<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಕರ್ನಾಟಕ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ನೀಡಿ: ಕೇಂದ್ರ ವಿತ್ತ ಸಚಿವರಿಗೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ನೀಡಿ: ಕೇಂದ್ರ ವಿತ್ತ ಸಚಿವರಿಗೆ ಸಿಎಂ ಡಿಕೆಶಿ ಮನವಿ
Summary: Deputy Chief Minister DK Shivakumar visited the Union Minister's office in Delhi and requested for more grants and necessary cooperation for Karnataka's urban infrastructure, irrigation and road development projects.

belagavi news :

ಬೆಂಗಳೂರು ಸೇರಿದಂತೆ ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಕಾಮಗಾರಿಗಳು ಮತ್ತು ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಅಗತ್ಯ ಅನುದಾನ ಹಾಗೂ ಸಹಕಾರ ನೀಡುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರ ಕಚೇರಿಗೆ ಭೇಟಿ ನೀಡಿದ ಶಿವಕುಮಾರ ಅವರು, ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವ ಅಗತ್ಯವನ್ನು ಪ್ರಸ್ತಾಪಿಸಿದರು. ರಾಜ್ಯದ ನಗರ ಪ್ರದೇಶಗಳ ಮೂಲಸೌಕರ್ಯ ವಿಸ್ತರಣೆ, ಗ್ರಾಮ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಾದ ಹಣಕಾಸು ನೆರವು ಮತ್ತು ಸಹಕಾರ ಒದಗಿಸುವಂತೆ ಅವರು ಕೋರಿದರು.

ಈ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ, ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಇತರ ಹಿರಿಯಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಬೆಂಬಲ ದೊರೆತರೆ ಜನರಿಗೆ ಉತ್ತಮ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ ಎಂದು ಶಿವಕುಮಾರ್ ಅಭಿಪ್ರಾಯ ಪಟ್ಟರು.

ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ಅನುದಾನ ಯೋಜನೆ ಅಡಿ ರೂ.5000 ಕೋಟಿ ನೆರವು: ನಗರ ಮೂಲ ಸೌಕರ್ಯ, ನೀರಾವರಿ ಮತ್ತು ರಸ್ತೆ ಜಾಲಗಳಲ್ಲಿ ಹೆಚ್ಚಿನ ಆದ್ಯತೆಯ ಅಭಿವೃದ್ಧಿಯನ್ನುಗೊಳಿಸಲು SASCI ನ ಮುಕ್ತ ಘಟಕದ ಅಡಿಯಲ್ಲಿ ಹೆಚ್ಚುವರಿ ರೂ. 5,000 ಕೋಟಿಯನ್ನು ನೀಡಬೇಕು.

ರಾಜ್ಯದ ನಗರ ಹಾಗೂ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಮೂಲಸೌಕರ್ಯ ಕೊರತೆಗಳನ್ನು ನಿವಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ " ಬ್ರ್ಯಾಂಡ್ ಬೆಂಗಳೂರು" ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೊಂಡಿದ್ದು, ಇದರ ಅನುಷ್ಠಾನಕ್ಕೆ ವೇಗ ನೀಡಲು ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ ಅಡಿ ಕರ್ನಾಟಕದ ಪ್ರಮಾಣಕ ಹಂಚಿಕೆಯನ್ನು ಹೆಚ್ಚಿಸಿ ₹ 5,000 ಕೋಟಿ ಅನುದಾನ ನೀಡುವಂತೆ ಅವರು ಕೋರಿದ್ದಾರೆ. ದೇಶದ ಪ್ರಮುಖ ಆರ್ಥಿಕ ಕೇಂದ್ರಗಳಲ್ಲಿ ಒಂದಾಗಿರುವ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚುವರಿ ಹೂಡಿಕೆ ಅಗತ್ಯವಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ, ಗ್ರಾಮೀಣ ರಸ್ತೆ ಸಂಪರ್ಕ ಮತ್ತು ಮೂಲ ಸೌಕರ್ಯ ವೃದ್ಧಿಗೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆಯಡಿ 2026-27 ನೇ ಸಾಲಿನ ₹3500 ಕೋಟಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. 2025 26ನೇ ಸಾಲಿನಲ್ಲಿ ರಾಜ್ಯಕ್ಕೆ ಲಭಿಸಿದ್ದ ₹2000 ಕೋಟಿ ಹಂಚಿಕೆಯನ್ನು ಗ್ರಾಮೀಣ ರಸ್ತೆಗಳು, ಸೇತುವೆಗಳು ಹಾಗೂ ನೀರಾವರಿ ಕಾಮಗಾರಿಗಾಗಿ ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಅನುದಾನ ನೀಡುವುದು ಅಗತ್ಯ ಎಂದು ಅವರು ಕೇಂದ್ರದ ಗಮನ ಸೆಳೆದಿದ್ದಾರೆ.

ನಗರ ಮತ್ತು ಗ್ರಾಮೀಣ ಭಾಗಗಳ ಸಮತೋಲನಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಹೆಚ್ಚಿನ ಸಹಕಾರ ಹಾಗೂ ಹಣಕಾಸು ಬೆಂಬಲ ಅಗತ್ಯವಾಗಿದೆ ಎಂದು ಶಿವಕುಮಾರ್ ಒತ್ತಿ ಹೇಳಿದ್ದಾರೆ.

ರಾಜ್ಯದ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಸಹಕಾರ ಮತ್ತು ಅಗತ್ಯ ಅನುಮೋದನೆಗಳನ್ನು ನೀಡುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸುವುದರ ಜೊತೆಗೆ, 2023-24ರ ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾದ ₹ 5300 ಕೋಟಿ ಕೇಂದ್ರ ನೆರವು ಇನ್ನೂ ಬಿಡುಗಡೆಯಾಗಿಲ್ಲ ಎಂದು ಅವರು ಗಮನ ಸೆಳೆದಿದ್ದಾರೆ. ಯೋಜನೆಯ ವೇಗವಾದ ಅನುಷ್ಠಾನಕ್ಕಾಗಿ ಈ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಕೋರಿದ್ದಾರೆ.

ಕಳಸಾ - ಬಂಡೂರಿ ನಾಲಾಯೋಜನೆ ಕುರಿತು ಮಾತನಾಡಿದ ಅವರು, ಉತ್ತರ ಕರ್ನಾಟಕದ ಜನತೆಗೆ ಅತ್ಯಂತ ಮಹತ್ವದ ಕುಡಿಯುವ ನೀರಿನ ಯೋಜನೆಯಾಗಿರುವ ಇದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅರಣ್ಯ ಮಂಜೂರಾತಿಗಾಗಿ ಕಾಯುತ್ತಿದ್ದು, ಅಗತ್ಯ ಅನುಮೋದನೆಗಳನ್ನು ಶೀಘ್ರವಾಗಿ ನೀಡುವಂತೆ ಮನವಿ ಮಾಡಿದ್ದಾರೆ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ, ಅಂತಿಮ ಶಾಸನಬದ್ಧ ಅರಣ್ಯ ಮಂಜೂರಾತಿ ಇನ್ನೂ ಬಾಕಿ ಉಳಿದಿದ್ದು, ಯೋಜನೆಗೆ ಅನುಮೋದನೆ ನೀಡುವ ಮೂಲಕ ರಾಜ್ಯದ ಕುಡಿಯುವ ನೀರು ಮತ್ತು ವಿದ್ಯುತ್ ಅಗತ್ಯಗಳನ್ನು ಪೂರೈಸಲು ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

ಇದೆ ವೇಳೆ, ಕೃಷ್ಣ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೃಷ್ಣ ಜಲ ವಿವಾದ ನ್ಯಾಯಾಧಿಕರಣ -II ತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿರುವುದು ಹಾಗೂ ಯೋಜನೆಯನ್ನು ರಾಷ್ಟ್ರೀಯ ಯೋಜನೆಯದು ಅನುಮೋದಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರಾಜ್ಯದ ಕೃಷಿ, ಕುಡಿಯುವ ನೀರು ಹಾಗೂ ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಈ ಯೋಜನೆಗಳು ಅತ್ಯಂತ ಪ್ರಮುಖವಾಗಿದ್ದು, ಕೇಂದ್ರ ಸರ್ಕಾರದ ಸಕಾರಾತ್ಮಕ ಸ್ಪಂದನೆ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Also Read:

ಡಿಕೆಶಿ ಆರೋಪಕ್ಕೆ ಆರ್ ಅಶೋಕ್ ಕೌಂಟರ್; ಹೇಳಿದ್ದೇನು ಗೊತ್ತಾ?

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online