<?= $pageTitle ?>
Logo
ಮುಖಪುಟ ಓದುವುದು ಕೇಳು
Education

ಆರೋಗ್ಯ ಇಲಾಖೆಯಲ್ಲಿ ಬಂಪರ್ ನೇಮಕಾತಿ : 800 ಹುದ್ದೆಗಳ ಬರ್ತಿಗೆ ಸರ್ಕಾರದ ಮಹತ್ವದ ನಿರ್ಧಾರ

ಆರೋಗ್ಯ ಇಲಾಖೆಯಲ್ಲಿ ಬಂಪರ್ ನೇಮಕಾತಿ : 800 ಹುದ್ದೆಗಳ ಬರ್ತಿಗೆ ಸರ್ಕಾರದ ಮಹತ್ವದ ನಿರ್ಧಾರ
Summary: There is good news for the aspirants of the state government jobs. The state government has given the green signal for the recruitment of 800 posts in the department and the recruitment process is likely to start soon. The department will officially announce the details of the posts, eligibility and application submission date.

Belagavi News:

ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನೀರಿಕ್ಷೆ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಪಡೆಯಲಿದ್ದಾರೆ.

ಸರ್ಕಾರದ ಅನುಮೋದನೆಯಂತೆ ಈ ನೇಮಕಾತಿಯಲ್ಲಿ 400 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಅಗತ್ಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದೆ.

ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಕೈಗೊಳ್ಳಲಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳು ಭರ್ತಿಯಾಗಲಿವೆ. ಇದರಿಂದ ಆರೋಗ್ಯ ಸೇವೆಯ ಗುಣಮಟ್ಟ ಹೆಚ್ಚುದರ ಜೊತೆಗೆ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ.

ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಪ್ರಕಟಿಸಲಿದೆ. ಹುದ್ದೆಗಳ ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ವಿಧಾನ, ಆಯ್ಕೆ ಪ್ರಕ್ರಿಯೆ ಹಾಗೂ ಪರೀಕ್ಷೆಯ ವೇಳಾಪಟ್ಟಿ ಸೇರಿದಂತೆ ಎಲ್ಲ ಮಾಹಿತಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಗಾಗಿ ಕಾದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ - ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ಭರ್ತಿಗೆ ಸರ್ಕಾರದ ಆದೇಶ :

ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಈ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರದ ಆದೇಶದಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿಯಿಂದ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಸೇವಾ ವ್ಯವಸ್ಥೆಗೆ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಈ ನೇಮಕಾತಿ ಅಡಿ ಒಟ್ಟು 800 ಹುದ್ದೆಗಳು ಭರ್ತಿಯಾಗಲಿದ್ದು , ಅವುಗಳಲ್ಲಿ 400 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳು ಹಾಗೂ 400 ಫಾರ್ಮಸಿ ಅಧಿಕಾರಿ ಹುದ್ದೆಗಳು ಸೇರಿವೆ. ರಾಜ್ಯದ ವಿವಿಧ ಜಿಲ್ಲೆಗಳ ಅಗತ್ಯಕ್ಕೆ ಅನುಗುಣವಾಗಿ ಈ ಹುದ್ದೆಗಳನ್ನು ಹಂಚಿಕೆ ಮಾಡಲಾಗುವುದು.

ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ, ಅರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಸಲ್ಲಿಕೆ ದಿನಾಂಕ, ಆಯ್ಕೆ ವಿಧಾನ ಹಾಗೂ ಪರೀಕ್ಷೆಯ ವೇಳಾಪಟ್ಟಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಪ್ರಕಟಿಸಲಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಪ್ರಕಟಣೆಗಳ ಮೇಲೆ ಗಮನಹರಿಸಿ, ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಸೂಕ್ತ.

ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ - ಜಿಲ್ಲಾ ವಾರು ಹಂಚಿಕೆ, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ :

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 800 ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವ ಬೆನ್ನಲ್ಲೇ ಜಿಲ್ಲಾ ಹಂಚಿಕೆಗೂ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉಳಿದ ಜಿಲ್ಲೆಗಳಿಗೂ ಪ್ರತ್ಯೇಕವಾಗಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ.

ಸರ್ಕಾರದ ಅನುಮೋದನೆ ಯೊಂದಿಗೆ ನಿಮ್ಮ ಖಾತೆ ಪ್ರಕ್ರಿಯೆ ಆರಂಭವಾಗಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶೀಘ್ರದಲ್ಲಿ ಅಧಿಕೃತ ಪ್ರಕಟಿಸುವ ನಿರೀಕ್ಷೆ ಇದೆ. ಅಧಿಸೂಚನೆಯಲ್ಲಿ ಹುದ್ದೆಗಳ ಸಂಪೂರ್ಣ ವಿವರ, ಜಿಲ್ಲಾವಾರು ಹಂಚಿಕೆ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಸಲ್ಲಿಕೆ ದಿನಾಂಕ, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಮಾಹಿತಿ ಪ್ರಕಟಿಸಲಾಗುತ್ತಿದೆ.

ಈ ನೇಮಕಾತಿ ಅಡಿ ಒಟ್ಟು 800 ಹುದ್ದೆಗಳು ಬರ್ತಿಯಾಗಲಿದ್ದು, 400 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು ಹಾಗೂ 400 ಫಾರ್ಮಸಿ ಅಧಿಕಾರಿ ಹುದ್ದೆಗಳು ಸೇರಿವೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಕರ್ನಾಟಕ ಸರ್ಕಾರದ ನೇಮಕಾತಿ ಪ್ರಕಟಣೆಗಳನ್ನು ನಿಯಮಿತವಾಗಿ ಪರಿಶೀಲಿಸುವುದು ಸೂಕ್ತ. ಅಧಿಕೃತ ಅಧಿಸೂಚನೆ ಪ್ರಕಟವಾದ ನಂತರವೇ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಿಕೊಳ್ಳುವುದು ಒಳಿತು.

Also Read :

ಗಾಜನೂರು ತುಂಗಾ ಡ್ಯಾಮ್ ಭರ್ತಿ : ಕರ್ನಾಟಕದ 10 ಪ್ರಮುಖ ಡ್ಯಾಮ್ ಗಳ ಜುಲೈ 8ರ ನೀರಿನ ಮಟ್ಟ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online