belagavi news :
ಬರ ನಿರ್ವಹಣೆಯಲ್ಲಿ ನಿರ್ಲಕ್ಷ ಮಾಡಿದರೆ ಕಠಿಣ ಕ್ರಮ :ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ
ರಾಜ್ಯದಲ್ಲಿ ಎದುರಾಗಿರುವ ಬರಗಾಲ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಸಿಎಂ, ಜನಪರ ಕೆಲಸಗಳಿಗೆ ಆದ್ಯತೆ ನೀಡದ ಅಧಿಕಾರಿಗಳನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಸರ್ವರನ್ನು ಒಳಗೊಂಡ ಪಾರದರ್ಶಕ ಆಡಳಿತ, ಅಭಿವೃದ್ಧಿ ಹಾಗೂ ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ಈ ಗುರಿ ಸಾಧಿಸಲು ಅಧಿಕಾರಿಗಳು ಜನಪರವಾಗಿ, ಕ್ರಿಯಾಶೀಲವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು.ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹತೆ ತಲುಪುವಂತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಸವಾದಿ ಶರಣರ ಸಮಾನತೆಯ ತತ್ವವೇ ನಮ್ಮ ಆಡಳಿತದ ಮಾರ್ಗ : ಸಿಎಂ ಡಿ.ಕೆ.ಶಿವಕುಮಾರ್
ಬಸವಕಲ್ಯಾಣ : ಬಸವಾದಿ ಶರಣರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳಲ್ಲಿ ತಾವು ನಂಬಿಕೆ ಹೊಂದಿದ್ದು, ಅದೇ ಆಸೆಯೊಂದಿಗೆ ಉತ್ತರ ಕರ್ನಾಟಕದ ಮೊದಲ ಪ್ರವಾಸವನ್ನು ಬಸವಕಲ್ಯಾಣದಿಂದ ಆರಂಭಿಸಿದ್ದೇವೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಒಂದೇ ವೇಗದಲ್ಲಿ ಸಾಗಬೇಕು. ಜನರ ಜೀವನ ಮಟ್ಟ ಸುಧಾರಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಿಎಂ ಹೇಳಿದರು.
ಬೀದರ್ ಮತ್ತು ಕಲಬುರ್ಗಿ ಜಿಲ್ಲೆಯ ಜನತೆಗೆ ನೀಡಿರುವ ಅಭೂತಪೂರ್ವ ಬೆಂಬಲ, ಪ್ರೀತಿ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಜನರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.
ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವುದು ಸರ್ಕಾರದ ಕರ್ತವ್ಯ ಜನಪರ ಆಡಳಿತದ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಧಿಕಾರಿಗಳ ಕಾರ್ಯಕ್ಷಮತೆಯೇ ಮುಖ್ಯ, ಫಲಿತಾಂಶ ನೀಡಬೇಕು : ಸಿಎಂ ಡಿ ಕೆ ಶಿವಕುಮಾರ್
ಆಡಳಿತದ ಪ್ರತಿಯೊಂದು ಹಂತದ ಅನುಭವ ತಮಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಮುಖ್ಯಮಂತ್ರಿ ಹುದ್ದೆಯವರೆಗೆ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿ ಬಂದಿರುವುದರಿಂದ ಆಡಳಿತ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಅರಿವು ಇದೆ ಎಂದು ಅವರು ತಿಳಿಸಿದ್ದಾರೆ.
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನೆಪಗಳನ್ನು ಒಪ್ಪಿಕೊಳ್ಳುವುದಿಲ್ಲ. ಜನರಿಗೆ ಸ್ಪಷ್ಟ ಪಲಿತಾಂಶ ನೀಡುವುದು ಅಧಿಕಾರಿಗಳ ಜವಾಬ್ದಾರಿ ಎಂದು ಸಿಎಂ ಅಧಿಕಾರಿಗಳಿಗೆ ಸಂದೇಶ ನೀಡಿದ್ದಾರೆ.
ಅಧಿಕಾರಿಗಳ ಕಾರ್ಯ ಕ್ಷಮತೆ ಉತ್ತಮವಾಗಿದ್ದರೆ ಅದು ನಾಡಿನ ಜನತೆಗೆ ಸಲ್ಲಿಸುವ ಸೇವೆಯಾಗುತ್ತದೆ. ಆದರೆ ಜನಪರವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಸಿಎಂ, ಯಾವುದೇ ಅರ್ಹ ಮತದಾರ ತನ್ನ ಮತದಾನ ಹಕ್ಕನ್ನು ಕೈಗೊಳ್ಳಬಾರದು ಎಂದು ಸೂಚಿಸಿದರು. ಮತದಾನದ ಹಕ್ಕು ರಕ್ಷಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದ್ದು, ಈ ವಿಚಾರದಲ್ಲಿ ಯಾವುದೇ ರಾಜಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿ.ಎಲ್.ಒ ಗಳು ಪ್ರತಿ ಮನೆಗೂ ಭೇಟಿ ನೀಡಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿದಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಗುರಿ : ಕೃಷ್ಣ-ಕಾವೇರಿ-ಗೋದಾವರಿ ನದೀಲ್ ಜೋಡಣೆಗೆ ಒತ್ತು ಎಂದ ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಅಭಿವೃದ್ಧಿ ಮತ್ತು ನೀರಿನ ನಿರ್ವಹಣೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಮಳೆಯ ಕೊರತೆ ಕುರಿತು ಆತಂಕ ವ್ಯಕ್ತವಾಗುತ್ತಿದ್ದರು, ರಾಜ್ಯದ ಪರಿಸ್ಥಿತಿ ಸದ್ಯ ಸಮಾಧಾನಕರವಾಗಿದೆ ಎಂದು ಅವರು ಹೇಳಿದ್ದಾರೆ.
ಅಂತರ್ರಾಜ್ಯ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಕೃಷ್ಣ, ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆ ಯೋಜನೆಯನ್ನು ಸುಮಾರು ಒಂದು ಲಕ್ಷ ಕೋಟಿ ವೆಚ್ಚದಲ್ಲಿ ಮುಂದುವರೆಸುವ ಪ್ರಸ್ತಾವಣೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಅವರು ಹೇಳಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರಾಜ್ಯದ ಜನರ ಹಿತಾಸಕ್ತಿ ರಕ್ಷಿಸುವ ನೀತಿನಲ್ಲಿ ಒಟ್ಟಾರೆ ಕಾರ್ಯನಿರ್ವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಸಿಎಂ,ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪ್ರಾರಂಭವಾದ ಎಲ್ಲಾ ಯೋಜನೆಗಳು ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.
ಅಭಿವೃದ್ಧಿಯ ಬೇಗ ಹೆಚ್ಚಿಸುವುದರ ಜೊತೆಗೆ ಆಡಳಿತದಲ್ಲಿ ಪಾರದರ್ಶಕತೆ, ಕಾರ್ಯಕ್ಷಮತೆ ಮತ್ತು ಜನಕೇಂದ್ರಿತ ಆಡಳಿತಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.