಂಕ :
ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಗೆ ಶಿಕ್ಷಕರನ್ನು ನಿಯೋಜಿಸಿರುವ ಪರಿಣಾಮ ಶಾಲೆಗಳ ಬೋಧನಾ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಹಿನ್ನಡೆಯಾಗುವ ಆತಂಕ ವ್ಯಕ್ತವಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಈ ಸಮಸ್ಯೆ ಹೆಚ್ಚು ಗೋಚರಿಸಿದೆ. ಶಾಲೆಗಳಲ್ಲಿರುವ ಏಳು ಶಿಕ್ಷಕರ ಪೈಕಿ ಆರು ಮಂದಿಯನ್ನು ಎಸ್ಐಆರ್ ಕರ್ತವ್ಯಕ್ಕೆ ನಿಯೋಜಿಸಿರುವುದರಿಂದ, ಬೋಧನಾ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಇದರ ಪರಿಣಾಮವಾಗಿ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರೇ ಎಲ್ಲ ವಿಷಯಗಳನ್ನು ಬೋಧಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಗುಣಮಟ್ಟದ ಶಿಕ್ಷಣಕ್ಕೆ ಧಕ್ಕೆಯಾಗುತ್ತಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಶಿಕ್ಷಕರನ್ನು ಚುನಾವಣಾ ಸಂಬಂಧಿತ ಎಸ್ಐಆರ್ ಕಾರ್ಯಕ್ಕೆ ನಿಯೋಜಿಸುವಾಗ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಪೋಷಕರು ಸರ್ಕಾರ ಮತ್ತು ಶಿಕ್ಷಣ ಇಲಾಖೆಯನ್ನು ಆಗ್ರಹಿಸಿದ್ದಾರೆ. ಈ ಬೆಳವಣಿಗೆ ರಾಜ್ಯದಲ್ಲಿ ಎಸ್ಐಆರ್ ಕರ್ತವ್ಯ ಮತ್ತು ಶಾಲಾ ಶಿಕ್ಷಣದ ಸಮತೋಲನ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.
SIR ಕರ್ತವ್ಯದಿಂದ ಶಾಲೆಗಳಲ್ಲಿ ಬೋಧನೆಗೆ ಹೊಡೆತ - ಸೀಮಿತ ಶಿಕ್ಷಕರಿಂದ ಪಾಠ, ಪೋಷಕರ ಆಕ್ರೋಶ :
ಎಸ್ಐಆರ್ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವ ಪರಿಣಾಮ ಹಲವು ಶಾಲೆಗಳಲ್ಲಿ ಬೋಧನಾ ವ್ಯವಸ್ಥೆ ಆಸ್ತವ್ಯಸ್ತಗೊಂಡಿದೆ. ಶಿಕ್ಷಕರ ಕೊರತೆಯಿಂದ ಒಂದರಿಂದ ಏಳನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೂ ಸೀಮಿತ ಶಿಕ್ಷಕರಿಂದಲೇ ಪಾಠ ನಡೆಯುತ್ತಿದ್ದು, ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಲೆಗಳಲ್ಲಿ ಹೆಚ್ಚಿನ ಶಿಕ್ಷಕರು ಎಸ್ಐಆರ್ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಉಳಿದಿರುವ ಕೆಲವೇ ಶಿಕ್ಷಕರು ಎಲ್ಲಾ ತರಗತಿಗಳು ಹಾಗೂ ವಿವಿಧ ವಿಷಯಗಳನ್ನು ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬೋಧನೆ ಯ ಗುಣಮಟ್ಟ ಕುಸಿಯುವ ಜೊತೆಗೆ ವಿದ್ಯಾರ್ಥಿಗಳ ಕಲಿಕೆಯ ಮೇಲು ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.
ಈ ಬೆಳವಣಿಗೆಗೆ ವಿರೋಧ ವ್ಯಕ್ತಪಡಿಸಿರುವ ಪೋಷಕರು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ದಕ್ಕೆಯಾಗದಂತೆ ಎಸ್ಐಆರ್ ಕರ್ತವ್ಯಕ್ಕೆ ಪರ್ಯಾಯ ಸಿಬ್ಬಂದಿಯನ್ನು ನಿಯೋಜಿಸಬೇಕು ಅಥವಾ ಬೋಧನಾ ಕಾರ್ಯಕ್ಕೆ ಅಡ್ಡಿಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರ ಮತ್ತು ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದಾರೆ.
SIR ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ ವಿರೋಧಿಸಿ ಪ್ರತಿಭಟನೆ - ಅನುದಾನಿತ ಶಾಲೆಗಳ ಶಿಕ್ಷಣ ರಕ್ಷಣೆಗೆ ಆಗ್ರಹ :
SIR ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವ ಪರಿಣಾಮ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು.
ಶಿಕ್ಷಕರ ಕೊರತೆಯಿಂದ ನಿಯಮಿತ ಬೋಧನೆ ನಡೆಯದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಧಕ್ಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ವಿಶೇಷವಾಗಿ ಅನುದಾನಿತ ಶಾಲೆಗಳಲ್ಲಿ ಬೋಧನಾ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವೇಳೆ ಸರ್ಕಾರ ಹಾಗೂ ಕ್ಷಣ ಇಲಾಖೆ ತಕ್ಷಣ ಮಧ್ಯ ಪ್ರವೇಶಿಸಿ, ಅನುದಾನಿತ ಶಾಲೆಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಶಾಲೆಗಳಲ್ಲಿ ಬೋಧನಾ ಕಾರ್ಯ ಸುಗಮವಾಗಿ ನಡೆಯಲು ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಶಿಕ್ಷಕರ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂಬ ಅಗ್ರಹವು ಪ್ರತಿಭಟನೆಯಲ್ಲಿ ಕೇಳಿ ಬಂತು.