<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

Breaking News: ದೇವಸ್ಥಾನಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದಳು

Breaking News: ದೇವಸ್ಥಾನಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದಳು
Summary: A 15-year-old minor girl who came to see the deity was admitted to the hospital after falling ill on the temple premises, where she gave birth to a premature baby, creating a stir. After the case came to light, the police and the Women and Child Welfare Department have started an investigation. They are gathering information about the circumstances that led to the minor's pregnancy. Read the full report for all the important updates including Minor girl pregnancy case, breaking news, Karnataka news, child protection case, Temple incident.

Belagavi News:

ಚಂಪಾವತ್ (ಉತ್ತರಖಂಡ): ಕುಟುಂಬ ಸದಸ್ಯರೊಂದಿಗೆ ದೇವರ ದರ್ಶನಕ್ಕೆ ಬಂದಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಅವಧಿಪೂರ್ವ ನವಜಾತ ಶಿಶುವಿಗೆ ಜನ್ಮ ನೀಡಿದ ಘಟನೆ ಉತ್ತರಾಖಂಡದ ಚಂಪಾವತ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಗು ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದು. ಪ್ರಕರಣದ ಕುರಿ ತೂಪೋಲಿ ತನಿಖೆ ಆರಂಭಿಸಿದ್ದಾರೆ.

ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಬಾಲಕಿ ತನ್ನ ಕುಟುಂಬದೊಂದಿಗೆ ಉತ್ತರಾಖಂಡದ ಪ್ರಸಿದ್ಧ ಪೂರ್ಣ ಗಿರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಳು. ದೇವರ ದರ್ಶನದ ಬಳಿಕ ಹಿಂತಿರುಗುವ ವೇಳೆ ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದೆ. ತಕ್ಷಣ ಆಕೆಯನ್ನು ತನಕ್ ಪುರ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಬಾಲೆಕಿ ಸುಮಾರು ಆರು ತಿಂಗಳ ಅವಧಿಪೂರ್ವ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ನವಜಾತ ಶಿಶು ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ ವೈದ್ಯಕೀಯ ಪರೀಕ್ಷೆಗಳು ನಡೆಸಲಾಗಿದ್ದು, ಮುಂದಿನ ತನಿಖೆಗಾಗಿ ಡಿ.ಎನ್.ಎ ಪರೀಕ್ಷೆಗೆ ಅಗತ್ಯ ಮಾದರಿಗಳನ್ನು ಸಂರಕ್ಷಿಸಲಾಗಿದೆ.

ಘಟನೆಯ ಮಾಹಿತಿ ತೀಡಿದ ತಕ್ಷಣ ಟನಕ್‌ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೂನ್ಯ ಎಫ್ ಐ ಆರ್ (Zero FIR) ದಾಖಲಿಸಿದ್ದಾರೆ. ಬಳಿಕ ಕಾನೂನು ಪ್ರಕ್ರಿಯೆಯಂತೆ ಪ್ರಕರಣವನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಸಂಬಂಧಿತ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಈ ಕುರಿತು ಪ್ರಕ್ರಿಯೆ ನೀಡಿದ ಟನಕ್‌ಪುರ ಪೋಲಿಸ್ ಇನ್ಸ್ ಪೆಕ್ಟರ್ ಚೇತನ್ ರಾವತ್, "ವೈದ್ಯರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತದೆ. ಸಾಕ್ಷ್ಯಗಳು ಹಾಗೂ ತನಿಕಾ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಗರ್ಭಧಾರಣೆಯ ಹಿಂದೆ ಇರುವ ಕಾರಣಗಳು ಮತ್ತು ಸಂಭವನೀಯ ಅಪರಾಧದ ಬಗ್ಗೆ ತನಿಖೆ ಮುಂದುವರಿದಿದ್ದು, ಪ್ರಕರಣವು ಗಂಭೀರ ಚರ್ಚೆಗೆ ಕಾರಣವಾಗಿದೆ.

Also Read:

ಚಿನ್ನಯ್ಯ 'ಕರೆ ಮಾಡಿದ್ದು ನಿಜ, ರೆಕಾರ್ಡ್ ಎಸ್ಐಟಿಗೆ ಕೊಟ್ಟಿದ್ದೆ' : ಪ್ರಕಾಶ್ ರಾಜ್ ಸ್ಪಷ್ಟನೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online