<?= $pageTitle ?>
Logo
ಮುಖಪುಟ ಓದುವುದು ಕೇಳು
Corporate

RRB ಯಲ್ಲಿ ಬಂಪರ್ ನೇಮಕಾತಿ : ಕೇಂದ್ರ ಸರ್ಕಾರಿ ಉದ್ಯೋಗದ ಕನಸು ನನಸಾಗಿಸಿಕೊಳ್ಳಿ

RRB ಯಲ್ಲಿ ಬಂಪರ್ ನೇಮಕಾತಿ : ಕೇಂದ್ರ ಸರ್ಕಾರಿ ಉದ್ಯೋಗದ ಕನಸು ನನಸಾಗಿಸಿಕೊಳ್ಳಿ
Summary: RRB Recruitment 2026: Golden opportunity for candidates looking for government jobs. Railway Recruitment Board has invited applications for a total of 6,565 technician posts. Candidates with a prescribed qualification including 10th class, ITI, diploma can apply.

BELAGAVI NEWS :

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಭಾರತೀಯ ರೈಲ್ವೆ ಇಲಾಖೆಯಿಂದ ಭರ್ಜರಿ ಅವಕಾಶ ಲಭ್ಯವಾಗಿದೆ. ರೈಲ್ವೆ ನೇಮಕಾತಿ ಮಂಡಳಿ ದೇಶಾದ್ಯಂತ ಖಾಲಿ ಇರುವ ಒಟ್ಟು 6,565 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮೂಲಕ ಟೆಕ್ನಿಷಿಯನ್ ಗ್ರೇಡ್ - I ಸಿಗ್ನಲ್ ಹಾಗೂ ಟೆಕ್ನಿಷಿಯನ್ ಗ್ರೇಡ್ - II ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅಭ್ಯರ್ಥಿಗಳು ಜೂನ್ 30, 2026 ರಿಂದ ಜುಲೈ 29, 2026 ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ, ಐಟಿಐ, ಡಿಪ್ಲೋಮಾ ಅಥವಾ ಬಿ.ಎಸ್.ಸಿ ವಿದ್ಯಾರ್ಥಿ ಹೊಂದಿರಬೇಕು. ವಯೋಮಿತಿ ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದ್ದು, ಸಾಮಾನ್ಯವಾಗಿ 18ರಿಂದ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೀಸಲಾತಿ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಲಭ್ಯವಿರುತ್ತದೆ.

ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಉದ್ಯೋಗಾವಕಾಶ ದೊರೆಯಲಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ಈ ನೇಮಕಾತಿ ನಡೆಯಲಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಸರಕಾರಿ ಉದ್ಯೋಗ ಪಡೆಯಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ.

ರೈಲ್ವೆ ಉದ್ಯೋಗಿಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು, ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದ ಬಳಿಕ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವುದು ಸೂಕ್ತ. ಕೇಂದ್ರ ಸರ್ಕಾರದ ಪ್ರತಿಷ್ಠಿತ ಇಲಾಖೆಯಾದ ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಬಯಸುವವರಿಗೆ ಈ ನೇಮಕಾತಿ ಅಭಿಯಾನ ಮಹತ್ವದ ಅವಕಾಶವೆಂದು ಪರಿಗಣಿಸಲಾಗಿದೆ.

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಪ್ರಕಟಿಸಿರುವ 6,565 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ಉತ್ತಮ ವೇತನದೊಂದಿಗೆ ಕೇಂದ್ರ ಸರ್ಕಾರದ ಸ್ಥಿರ ಉದ್ಯೋಗದ ಅವಕಾಶ ದೊರೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಎರಡು ಪ್ರಮುಖ ವಿಭಾಗಗಳ ಅಡಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿದ್ಯಾರ್ಥಿ ಹಾಗೂ ವಯೋಮಿತಿಯನ್ನು ಆಧರಿಸಿ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯಲ್ಲಿ ಟೆಕ್ನಿಷಿಯನ್ ಗ್ರೇಡ್-1 ವಿಭಾಗದ ಅಡಿಯಲ್ಲಿ ಒಟ್ಟು 332 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಏಳನೇ ವೇತನ ಆಯೋಗದ ಪ್ರಕಾರ ಆರಂಭಿಕ ಮಾಸಿಕ ವೇತನ ರೂ. 29,200 ನೀಡಲಾಗುತ್ತದೆ. ತಾಂತ್ರಿಕ ಜ್ಞಾನ ಮತ್ತು ವಿಶೇಷ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗಳು ಉತ್ತಮ ವೃತ್ತಿ ಅವಕಾಶವನ್ನು ಒದಗಿಸಲಿದೆ.

ಅದೇ ರೀತಿ, ಟೆಕ್ನಿಷಿಯನ್ ಗ್ರೇಡ್- 3 ವಿಭಾಗದ ಅಡಿಯಲ್ಲಿ ಅತಿ ಹೆಚ್ಚು ಅಂದರೆ 6,242 ಹುದ್ದೆಗಳು ಬರ್ತಿಯಾಗದಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನ ರೂ. 19900 ನಿಗದಿಪಡಿಸಲಾಗಿದೆ. ರೈಲ್ವೆಯ ವಿವಿಧ ತಾಂತ್ರಿಕ ವಿಭಾಗಗಳಲ್ಲಿ ಈ ಹುದ್ದೆಗಳು ಲಭ್ಯವಿದ್ದು, ದೇಶದ ವಿವಿಧ ವಲಯ ಗಳಲ್ಲಿ ನೇಮಕ ನಡೆಯಲಿದೆ.

ವಯೋಮಿತಿಯ ವಿಚಾರದಲ್ಲಿ ರೈಲ್ವೆ ಮಂಡಳಿಯು ಹುದ್ದೆಗಳಿಗೆ ಅನುಗುಣವಾಗಿ ಪ್ರತ್ಯೇಕ ಮಾನದಂಡಗಳನ್ನು ನಿಗದಿಪಡಿಸಿದೆ. ಟೆಕ್ನಿಷಿಯನ್ ಗ್ರೇಟ್ - 1 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 33 ವರ್ಷದೊಳಗಿನವರ ಆಗಿರಬೇಕು. ಇನ್ನು ಟೆಕ್ನಿಷಿಯನ್ ಗ್ರೇಟ್ -3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಇದಲ್ಲದೆ, ಕೇಂದ್ರ ಸರ್ಕಾರದ ಮೀಸಲಾತಿ ನಿಯಮಗಳ ಪ್ರಕಾರ ಎಸ್.ಸಿ,ಎಸ್ಟಿ, ಓಬಿಸಿ ಹಾಗೂ ಇತರೆ ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ವಯೋಮಿತಿ ಮತ್ತು ಅರ್ಹತಾ ಮಾನದಂಡಗಳನ್ನು ಪರಿಶೀಲಿಸುವುದು ಅಗತ್ಯ.

ಉತ್ತಮ ವೇತನ, ಉದ್ಯೋಗ ಭದ್ರತೆ ಹಾಗೂ ದೇಶದ ಅತಿ ದೊಡ್ಡ ಸರ್ಕಾರಿ ಸಂಸ್ಥೆ ಒಂದರಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡುತ್ತಿರುವ ಈ ನೇಮಕಾತಿ ಅಭಿಯಾನವು ನಿರುದ್ಯೋಗಿ ಯುವಕರಿಗೆ ಮಹತ್ವದ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿ ಒಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಟೆಕ್ನಿಷಿಯನ್ ಗ್ರೇಡ್-ಮೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ, ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ ಪೂರ್ಣಗೊಳಿಸಬೇಕು. ತಾಂತ್ರಿಕ ಕೌಶಲ್ಯ ಮತ್ತು ವೃತ್ತಿಪರ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಈ ಹುದ್ದೆಗಳು ಉತ್ತಮ ಅವಕಾಶವನ್ನು ಒದಗಿಸುತ್ತವೆ.

ಇನ್ನು ಟೆಕ್ನಿಷಿಯನ್ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಬಿ ಎಸ್ ಸಿ ಪದವಿ ಪಡೆದಿರಬೇಕು. ಪರ್ಯಾಯವಾಗಿ, ಇಂಜಿನಿಯರಿಂಗ್ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ತಾಂತ್ರಿಕ ಹಾಗೂ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಈ ಹುದ್ದೆಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ಸ್ಪರ್ಧಾತ್ಮಕ ರೀತಿಯಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಗಣಿತ, ತಾರ್ಕಿಕ ಸಾಮರ್ಥ್ಯ ಹಾಗೂ ಆರ್ಥಿಕ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳು ಕೇಳಲಾಗುವ ಸಾಧ್ಯತೆ ಇದೆ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ.

CBT ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಪ್ರಕ್ರಿಯೆಗೆ ಕರೆಯಲಾಗುತ್ತದೆ. ಈ ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸಿದ ವಿದ್ಯಾಹರ್ತೆ, ವಯೋಮಿತಿ, ಮೀಸಲಾತಿ ಹಾಗೂ ಇತರೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ದಾಖಲೆಗಳು ಸರಿಯಾಗಿರುವುದು ಕಡ್ಡಾಯವಾಗಿದ್ದು, ತಪ್ಪು ಮಾಹಿತಿ ನೀಡಿದ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಬಹುದು.

ಕೊನೆಯ ಹಂತದಲ್ಲಿ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ರೈಲ್ವೆ ಇಲಾಖೆಯ ಸೇವೆಗೆ ಅಗತ್ಯವಾದ ದೈಹಿಕ ಮತ್ತು ಆರೋಗ್ಯ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ಈ ಪರೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಿಗೆ ಅಂತಿಮವಾಗಿ ರೈಲ್ವೆ ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ನೀಡಲಾಗುತ್ತದೆ.

ಉತ್ತಮ ವೇತನ, ಉದ್ಯೋಗ ಭದ್ರತೆ ಹಾಗೂ ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಸಂಸ್ಥೆ ಒಂದರಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡುತ್ತಿರುವುದು ಈ ನೇಮಕಾತಿಯು ತಾಂತ್ರಿಕ ಶಿಕ್ಷಣ ಪಡೆದ ಯುವಕರಿಗೆ ಸುವರ್ಣ ಅವಕಾಶವಾಗಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಗಮನದಿಂದ ಓದಿ, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಸೂಕ್ತ.

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಈಗಾಗಲೇ 2565 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳಲ್ಲಿ ಸಾಕಷ್ಟು ಆಸಕ್ತಿ ಮೂಡಿಸಿದೆ. ಆದರೆ, ಪ್ರಸ್ತುತ ಪ್ರಕಟವಾಗಿರುವುದು ಕೇವಲ ಶಾರ್ಟ್ ನೋಟಿಫಿಕೇಶನ್ ಆಗಿರುವುದರಿಂದ ನೇಮಕಾತಿಯ ಸಂಪೂರ್ಣ ಮಾಹಿತಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅಭ್ಯರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿರುವ ಸಂಪೂರ್ಣ ಅಧಿಕೃತ ಅಧಿಸೂಚನೆಯನ್ನು ಜೂನ್ 30 2026 ರಂದು ಬಿಡುಗಡೆ ಮಾಡುವುದಾಗಿ ರೈಲ್ವೆ ಮಂಡಳಿಯು ತಿಳಿಸಿದೆ. ಈ ಸುಧೀರ್ಘ ಆದಿ ಸೂಚನೆಯಲ್ಲಿ ಹುದ್ದೆಗಳ ಸಂಪೂರ್ಣ ವಿವರ, ವಲಯವರು ಖಾಲಿ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆಗಳ ಸ್ಪಷ್ಟ ಮಾಹಿತಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಪರೀಕ್ಷಾ ಮಾದರಿ ಹಾಗೂ ಪಠ್ಯಕ್ರಮ ಸೇರಿದಂತೆ ಅಭ್ಯರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.

ಇದಲ್ಲದೆ, ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವಿಷಯವಾರು ಪಠ್ಯಕ್ರಮ, ಪ್ರಶ್ನೆಗಳ ಸ್ವರೂಪ, ನೆಗೆಟಿವ್ ಮಾರ್ಕಿಂಗ್ ಇದ್ದರೆ ಅದರ ವಿವರ ಹಾಗೂ ಆಯ್ಕೆ ಪ್ರಕ್ರಿಯೆ ಕುರಿತ ಸಂಪೂರ್ಣ ಮಾರ್ಗ ಸೂಚಿಗಳನ್ನು ಅಧಿ ಸೂಚನೆಯಲ್ಲಿ ಸೇರಿಸುವ ಸಾಧ್ಯತೆ ಇದೆ. ಹೀಗಾಗಿ ಅಭ್ಯರ್ಥಿಗಳು ಯಾವುದೇ ಗೊಂದಲವಿಲ್ಲದೆ ಅಧಿಕೃತ ನೋಟಿಫಿಕೇಶನ್ ಪ್ರಕಟವಾದ ಬಳಿಕ ಅರ್ಜಿ ಸಲ್ಲಿಸುವುದು ಉತ್ತಮ.

ಆನ್ಲೈನ್ ಅರ್ಜಿ ಪ್ರಕ್ರಿಯೆಯು ಸಹ ಜೂನ್ 30, 2026 ರಿಂದ ಆರಂಭವಾಗಲಿದ್ದು, ಜುಲೈ 29, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.

ಆದ್ದರಿಂದ ರೈಲ್ವೆ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಜೂನ್ 30ರಂದು ಪ್ರಕಟವಾಗಲಿರುವ ಸಂಪೂರ್ಣ ಅಧಿಸೂಚನೆಯನ್ನು ತಪ್ಪದೆ ಪರಿಶೀಲಿಸಿ, ತಮ್ಮ ಅರ್ಹತೆ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸಲು ಸಜ್ಜಾಗುವುದು ಸೂಕ್ತ, ದೇಶದ ಅತಿ ದೊಡ್ಡ ಸರ್ಕಾರಿ ಉದ್ಯೋಗಾವಕಾಶಗಳಲ್ಲಿ ಒಂದಾದ ಈ ನೇಮಕಾತಿ ಅಭಿಯಾನವು ಸಾವಿರಾರು ಯುವಕರಿಗೆ ಉದ್ಯೋಗದ ದಾರಿಯನ್ನು ತೆರೆಯುವ ನಿರೀಕ್ಷೆ ಇದೆ.

Also Read:

ಹೊಸ ಕನಸಿನ ಮನೆ ನೋಡಲು ಬಂದ ದೀಪಿಕಾ: ಬೇಬಿ ಬಂಪ್ ಲುಕ್ ಗೆ ನೆಟ್ಟಿಗಳಿಂದ ಮೆಚ್ಚುಗೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online