Belagavi news:
ಸಾರ್ವಜನಿಕ ವಲಯದ ಬ್ಯಾಂಕ್ ಗಳು ಹಾಗೂ ಎಲ್ ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಉದ್ಯಮಿ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ ವಿರುದ್ಧ ಕೇಂದ್ರೀಯ ತನಿಖಾ ದಳ ತನ್ನ ತನಿಕೆಯನ್ನು ತೀವ್ರಗೊಳಿಸಿದೆ. ₹27,337 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮ ಸೇರಿದಂತೆ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಈ ದಾಳಿಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ ನ ಮಾಜಿ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸುವೆ. ಬ್ಯಾಂಕ್ ಸಾಲ ದುರುಪಯೋಗ, ಆರ್ಥಿಕ ಅಕ್ರಮ ಹಾಗೂ ಹಣಕಾಸು ವಂಚನೆ ಆರೋಪಗಳ ಕುರಿತು ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಈ ಬಹುಕೋಟಿ ಹಗರಣದ ತನಿಖೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಭಾರಿ ನಷ್ಟ ಉಂಟು ಮಾಡಿದ ಆರೋಪದ ಹಿನ್ನೆಲೆ ಸಿಬಿಐ ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಈ ಪ್ರಕರಣ ಇದೀಗ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಅನಿಲ್ ಅಂಬಾನಿ ಸಿಬಿಐ ರೈಡ್ ಟ್ರೆಂಡ್ ಆಗುತ್ತಿದೆ.
ಅನಿಲ್ ಅಂಬಾನಿಗೆ ಸಿಬಿಐ ಶಾಕ್ ನೀಡಿದೆ :
ಸಾರ್ವಜನಿಕ ವಲಯದ ಬ್ಯಾಂಕ್ ಗಳು ಮತ್ತು ಎಲ್ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ನೇತೃತ್ವದ ರಿಲೈನ್ಸ್ ಕಮ್ಯುನಿಕೇಷನ್ ಲಿಮಿಟೆಡ್ ವಿರುದ್ಧ ಕೇಂದ್ರೀಯ ತನಿಖಾ ದಳ ಭಾರಿ ಕಾರ್ಯಾಚರಣೆ ನಡೆಸಿದೆ.
ರಿಲೈನ್ಸ್ ಕಮ್ಯುನಿಕೇಶನ್ ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಮಾಜಿ ಸಿಇಓ , ಸಿಎಫ್ಓ ಮತ್ತು ನಿರ್ದೇಶಕರ ನಿವಾಸಗಳ ಮೇಲೆ ಈ ದಾಳಿ ನಡೆಸಿದೆ. ಮುಂಬೈನ ವಿಶೇಷ ಸಿ ಬಿ ಐ ನ್ಯಾಯಾಲಯ ನೀಡಿದ ಸರ್ಚ್ ವಾರೆಂಟ್ ಆಧಾರದ ಮೇಲೆ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ. ಈ ದಾಳಿಯ ವೇಳೆ ಬ್ಯಾಂಕ್ ಸಾಲ ವ್ಯವಹಾರಗಳು, ಹಣಕಾಸು ದಾಖಲೆಗಳು ಮತ್ತು ಕಂಪನಿಯ ಒಳಾಂಗಣ ಮಾಹಿತಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳ ವಿರುದ್ಧ ಕಳೆದ ಕೆಲವು ತಿಂಗಳುಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್ ಐಸಿ ಸಲ್ಲಿಸಿದ್ದ ದೂರಿನ ಮೇರಿಗೆ ಈ ಕ್ರಮ ಕೈಗೊಳ್ಳಲಾಗಿದೆ. ತನಿಕಾ ಸಂಸ್ಥೆಗಳ ಪ್ರಕಾರ, ವಟ್ಟು ವಂಚನೆಯ ಮೊತ್ತ ₹27,337 ಕೋಟಿ ರೂಪಾಯಿ ತಲುಪಿದೆ ಎಂದು ಅಂದಾಜಿಸಲಾಗಿದೆ.
ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ತನಿಖೆ:
ದೇಶದ ಗಮನ ಸೆಳೆದಿರುವ ಈ ಬಹುಕೋಟಿ ಹಗರಣದ ತನಿಖೆ ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಿಬಿಐ ಮುಂದಿನ ದಿನಗಳಲ್ಲಿ ಇನ್ನಷ್ಟು ಶೋಧ ಕಾರ್ಯ ಹಾಗೂ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಅನಿಲ್ ಅಂಬಾನಿ ಕಂಪನಿ ಹಗರಣಕ್ಕೆ ಹೊಸ ಟ್ವಿಸ್ಟ್:
₹27,337 ಕೋಟಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ ವಿರುದ್ಧ ಸಿಬಿಐ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಈ ಬಹುಕೋಟಿ ಹಗರಣದ ಸಂಬಂಧ ಈಗಾಗಲೇ ಇಬ್ಬರು ಪ್ರಮುಖ ಅಧಿಕಾರಿಗಳನ್ನು ಸಿಬಿಐ ಬಂಧಿಸಿದೆ.
ಕಳೆದ ಏಪ್ರಿಲ್ 20ರಂದು ರಿಲೈನ್ಸ್ ಕಮ್ಯುನಿಕೇಷನ್ಸ್‌ನ ಜಂಟಿ ಅಧ್ಯಕ್ಷ ಡಿ. ವಿಶ್ವನಾಥ್ ಹಾಗೂ ಉಪಾಧ್ಯಕ್ಷ ಅನಿಲ್ ಕಲ್ಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಬ್ಯಾಂಕಿಂಗ್ ಅಕ್ರಮ ಮತ್ತು ಸಾಲದ ಹಣದ ದುರುಪಯೋಗದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಸ್ತುತ ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದೀಗ ಪ್ರಕರಣದ ತನಿಕೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಬಿಐ, ಬೆಂಗಳೂರು, ಮುಂಬೈ ಗುರು ಗ್ರಾಮ ಸೇರಿದಂತೆ ಹಲವು ನಗರಗಳಲ್ಲಿ ನಿರಂತರ ಶೋಧ ಕಾರ್ಯ ನಡೆಸುತ್ತಿದೆ. ಕಳೆದ ಕೆಲವು ತಿಂಗಳಲ್ಲಿ ದೇಶಾದ್ಯಂತ ಒಟ್ಟು 31 ಸ್ಥಳಗಳಲ್ಲಿ ತಪಾಸನೆ ನಡೆಸಿರುವ ಅಧಿಕಾರಿಗಳು, ಹಲವು ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಎಲ್ಐಸಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಹಿನ್ನೆಲೆ, ಈ ಪ್ರಕರಣ ಇದೀಗ ದೇಶದಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ಈತನಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಬೆಳವಣಿಗೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.
Also Read: